Asianet Suvarna News Asianet Suvarna News

ಕ್ಯಾರ್‌ ಆಯ್ತು, ಈಗ ಇನ್ನೊಂದು ಚಂಡಮಾರುತ ಭೀತಿ

ಸದ್ಯ ರಾಜ್ಯದಲ್ಲಿ  ಕ್ಯಾರ್ ಅಬ್ಬರ ತಗ್ಗಿದೆ. ಆದರೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

KSNDMC Alert About another Cyclone On October 29 To 31
Author
Bengaluru, First Published Oct 27, 2019, 10:48 AM IST

ಬೆಂಗಳೂರು [ಅ.27]:  ‘ಕ್ಯಾರ್‌’ ಚಂಡಮಾರುತದ ಪ್ರಭಾವ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆಯ ಅಬ್ಬರ ತಗ್ಗಿದೆ. ಆದರೆ, ತಿಂಗಳಾಂತ್ಯಕ್ಕೆ ಮತ್ತೊಂದು ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಕಂಡು ಬರುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಅರಬ್ಬಿ ಸಮುದ್ರದಲ್ಲಿ ರೂಪಗೊಂಡಿರುವ ‘ಕ್ಯಾರ್‌’ ಚಂಡಮಾರುತದ ಪ್ರಭಾವ ಇದೀಗ ಕಡಿಮೆಯಾರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ತಗ್ಗಿದೆ. ಆದರೆ, ದಕ್ಷಿಣ ತಮಿಳುನಾಡು ಹಾಗೂ ಶ್ರೀಲಂಕಾ ಭಾಗದಲ್ಲಿ ಮತ್ತೊಂದು ವಾಯುಭಾರ ಕುಸಿತ ಉಂಟಾಗಿದೆ. ಅದು ಅ.29ರ ನಂತರ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಸದ್ಯದ ಮಾಹಿತಿ ಪ್ರಕಾರ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಅ.29,30 ಹಾಗೂ 31ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಕಂಡು ಬಡುತ್ತಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ಮಾಹಿತಿ ನೀಡಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

‘ಯೆಲ್ಲೋ ಅಲರ್ಟ್‌’:  ಕ್ಯಾರ್‌ ಚಂಡಮಾರುತದಿಂದ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ‘ರೆಡ್‌ ಅಲರ್ಟ್‌’ ಎಚ್ಚರಿಕೆಯನ್ನು ವಾಪಸ್‌ ಪಡೆಯಲಾಗಿದೆ. ಆದರೆ, ಕರಾವಳಿಯ ಮೂರು ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂದಿನ 24 ಗಂಟೆಯಲ್ಲಿ 65 ರಿಂದ 115 ಮಿ.ಮೀ ವರೆಗೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

Follow Us:
Download App:
  • android
  • ios