ಪ್ರಯಾಣಿಕರಿಗೆ ಅಭಯ ಕೊಟ್ಟ ಕೆಎಸ್‌ಆರ್‌ಟಿಸಿ: ಅಪಘಾತ ಪರಿಹಾರ ಮೊತ್ತ 10 ಲಕ್ಷ ರೂ.ಗೆ ಹೆಚ್ಚಳ!
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗಳು ಅಪಘಾತವಾಗಿ ಪ್ರಯಾಣಿಕರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡುವ ಮೊತ್ತವನ್ನು 10 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
ಬೆಂಗಳೂರು (ಡಿ.27): ರಾಜ್ಯ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗಳು ಅಪಘಾತವಾಗಿ ಪ್ರಯಾಣಿಕರು ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಮೊತ್ತವನ್ನು ಕೊಡಲು ಕೆಎಸ್‌ಆರ್‌ಟಿಸಿ ನಿರ್ಧರಿಸಲಾಗಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ರೂ.3,00,000 ದಿಂದ ರೂ.10,00,000 (ಹತ್ತು ಲಕ್ಷ ರೂಪಾಯಿ ಗಳಿಗೆ ಹೆಚ್ಚಳ ಮಾಡಲಾಗಿದೆ. ಈ ಆದೇಶ 2024ರಿಂದ ಜಾರಿಗೆ ಬರುತ್ತದೆ.
200 ಸಂಚಿಕೆ ಪೂರೈಸಿದ ಭೂಮಿಗೆ ಬಂದ ಭಗವಂತ: ಹೊರಗೆ ಹಾಕೊಳ್ಳೋ ರಾಜಾ ಚೆಡ್ಡಿ ಎಲ್ಲಿ ಸಿಗುತ್ತೆಂದು ಕೇಳಿದ ಅಭಿಮಾನಿ!
ಮುಂದುವರೆದು, ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ ರೂ.50 ರಿಂದ ರೂ.99 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.1 ಮತ್ತು ರೂ.100 ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ರೂ.2 ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ಜ.1ರಿಂದ ಪಡೆಯಲಾಗುವುದು.
ಈ ಹಿಂದೆ ರೂ.100 ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ರೂ.1 ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು. ಈಗ ರೂ.1 ರಿಂದ ರೂ.49 ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲ. ಅದಕ್ಕಿಂತ ಹೆಚ್ಚಿನ ದರದ ಪ್ರಯಾಣಕ್ಕೆ ಪ್ರಯಾಣಿಕರಿಂದಲೇ ವಂತಿಕೆ ಸಂಗ್ರಹ ಮಾಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.
ಬಿಎಸ್‌ವೈ ಅವಧಿಯಲ್ಲಿ 40,000 ಕೋಟಿ ರೂ. ಕೋವಿಡ್ ಹಗರಣ: ತನಿಖೆ ಮಾಡದೇ ಕೈತೊಳೆದುಕೊಂಡ್ರಾ ಆರೋಗ್ಯ ಸಚಿವರು!