ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ-2023 ಸ್ವೀಕರಿಸಿದ KSRTC
ಕೆಎಸ್‌ಆರ್‌ಟಿಸಿ ಸಂಸ್ಥೆಯು ಸಿಂಗಾಪುರದ ಸಂಸ್ಥೆಯಿಂದ ಕೊಡಲಾಗುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ ಪ್ರಶಸ್ತಿ ಪಡೆದುಕೊಂಡಿದೆ.

ಬೆಂಗಳೂರು (ಆ.17): ಶಕ್ತಿ ಯೋಜನೆ ಜಾರಿಗೊಳಿಸಿದ ಬೆನ್ನಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿಯಮಿತ ಸಂಸ್ಥೆಯು ಸಿಂಗಾಪುರದ ಸಂಸ್ಥೆಯಿಂದ ಕೊಡಲಾಗುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಿಂಗಾಪುರದಲ್ಲಿ ಗುರುವಾರ ನಡೆದ ಸುಸ್ಥಿರ ಜಾಗತಿಕ ಸಮಾವೇಶದಲ್ಲಿ (World Sustainability Congress) ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಿಂಗಾಪುರ ವಿಶ್ವ ಸುಸ್ಥಿರತೆ ಕಾಂಗ್ರೆಸ್‌ನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಆಯ್ಕೆಯಾಗಿತ್ತು. ಕೆಎಸ್‌ಆರ್‌ಟಿಸಿ ಸಂಸ್ಥೆಯು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿತ್ತು.
ನಟ ಉಪೇಂದ್ರನಿಗೆ ಬಿಗ್ ರಿಲೀಫ್: ಹಲಸೂರು ಗೇಟ್ ಠಾಣೆಯ ಎಫ್‌ಐಆರ್‌ಗೂ ತಡೆಕೊಟ್ಟ ಹೈಕೋರ್ಟ್
ಕೆಎಸ್‌ಆರ್‌ಟಿಸಿ ಸಂಸ್ಥೆಗೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ವಿಲ್ಬರ್ ಎನ್.ಜಿ., ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಪೈಡ್ ಪ್ರೋಫೆಶನಲ್ ಅಕೌಂಟೆಂಟ್ಸ್ ಹಾಗೂ ಅಟಾರ್ನಿ, ಕರೀನ ಲೆನೋರ್ ಎಸ್. ಬಯೋನ್, ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಅಫೀಸರ್, ಕಂಪ್ಲಯನ್ಸ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿಹಗಳು ಪ್ರಶಸ್ತಿ ಪ್ರದಾನ ಮಾಡಿದರು. ಇನ್ನು ಕೆಎಸ್‌ಆರ್‌ಟಿಸಿ ನಿಗಮದ ಪರವಾಗಿ ಶ್ರೀಮತಿ ಮಂಜುಳ ನಾಯ್ಕ್, ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು ಹಾಗೂ ಡಾ. ಲತಾ ಟಿ.ಎಸ್. ಮಂಡಳಿ ಕಾರ್ಯದರ್ಶಿ ಹಾಗೂ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಜಂಟಿಯಾಗಿ ಪ್ರಶಸ್ತಿ ಸ್ವೀಕರಿಸಿದರು.
ಹಳೆಯ ಬಸ್‌ಗಳಿಗೆ ನವೀಕರಣ ರೂಪ ಕೊಟ್ಟ ಕೆಎಸ್‌ಆರ್‌ಟಿಸಿ: ರಾಜ್ಯದಲ್ಲಿ 10 ಲಕ್ಷ ಕಿಲೋ ಮೀಟರ್ ಸಂಚರಿಸಿದ 8,100 ಬಸ್ಗಳಿವೆ. ಆದರೆ, ಕೇಂದ್ರ ಸರ್ಕಾರದಿಂದ 15 ವರ್ಷಗಳವರೆಗೆ ಬಸ್‌ಗಳನ್ನು ಬಳಕೆ ಮಾಡಬಹುದು ಎಂಬ ನಿಯಮವಿದೆ. 1000 ಬಸ್‌ಗಳನ್ನು ನವೀಕರಿಸಲಾಗುತ್ತಿದೆ. ಬಸ್ನಲ್ಲಿ ತುಕ್ಕು ಹಿಡಿದ ಭಾಗಗಳನ್ನು ತೆಗೆದು ಹೊಸ ಭಾಗಗಳನ್ನು ಜೋಡಿಸಿ ಬಸ್ಗೆ ಹೊಸ ಟಚ್ ನೀಡಲಾಗುತ್ತಿದೆ. ಕೆಎಸ್ಆರ್ಟಿಸಿಯು ಹಳೆ ಬಸ್‌ಗಳನ್ನು ನವೀಕರಿಸಿ ರಸ್ತೆಗಿಳಿಸುವ ಯೋಜನೆಯನ್ನು ಕೈಗೊಂಡಿದೆ. ಹೊಸ ಬಸ್ ಕೊಳ್ಳುವುದರ ಜತೆಗೆ ಬದಲಾಗಿ ಹಳೆ ಬಸ್ಗಳನ್ನೇ ನವೀಕರಿಸಿ ಓಡಿಸುವುದರಿಂದ ಹಣ ಉಳಿತಾಯವಾಗಲಿದೆ ಎಂಬ ಯೋಚನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ.
ನಂದಿನಿ ಉತ್ಪನ್ನ ಪ್ರಿಯರಿಗೆ ಗುಡ್ ನ್ಯೂಸ್: ನಂದಿನಿ ಸ್ವೀಟ್ಸ್ ಮೇಲೆ ಶೇ.20 ರಿಯಾಯಿತಿ
ಸಾರಿಗೆ ಇಲಾಖೆಯ ಶಕ್ತಿ ಯೋಜನೆ ಯಶಸ್ವಿ: ಇನ್ನು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗಿಳಿಸಿದೆ. ಇದರಿಂದ ಸರ್ಕಾರಿ ಬಸ್ಗಳ ಬಳಕೆಯು ಹೆಚ್ಚಾಗಿದ್ದು, ಮಹಿಳೆಯರಿಗೆ ಉಚಿತ ಸೇವೆಯನ್ನು ನೀಡುವಲ್ಲಿಯೂ ಸಹಾಯಕ ಆಗಿದೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಹಲವಾರು ತೀರ್ಥ ಕ್ಷೇತ್ರಗಳಿಗೆ ತೆರಳುವ ಬಸ್ಗಳಲ್ಲಿ ಸಂಚರಿಸುವ ಮಹಿಳೆಯರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ. ಕರ್ನಾಟಕ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ಬಸ್ಗಳಿಗೂ ಸಾಕಷ್ಟು ಒತ್ತು ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಬಯೋ-ಡೀಸೆಲ್ ಆಧಾರಿತ ಬಸ್ಗಳು ಸಂಚರಿಸುತ್ತಿವೆ. ಬೆಂಗಳೂರು ಮೈಸೂರು ರಸ್ತೆಯಲ್ಲಿ ವಿದ್ಯುತ್ ಬ್ಯಾಟರಿ ಚಾಲಿತ ಬಸ್ಗಳು ಸಹ ಸಂಚಾರ ಮಾಡುತ್ತಿವೆ.