ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರ ವಾಪಸ್: ನೌಕರರ ಮನವೊಲಿಸಿದ ಸಿಎಂ ಸಿದ್ದರಾಮಯ್ಯ!

ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ. ಡಿ.31 ರಂದು ಘೋಷಿಸಿದ್ದ ಮುಷ್ಕರವನ್ನು ನೌಕರರು ವಾಪಸ್ ಪಡೆದಿದ್ದಾರೆ. ಬಿಜೆಪಿ ಸರ್ಕಾರ ಬಾಕಿ ಉಳಿಸಿದ್ದ ಹಣವನ್ನು ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

KSRTC employees strike called off CM Siddaramaiah convinces employees sat

ಬೆಂಗಳೂರು (ಡಿ.30): ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿ.31ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ನೌಕರರು ಹಮ್ಮಿಕೊಂಡಿದ್ದ ಮುಷ್ಕರವನ್ನು ಕೈಬಿಡುವಂತೆ ಸಂಧಾನ ಸಭೆಯನ್ನು ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೌಕರರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸುವುದಾಗಿ ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಎಸ್‌ಆರ್‌ಟಿಸಿ ನೌಕರರು ಹಮ್ಮಿಕೊಂಡಿದ್ದ ಮುಷ್ಕರವನ್ನು ಕೈಬಿಡಲು ನಿರ್ಧರಿಸಿದ್ದಾರೆ ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, 'ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಚರ್ಚಿಸಿದರು.  ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಡಿ.31ರಿಂದ ಕೆಎಸ್‌ಆರ್‌ಟಿಸಿ ಬಸ್‌ ಅನಿರ್ದಿಷ್ಟಾವಧಿ ಮುಷ್ಕರ: ತಡೆಗೆ ಸರ್ಕಾರ ಕಸರತ್ತು

ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ. ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ' ಎಂದು ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios