* ರಾಜ್ಯದ ವಿವಿಧೆಡೆಗೆ ಹೆಚ್ಚುವರಿ ಕೆಎಸ್​ಆರ್​ಟಿಸಿ ಬಸ್‌ಗಳ ವ್ಯವಸ್ಥೆ* ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್* ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಸೆ. 8, 9ರಂದು ಸಂಚರಿಸಲಿರುವ ಬಸ್

ಬೆಂಗಳೂರು, (ಸೆ.07): ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. 

ಹೌದು...ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯದ ವಿವಿಧೆಡೆಗೆ ಸೆಪ್ಟೆಂಬರ್ 8, 9ರಂದು ಹೆಚ್ಚುವರಿಯಾಗಿ 1,000 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಬಿಡಲಾಗಿದೆ.

 ಜೊತೆಗೆ ಸೆಪ್ಟೆಂಬರ್ 12ರಂದು ಬೆಂಗಳೂರಿಗೆ ಆಗಮಿಸುವವರಿಗೆ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ.

ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ: ಇಲ್ಲಿದೆ ಮಾರ್ಗಸೂಚಿ

* ಕೆಂಪೇಗೌಡ ಬಸ್‌ ನಿಲ್ದಾಣದಿಂದ (ಮೆಜೆಸ್ಟಿಕ್) ಧರ್ಮಸ್ಥಳ, ಶಿವಮೊಗ್ಗ, ಕುಕ್ಕೆ ಸುಬ್ರಹ್ಮಣ್ಯ, ಶೃಂಗೇರಿ, ಮಂಗಳೂರು, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಸೇರಿ ಹಲವಡೆ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ.

* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೆಚ್ಚುವರಿ ಬಸ್‌ಗಳು ಕಾರ್ಯಚರಣೆ ಮಾಡಲಿವೆ.

* ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ಕಡೆಗೆ ಅಂದರೆ, ಮದುರೈ, ತಿರುಚಿ, ಚೆನ್ನೈ, ಕೊಯಮತತ್ಊರ್, ತಿರುಪತಿ, ವಿಜಯವಾಡ, ಹೈದರಾಬಾದ್ ಸೇರಿದಂತೆ ಮುಂತಾದ ಸ್ಥಳಗಳಿಗೆ ಹೋಗುವ ಬಸ್‌ಗಳು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಬಸ್ ಸಂಸ್ಥೆ ಬಸ್ ನಿಲ್ದಾಣದಿಂದ ಹೊರಡಲಿವೆ.

Scroll to load tweet…