Asianet Suvarna News Asianet Suvarna News

20% ವೇತನ ಏರಿಕೆಗೆ ಕೆಎಸ್‌ಆರ್‌ಟಿಸಿ ನೌಕರರ ಪಟ್ಟು

ಇಂದು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ. 

KSRTC Employees Demand For 20 Percent Salary Hike grg
Author
First Published Mar 16, 2023, 6:18 AM IST

ಬೆಂಗಳೂರು(ಮಾ.16):  ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಎಸ್‌ಆರ್‌ಟಿಸಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ನಡುವೆ ನಡೆದ ಸಭೆ ಯಾವುದೇ ಒಮ್ಮತಕ್ಕೆ ಬಂದಿಲ್ಲ. ಈ ಹಿನ್ನೆಲೆಯಲ್ಲಿ ವೇತನ ಹೆಚ್ಚಳದ ಚೆಂಡು ಮುಖ್ಯಮಂತ್ರಿಯವರ ಅಂಗಳ ತಲುಪಿದೆ.

ಸಾರಿಗೆ ನೌಕರರಿಗೆ ಶೇ.14ರಷ್ಟು ವೇತನ ಹೆಚ್ಚಿಸುವ ರಾಜ್ಯ ಸರ್ಕಾರದ ಭರವಸೆಯನ್ನು ಸಾರಿಗೆ ಸಂಘಟನೆಗಳ ಮುಖಂಡರು ತಿರಸ್ಕರಿಸಿದ್ದು, ಶೇ.20ರಷ್ಟು ವೇತನ ಹೆಚ್ಚಿಸಬೇಕು. 2020ರ ಜನವರಿ 1ರಿಂದ ಜಾರಿಯಾಗುವಂತೆ ಆದೇಶಿಸಬೇಕು ಎಂದು ಪಟ್ಟು ಹಿಡಿದಿದ್ದರು. ಈ ವಿಚಾರವನ್ನು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಭರವಸೆ ನೀಡಿದ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡಲಾಯಿತು. ಗುರುವಾರ ಮುಖ್ಯಮಂತ್ರಿಯವರು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಯುಗಾದಿಗೆ KSRTC ಬಸ್‌ ಡೌಟ್‌,ಮಾರ್ಚ್‌ 21ರಿಂದ ಸಾರಿಗೆ ನೌಕರರ ಮುಷ್ಕರ

21 ಅಥವಾ 24ರಿಂದ ಮುಷ್ಕರ?

ಕೆಎಸ್‌ಆರ್‌ಟಿಸಿ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಾಚ್‌ರ್‍ 21ಕ್ಕೆ ಮುಷ್ಕರ ನಡೆಸಲು ಕರೆ ನೀಡಿದೆ. ಆದರೆ, ಕರ್ನಾಟಕ ರಾಜ್ಯ ಸಾರಿಗೆ ನೌಕರರ ಕೂಟ ಯುಗಾದಿ ಹಿನ್ನೆಲೆಯಲ್ಲಿ ಮಾಚ್‌ರ್‍ 21ರಿಂದ ಮುಷ್ಕರ ಹಮ್ಮಿಕೊಂಡರೆ ಜನಸಾಮಾನ್ಯರಿಗೆ ತೊಂದರೆಯಾಗಲಿದೆ ಎಂಬ ಕಾರಣಕ್ಕೆ ಮಾಚ್‌ರ್‍ 24ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದೆ.

ಬುಧವಾರ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅಧ್ಯಕ್ಷತೆಯಲ್ಲಿ ನಾಲ್ಕು ನಿಗಮ ವ್ಯವಸ್ಥಾಪಕ ನಿರ್ದೇಶಕರು ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆ ಸತತ ನಾಲ್ಕು ಗಂಟೆಗಳ ಕಾಲ ನಡೆದರೂ ಒಮ್ಮತಕ್ಕೆ ಬರಲಾಗಲಿಲ್ಲ.

Follow Us:
Download App:
  • android
  • ios