Asianet Suvarna News Asianet Suvarna News

ಕೆಎಸ್ಸಾರ್ಟಿಸಿ- ಬಿಎಂಟಿಸಿ ಬಸ್‌ ಸಂಚಾರದಲ್ಲಿ ಉಂಟಾಗುತ್ತಾ ತೊಡಕು..?

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ‘ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಶನ್‌’ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ

KSRTC BMTC Employees Protest For Full fill Their Demands snr
Author
Bengaluru, First Published Nov 5, 2020, 8:21 AM IST

ಬೆಂಗಳೂರು (ನ.05):  ಕೊರೋನಾದಿಂದ ಮೃತರಾದ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ಪರಿಹಾರ, ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವುದು ಸೇರಿದಂತೆ ನೀಡುವುದು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಸಂಯೋಜಿತ ‘ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಶನ್‌’ ನೇತೃತ್ವದಲ್ಲಿ ನ.5ರಂದು ಬೆಳಗ್ಗೆ 11ಕ್ಕೆ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಲಿದೆ.

ಗುರುವಾರ ಸಾರಿಗೆ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಸ್ತೆಗಿಳಿಯಲಿದ್ದಾರೆ. ಆದರೆ ಈ ಪ್ರತಿಭಟನೆಯಿಂದ ಬಸ್‌ ಸಂಚಾರದಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದಿನಂತೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸಲಿವೆ. ಸಾರಿಗೆ ನೌಕರರು ಕೊರೋನಾದಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡಲಾಗುವುದು. ಹಾಗೆ ಲಾಕ್‌ಡೌನ್‌ ಅವಧಿಯಲ್ಲಿ ಪೂರ್ಣ ಪ್ರಮಾಣದ ವೇತನ ನೀಡುವುದಾಗಿ ಸಾರಿಗೆ ಸಚಿವರು ಹೇಳಿದ್ದರು. ಆದರೆ, ನೌಕರರ ಖಾತೆಯಲ್ಲಿದ್ದ ರಜೆಗಳನ್ನು ವಜಾ ಮಾಡಿಕೊಂಡು ವೇತನ ನೀಡಲಾಗಿದೆ ಎಂದು ಫೆಡರೇಶನ್‌ ಆರೋಪಿಸಿದೆ.

ಮಾಸ್ಕ್ ಹಾಕದಿದ್ರೆ ಬಸ್‌ನಲ್ಲೂ ಬೀಳುತ್ತದೆ ದಂಡ, ಜಾಗ್ರತೆ! .

ಬಸ್‌ ಕಾರ್ಯಾಚರಣೆ ಈ ಹಿಂದಿನಂತೆ ಯಥಾಸ್ಥಿತಿಗೆ ಮರಳುವವರೆಗೂ ಕಾರ್ಮಿಕರಿಗೆ ಪೂರ್ಣ ಪ್ರಮಾಣದ ವೇತನ ನೀಡಬೇಕು. ಕಾರ್ಮಿಕರ ಖಾತೆಯಿಂದ ಕಡಿತಗೊಳಿಸಿರುವ ರಜೆಗಳನ್ನು ಹಿಂದಿರುಗಿಸಬೇಕು.

 ಬಿಎಂಟಿಸಿಯಲ್ಲಿ ಪಾಳಿ ವ್ಯವಸ್ಥೆಯಲ್ಲಿ ಬಸ್‌ ಕಾರ್ಯಾಚರಣೆ ಮಾಡಬೇಕು. ನೌಕರರ ಅಂತರ್‌ ನಿಗಮ ವರ್ಗಾವಣೆಗೆ ಅವಕಾಶ ನೀಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪ್ಯಾಕೇಜ್‌ ರೂಪದಲ್ಲಿ ಸಾರಿಗೆ ನಿಗಮಗಳಿಗೆ ಅನುದಾನ ನೀಡಬೇಕು. ಖಾಸಗಿ ಸಹಭಾಗಿತ್ವದಲ್ಲಿ ಎಲೆಕ್ಟ್ರಿಕ್‌ ಬಸ್‌ಗಳ ಕಾರ್ಯಾಚರಣೆ ನಿರ್ಧಾರ ಕೈಬಿಟ್ಟು ಸರ್ಕಾರದ ಒಡೆತನದಲ್ಲೇ ಎಲೆಕ್ಟ್ರಿಕ್‌ ಬಸ್‌ ಕಾರ್ಯಾಚರಣೆ ಮಾಡಬೇಕು ಎಂದು ಒಕ್ಕೂಟ ಆಗ್ರಹಿಸಿದೆ.

Follow Us:
Download App:
  • android
  • ios