Asianet Suvarna News Asianet Suvarna News

ನಾಡಹಬ್ಬ ದಸರಾಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೆಜ್

ಮೈಸೂರು ದಸರಾ-2022ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ಪ್ರವಾಸಿಗರ ದಂಡೇ ಹರಿದು ಬರಲಿದೆ. ಹೀಗಾಗಿ ದಸರಾ ವೀಕ್ಷಣೆಗೆ ಬರುವವರಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.

KSRTC offers tour package during Dasara festival gow
Author
First Published Sep 24, 2022, 4:12 PM IST

ವರದಿ; ಮಮತಾ ಮರ್ಧಾಳ ಏಷ್ಯಾನೆಟ್ ಸುವರ್ಣನ್ಯೂಸ್

ಬೆಂಗಳೂರು (ಸೆ.24): ನಾಡಹಬ್ಬ ಮೈಸೂರು ದಸರಾ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ  ನಿಗಮದಿಂದ ವಿಶೇಷ ಪ್ಯಾಕೇಜ್ ಸಾರಿಗೆ ವ್ಯವಸ್ಥೆ ಮಾಡಿದೆ. ಮೈಸೂರು ದಸರಾ-2022ನೇ ಸಾಲಿನ ದಸರಾ ಮಹೋತ್ಸವದ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ಪ್ರವಾಸಿಗರ ದಂಡೇ ಹರಿದು ಬರಲಿದೆ. ಹೀಗಾಗಿ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ದಸರಾ ಹಬ್ಬದ ರಜೆಯ ಹಿನ್ನಲೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರಿಗೆ ಸೇವೆಯನ್ನು ವಿಶೇಷವಾಗಿ ಒದಗಿಸ್ತಿದೆ. ಈಗಾಗಲೇ ಕಾರ್ಯಾಚರಣೆ ನಡೆಸುತ್ತಿರುವ  ಕರ್ನಾಟಕ ಸಾರಿಗೆ ರಾಜಹಂಸ, ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ ಹಾಗೂ ಅಂಬಾರಿ ಕ್ಲಬ್‌ ಕ್ಲಾಸ್‌ ಸಾರಿಗೆ ಸೇವೆಯನ್ನು ವಿಶೇಷ ಪ್ಯಾಕೆಜ್ ಮೂಲಕ ಒದಗಿಸಲಾಗ್ತಿದೆ.  ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಹಾಗೂ ಕೌಂಟರ್ ಗಳ ಮೂಲಕವೂ ಬುಕಿಂಗ್ ಮಾಡಬಹುದು. ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಂದ ಒಂದು ದಿನದ
ವಿಶೇಷ ಪ್ರವಾಸ ಸಾರಿಗೆ ಕೂಡ ಇರಲಿದ್ದು ಈ ಬಗ್ಗೆ ಮಾಹಿತಿ ಕೆಳಕಂಡಂತಿದೆ.

ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಕರ್ನಾಟಕ ಸಾರಿಗೆ ವಾಹನಗಳಿಂದ ಒಂದು ದಿನದ ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ:

1) ಗಿರಿದರ್ಶಿನಿ : ಬಂಡೀಪುರ, ಗೋಪಾಲಸ್ವಾಮಿ ಬೆಟ್ಟ, ಬಿಳಿಗಿರಿರಂಗನ ಬೆಟ್ಟ, ನಂಜನಗೂಡು ಮತ್ತು ಚಾಮುಂಡಿ ಬೆಟ್ಟ (ಪ್ರಯಾಣ ದರ ವಯಸ್ಥರಿಗೆ: ರೂ.400/- ಮತ್ತು ಮಕ್ಕಳಿಗೆ: ರೂ.250/-) 

2) ಜಲದರ್ಶಿನಿ: ಗೋಲ್ಡನ್ ಟೆಂಪಲ್ (ಬೈಲುಕುಪ್ಪೆ), ದುಬಾರೆ ಅರಣ್ಯ ನಿಸರ್ಗಧಾಮ, ರಾಜಾಸೀಟ್, ಹಾರಂಗಿ ಜಲಾಶಯ ಮತ್ತು ಕೆ.ಆರ್.ಎಸ್. (ಪ್ರಯಾಣ ದರ ವಯಸ್ಕರಿಗೆ: ರೂ.450/- ಮತ್ತು ಮಕ್ಕಳಿಗೆ: ರೂ.250/-)

3) ದೇವದರ್ಶಿನಿ : ನಂಜನಗೂಡು, ಬ್ಲಫ್, ಮುಡುಕುತೊರೆ, ತಲಕಾಡು, ಸೋಮನಾಥಪುರ, ಶ್ರೀರಂಗಪಟ್ಟಣ (ಪ್ರಯಾಣ ದರ ವಯಸ್ಥರಿಗೆ: ರೂ.300/- ಮತ್ತು ಮಕ್ಕಳಿಗೆ: ರೂ.175/-) 

4) ಮೈಸೂರು ನಗರ ದೀಪಾಲಂಕಾರ ದರ್ಶನ: ನಗರ ಬಸ್‌ ನಿಲ್ದಾಣದಿಂದ ಅರಮನೆ ರಸ್ತೆ, ಮೈಸೂರು ಕೇಂದ್ರೀಯ ಬಸ್ ನಿಲ್ದಾಣ ರಸ್ತೆ. ಎಲ್.ಐ.ಸಿ ಸರ್ಕಲ್ , ಬಂಬೂ ಬಜಾರ್ ರಸ್ತೆ, ರೈಲ್ವೆ ನಿಲ್ದಾಣ ವೃತ್ತ, ಜೆ.ಎಲ್.ಬಿ ರಸ್ತೆ(ಮೂಡ ಕಛೇರಿ ರಸ್ತೆ) ಮತ್ತು ನಗರ ಬಸ್‌ ನಿಲ್ದಾಣ (ಪ್ರಯಾಣ ದರ ವಯಸ್ಕರಿಗೆ: ರೂ.200/- ಮತ್ತು ಮಕ್ಕಳಿಗೆ ರೂ.150/-) 

5) ಮೈಸೂರು ದರ್ಶಿನಿ: ನಗರದ ಒಳಗೆ ವೋಲ್ವೋ ವಾಹನಗಳಿಂದ ನಂಜನಗೂಡು, ಚಾಮುಂಡಿಬೆಟ್ಟ, ಮೃಗಾಲಯ, ಅರಮನೆ, ಶ್ರೀರಂಗಪಟ್ಟಣ, ಕೆ.ಆರ್.ಎಸ್(ಪ್ರಯಾಣ ದರ ವಯಸ್ಕರಿಗೆ: ರೂ.400/- ಮತ್ತು ಮಕ್ಕಳಿಗೆ: ರೂ200/-)

Dasara Flower Show 2022: ಗಾಜಿನ ಮನೆಯಲ್ಲಿ ರಾಷ್ಟ್ರಪತಿ ಭವನ ನಿರ್ಮಾಣ

ಅಲ್ಲದೆ ಮೈಸೂರಿಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ ಐರಾವತ ಕ್ಲಬ್ ಕ್ಲಾಸ್ ವಾಹನಗಳಿಂದ ಒಂದು ದಿನದ
ವಿಶೇಷ ಪ್ರವಾಸ ಸಾರಿಗೆಗಳ ಕಾರ್ಯಾಚರಣೆ: 

1) ಮಡಿಕೇರಿ ಪ್ಯಾಕೇಜ್' ನಿಸರ್ಗಧಾಮ-ಗೋಲ್ಡನ್ ಟೆಂಪಲ್-ಹಾರಂಗಿ ಜಲಾಶಯ-ರಾಜಾ ಸೀಟ್ ಅಜ್ಜಫಾಲ್ಸ್ (ಪ್ರಯಾಣ ದರ ವಯಸ್ಕರಿಗೆ:(ರೂ.1200/- ಮತ್ತು ಮಕ್ಕಳಿಗೆ: ರೂ.1000/-)

2) ಊಟಿ ಪ್ಯಾಕೆಜ್; ಊಟಿ-ಬಟಾನಿಕಲ್ ಗಾರ್ಡನ್-ಇಟಾಲಿಯನ್ & ರೋಸ್ ಗಾರ್ಡನ್-ಬೋಟ್ ಹೌಸ್ (ಪ್ರಯಾಣ ದರ ವಯಸ್ಕರಿಗೆ: ರೂ.1500/- ಮತ್ತು ಮಕ್ಕಳಿಗೆ: ರೂ.1200/-)

ಕೆಎಸ್‌ಆರ್‌ಟಿಸಿಯಿಂದ ‘ಮಂಗಳೂರು ದಸರಾ ದರ್ಶನ’ ಪ್ಯಾಕೇಜ್‌ ಟೂರ್‌

ಮೈಸೂರು ನಗರ ದೀಪಾಲಂಕಾರ ದರ್ಶನ ಹೊರತುಪಡಿಸಿ ಬೆಳಗ್ಗೆ ಮೈಸೂರಿನಿಂದ ಹೊರಟು ಮೇಲ್ಕಂಡ ವಿವಿಧ ಸ್ಥಳಗಳನ್ನು ಸಂದರ್ಶಿಸಿದ ನಂತರ ಸಾಯಂಕಾಲ ಮೈಸೂರಿಗೆ ವಾಪಸ್ಸಾಗಲಿದೆ.

Follow Us:
Download App:
  • android
  • ios