ಬೆಂಗಳೂರು [ಡಿ.21]: ತಮಿಳುನಾಡಿನ ಮೇಲ್‌ ಮರವತ್ತೂರಿನ ಓಂ ಶಕ್ತಿ ದೇವಸ್ಥಾನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ಸಾಂದರ್ಭಿಕ ಒಪ್ಪಂದದ ಮೇಲೆ ಬಸ್‌ಗಳನ್ನು ಕೆಎಸ್‌ಆರ್‌ಟಿಸಿ ಒದಗಿಸಲಿದೆ. 

ಭಕ್ತಾದಿಗಳು ಬಸ್‌ ಪಡೆಯಲು ಅನುಕೂಲವಾಗುವಂತೆ ಬೆಂಗಳೂರು ನಗರದ ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆಯ ಬಸ್‌ ನಿಲ್ದಾಣದ ಘಟಕ 5 ಮತ್ತು 6ರಲ್ಲಿ ವಿಶೇಷ ಕೌಂಟರ್‌ ತೆರೆಯಲಾಗಿದೆ. 

55 ಆಸನ ಸಾಮರ್ಥ್ಯದ ಕರ್ನಾಟಕ ಸಾರಿಗೆ (ಕೆಂಪು ಬಸ್‌) ಬಸ್‌ಗೆ ಪ್ರತಿ ಕಿ.ಮೀ.41 ರು. ಇದೆ. ಅಂತರ್‌ರಾಜ್ಯ ಪರ್ಮಿಟ್‌ ದರಗಳೊಂದಿಗೆ ಸಾಂದರ್ಭಿಕ ಒಪ್ಪಂದದ ಮೇರೆಗೆ ಬಸ್‌ಗಳನ್ನು ಒದಗಿಸಲಾಗುತ್ತದೆ. 

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ...

ಬೆಂಗಳೂರು ನಗರ ಹೊರತುಪಡಿಸಿ ಇತರೆ ಸ್ಥಳಗಳಿಂದ ಬಸ್‌ಗಳ ಅಗತ್ಯವಿದ್ದರೆ ಸಮೀಪದ ಬಸ್‌ ನಿಲ್ದಾಣ ಮತ್ತು ಬಸ್‌ ಡಿಪೋಗಳನ್ನು ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7760990535ಗೆ ಸಂಪರ್ಕಿಸಬಹುದು ಎಂದು ನಿಗಮ ತಿಳಿಸಿದೆ.