Asianet Suvarna News Asianet Suvarna News

ಈ ವೀಕೆಂಡ್ ನಿಮ್ಮೂರಿಗೆ ತೆರಳುತ್ತಿದ್ದೀರಾ : ಇಲ್ಲಿದೆ ಗುಡ್ ನ್ಯೂಸ್

ರಾಜಧಾನಿ ಬೆಂಗಳೂರಿನಿಂದ ಈ ವೀಕೆಂಡ್ ನಿಮ್ಮೂರಿಗೆ ತೆರಳುತ್ತಿದ್ದೀರಾ, ಇಲ್ಲಿದೆ ನಿಮಗೆ ಗುಡ್ ನ್ಯೂಸ್. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ KSRTC ಹೆಚ್ಚುವರಿ ಬಸ್ ಸೇವೆ ಒದಗಿಸುತ್ತಿದೆ. 

KSRTC Run more Buses For This Weekend
Author
Bengaluru, First Published Jan 24, 2019, 7:55 AM IST

ಬೆಂಗಳೂರು: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಸಾರ್ವಜನಿಕರ ಅನುಕೂಲಕ್ಕಾಗಿ ಜ.25 ಮತ್ತು 26ರಂದು ನಗರದಿಂದ ರಾಜ್ಯದ ವಿವಿಧ ಭಾಗಗಳು ಸೇರಿದಂತೆ ಹೊರ ರಾಜ್ಯಗಳಿಗೆ 200 ಹೆಚ್ಚುವರಿ ಬಸ್‌ಗಳು ಕಾರ್ಯಾಚರಣೆ ಮಾಡುವುದಾಗಿ ತಿಳಿಸಿದೆ. 

ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯ ಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆ ಮಾಡಲಿವೆ. 

ಮೈಸೂರು ರಸ್ತೆಯ ಸ್ಯಾಟಲೆಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೆಚ್ಚುವರಿ ಬಸ್ ಸೌಲಭ್ಯವಿದೆ. ಶಾಂತಿನಗರದ ಘಟಕ 2 ಮತ್ತು 4ರ ಮುಂಭಾಗದಿಂದ ತಮಿಳುನಾಡು ಮತ್ತು ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳ ಮಧುರೈ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ, ಹೈದರಾಬಾದ್ ಮೊದಲಾದ ಸ್ಥಳಗಳಿಗೆ ವೋಲ್ವೋ ಬಸ್ ಸೇವೆ ಲಭ್ಯವಿದೆ. 

ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ, ಜಯನಗರ, ಜಯನಗರ 4 ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರ ೧೮ನೇ ಕ್ರಾಸ್, ಬನಶಂಕರಿ, ಜೀವನ್‌ಭೀಮಾನಗರ, ಗಂಗಾನಗರ, ಕೆಂಗೇರಿ ಉಪನಗರ ಮೊದಲಾದ ಸ್ಥಳಗಳಿಂದ ಪ್ರಯಾಣೀಕರ ಒತ್ತಡಕ್ಕೆ ಅನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಧರ್ಮಸ್ಥಳ ಮೊದಲಾದ ಸ್ಥಳಗಳಿಗೆ ಹೆಚ್ಚುವರಿ ಬಸ್ ಕಾರ್ಯಾಚರಣೆಗೆ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ರಾಜ್ಯ ಹಾಗೂ ಹೊರರಾಜ್ಯಗಳಿಂದ ನಗರಕ್ಕೆ ಆಗಮಿಸುವ ಸಾರ್ವಜನಿಕರಿಗೆ ಜ.27ರಂದು ಹೆಚ್ಚುವರಿ ಬಸ್ ಸೇವೆ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

Follow Us:
Download App:
  • android
  • ios