ಮಹಾಶಿವರಾತ್ರಿ ಪ್ರಯುಕ್ತ ಕೆಎಸ್‌ಆರ್‌ಟಿಸಿಯಿಂದ 1,500 ಹೆಚ್ಚುವರಿ ಬಸ್ ಸೇವೆ; ನಿಮ್ಮೂರಿಗೆ ಬಸ್ ಇದೆಯಾ ನೋಡಿ.

ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಬೆಂಗಳೂರು ನಿವಾಸಿಗಳು ಗ್ರಾಮಿಣ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕೆಎಸ್‌ಆರ್‌ಟಿಸಿಯಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.

KSRTC 1500 additional bus services for Mahashivaratri festival here the traffic details sat

ಬೆಂಗಳೂರು (ಮಾ.04): ದೇಶಾದ್ಯಂತ ವಿಜೃಂಭಣೆಯಿಂದ ಆಚರಣೆ ಮಾಡುವ ಮಾ.8ರ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಬೆಂಗಳೂರಿನಲ್ಲಿರುವ ಜನರು ತಮ್ಮ ಗ್ರಾಮಿಣ ಪ್ರದೇಶಗಳಿಗೆ ತೆರಳಲು ಅನುಕೂಲ ಆಗುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ 1,500 ಹೆಚ್ಚುವರಿ ಬಸ್‌ಗಳ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ನಿಗಮದಿಂದ ತಿಳಿಸಲಾಗಿದೆ.

ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕರಾರಸಾ ನಿಗಮದಿಂದ 1500 ಹೆಚ್ಚುವರಿ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ದಿನಾಂಕ 08.03.2024 ರಂದು ಮಹಾಶಿವರಾತ್ರಿ ಹಾಗೂ ದಿನಾಂಕ:09.03.2024 ಮತ್ತು 10.03.2024 ವಾರಾಂತ್ಯ ದಿನಗಳಾಗಿರುವುದರಿಂದ ಕರಾರಸಾ ನಿಗಮ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 07.03.2024 ರಿಂದ 10.03.2024 ರವರೆಗೆ ಬೆಂಗಳೂರಿನಿAದ ಈ ಕೆಳಕಂಡ ಸ್ಥಳಗಳಿಗೆ 1500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 10.03.2024 ಹಾಗೂ 11.03.2024 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

* ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ ಮಾಡಲಾಗುತ್ತದೆ.
* ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡಲಾಗುತ್ತದೆ.
* ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಬಕೋಣA, ಚೆನ್ನೆöÊ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
* ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 
* ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.

ಕೆಎಸ್‌ಆರ್‌ಟಿಸಿ ಡ್ರೈವರ್-ಕಂ-ಕಂಡಕ್ಟರ್ 2000 ಹುದ್ದೆಗಳ ನೇಮಕಾತಿಗೆ ಮರುಚಾಲನೆ: ಮಾ.6ರಿಂದ ಫಿಸಿಕಲ್ ಟೆಸ್ಟ್

* ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
* ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ ನೀಡಲಾಗುವುದು.
* ಕರ್ನಾಟಕ ಹಾಗೂ ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ. 
* ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
* ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

Latest Videos
Follow Us:
Download App:
  • android
  • ios