ಬೆಂಗಳೂರು, (ಜೂನ್.11):  ಸಾರಿಗೆ ಸಿಬ್ಬಂದಿಗಳಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ  ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ

ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ, NWKRTC, NEKRTC ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂ.ಗಳನ್ನು ಇಂದು (ಗುರುವಾರ)  ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದಿದ್ದಾರೆ. 

ಕೊರೋನಾ ಆತಂಕ: ಸ್ವಯಂ ನಿವೃತ್ತಿ ಯೋಜನೆ ಘೋಷಿಸಿದ ಕೆಎಸ್‌ಆರ್‌ಟಿಸಿ

ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿದ್ದ ಲಾಕ್‍ಡೌನ್‍ನಿಂದಾಗಿ ಸಾರಿಗೆ ಸಂಸ್ಥೆಗಳು ಅಪಾರ ನಷ್ಟ ಅನುಭವಿಸಿದ್ದರಿಂದ ಸಿಬ್ಬಂದಿಗಳಿಗೆ ವೇತನ ನೀಡಲು ಸರ್ಕಾರ ವಿಶೇಷ ಅನುದಾನ ನೀಡಬೇಕೆಂದು ನಾವು ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ಅಗತ್ಯ ಹಣ ಬಿಡುಗಡೆಯಾಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಅವರಿಗೆ ನಾನು ಧನ್ಯವಾದಗಳನ್ನು ತಿಳಿಸಬಯಸುತ್ತೇನೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.