ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಆರೋಪಿಸಿದೆ. 

ಬೆಂಗಳೂರು (ಜೂ.26): ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆಯ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾಗಿ ತೋರಿಸಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಆರೋಪಿಸಿದೆ. ಭಾನುವಾರ ಈ ಕುರಿತು ಸ್ಪಷ್ಟೀಕರಣ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, ಮಂಡ್ಯ ಜಿಲ್ಲೆಯ ಹುಲ್ಲೇನಹಳ್ಳಿ ಬಳಿ ಕಿಟಕಿ ಮೂಲಕ ಬಸ್‌ ಹತ್ತುವ ವೇಳೆ ಮಹಿಳಾ ಪ್ರಯಾಣಿಕರೊಬ್ಬರ ಕೈ ಮುರಿದಿದೆ ಎಂದು ತಿರುಚಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಲಾಗಿದೆ. ಅದು ತಪ್ಪು ಮಾಹಿತಿಯಾಗಿದ್ದು ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿಸಿದೆ.

ಘಟನೆಯಲ್ಲಿ ಎಚ್‌.ಡಿ.ಕೋಟೆ ತಾಲೂಕಿನ ಮಾಗುಡಿಲು ನಿವಾಸಿ ಶಾಂತಕುಮಾರಿ(33) ಅವರ ಬಲಗೈ ತುಂಡಾಗಿದೆ. ನಂಜನಗೂಡಿನ ಹುಲ್ಲಹಳ್ಳಿ ನಿವಾಸಿ ರಾಜಮ್ಮ ಎಂಬುವರ ಬಲಗೈಗೆ ತೀವ್ರ ಗಾಯವಾಗಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಕೆಎಸ್‌ಆರ್‌ಟಿಸಿ ಸಂಸ್ಥೆ ಭರಿಸುತ್ತಿದೆ.

ಟಿವಿಗಾಗಿ ಶುರುವಾದ ಜಗಳ, ದಂಪತಿಯ ಸಾವಿನಲ್ಲಿ ಅಂತ್ಯ: ಅನಾಥರಾದ ಮಕ್ಕಳು

ಜೂನ್‌ 18ರಂದು ನಂಜನಗೂಡು-ಟಿ.ನರಸೀಪುರದ ನಡುವೆ ಸಂಚರಿಸುವ ಬಸ್‌ಗೆ ಬಸವರಾಜಪುರದ ಹತ್ತಿರ ಎದುರು ದಿಕ್ಕಿನಿಂದ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದು ಲಾರಿ ಡಿಕ್ಕಿ ಹೊಡೆದಿದೆ. ಲಾರಿ(ಟಿಎನ್‌-77-ಕ್ಯೂ-8735) ಚಾಲಕನ ವಿರುದ್ಧ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಆದರೆ ಅಪಘಾತದ ಘಟನೆಯ ವಿಡಿಯೋ ತಿರುಚಿ ಕಿಟಕಿ ಮೂಲಕ ಮಹಿಳೆ ಹತ್ತುವಾಗ ಕೈ ತುಂಡಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿ ಹರಡಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

Scroll to load tweet…


ತೀರ್ಥಕ್ಷೇತ್ರಗಳಲ್ಲಿ ಮುಂದುವರಿದ ವೀಕೆಂಡ್‌ ರಶ್‌: ಮಹಿಳೆಯರಿಗೆ ಉಚಿತ ಬಸ್‌ ಯೋಜನೆ ಜಾರಿ ಹಿನ್ನೆಲೆಯಲ್ಲಿ ವಾರದ ರಜಾದಿನವಾದ ಭಾನುವಾರ ರಾಜ್ಯದ ಧಾರ್ಮಿಕ ಕ್ಷೇತ್ರಗಳಿಗೆ ಮಹಿಳೆಯರು ತಂಡೋಪತಂಡವಾಗಿ ಆಗಮಿಸಿದರು. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಸವದತ್ತಿ ಯಲ್ಲಮ್ಮ, ಆಂಜನಾದ್ರಿ ಸೇರಿ ರಾಜ್ಯದ ಶಕ್ತಿ ಕ್ಷೇತ್ರಗಳಿಗೆ ತೆರಳುವ ಬಸ್ಸುಗಳು ಮಹಿಳೆಯರಿಂದ ತುಂಬಿ ತುಳುಕುತ್ತಿದ್ದುದು ಕಂಡು ಬಂತು. ಆದರೆ, ಕಳೆದ ವೀಕೆಂಡ್‌ಗೆ ಹೋಲಿಸಿದರೆ ಧಾರ್ಮಿಕ ಕ್ಷೇತ್ರಗಳಲ್ಲಿ ಈ ಬಾರಿ ರಶ್‌ ಸ್ವಲ್ಪ ಕಡಿಮೆ ಇತ್ತು.

ವೃಷಣ ಹಿಸುಕಿ ಗಾಯಗೊಳಿಸಿದವಗೆ 3 ವರ್ಷ ಜೈಲು: ಹೈಕೋರ್ಟ್‌ ಆದೇಶ

ಸೀಟಿಗಾಗಿ ಮಾತಿನ ಚಕಮಕಿ: ಸಾಧಾರಣವಾಗಿ ಪ್ರತಿವರ್ಷ ಆಷಾಢ ಮಾಸದಲ್ಲಿ ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಕಡಿಮೆ ಇರುತ್ತಿತ್ತು. ಆದರೆ, ಈ ಬಾರಿ ಜಾಸ್ತಿ ಇದ್ದು, ಕೆಲವೆಡೆ ಬಸ್ಸುಗಳಲ್ಲಿ ಸೀಟಿಗಾಗಿ ಮಹಿಳೆಯರ ನಡುವೆ ಮಾತಿನ ಚಕಮಕಿ ಕೂಡ ನಡೆದ ಬಗ್ಗೆ ವರದಿಯಾಗಿದೆ. ಗೋಕರ್ಣ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರಿ, ಕೊಲ್ಲೂರು ಸೇರಿದಂತೆ ಕರಾವಳಿ ಭಾಗದ ದೇವಾಲಯಗಳಲ್ಲಿ ಉತ್ತರ ಕರ್ನಾಟಕ ಭಾಗದಿಂದ ಬಂದ ಮಹಿಳಾ ಭಕ್ತಾದಿಗಳು ಹೆಚ್ಚಿದ್ದರು. ಸುಕ್ಷೇತ್ರ ಗುಡ್ಡಾಪುರ, ಕೂಡಲ ಸಂಗಮ, ಯಲಗೂರು, ಘತ್ತರಗಿ ಸೇರಿದಂತೆ ಸುತ್ತಮುತ್ತಲ ಧಾರ್ಮಿಕ ಕ್ಷೇತ್ರಗಳಿಗೆ ವಿಜಯಪುರದಿಂದ 12 ಹೆಚ್ಚುವರಿ ಬಸ್‌ಗಳನ್ನು ಬಿಡಲಾಗಿತ್ತು. ವಿಜಯಪುರದ ಗೋಳಗುಮ್ಮಟ ಆವರಣದಲ್ಲಿ ಮಹಿಳೆಯರ ದಂಡೇ ನೆರೆದಿತ್ತು.