ಬೆಂಗಳೂರು (ಮೇ. 19): ಇಂದಿನಿಂದ ಲಾಕ್‌ಡೌನ್ ಸಡಿಲಿಕೆಯಾಗಿದ್ದು ಇಂದಿನಿಂದ ಕೆಎಸ್‌ಆರ್‌ಟಿಸಿ ಸಂಚಾರ ಶುರುವಾಗಿದೆ. ಪ್ರಯಾಣಿಕರು ಬಸ್‌ಸ್ಟ್ಯಾಂಡ್‌ನತ್ತ ಅಗಮಿಸುತ್ತಿದ್ದಾರೆ. ಎಲ್ಲೆಲ್ಲೆ ಯಾವ್ಯಾವ ಚಿತ್ರಣ ಇದೆ? ಇಲ್ಲಿದೆ ನೋಡಿ..!

ಚಿಕ್ಕಬಳ್ಳಾಪುರದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಪ್ರತಿಯೊಬ್ಬ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಿ, ಐಡಿ ಚೆಕ್ ಮಾಡಿ ಆಮೇಲೆ ಪ್ರಯಾಣಕ್ಕೆ ಅವಕಾಶ ಕೊಡಲಾಗುತ್ತಿದೆ.  ಬೇರೆ ಬೇರೆ ಊರುಗಳಿಗೆ ತೆರಳಲು ಪ್ರಯಾಣಿಕರು ಆಗಮಿಸುತ್ತಿದ್ದಾರೆ. 

"

ಕೋಲಾರದಲ್ಲಿ ಪ್ರಯಾಣಿಕರ ದಟ್ಟಣೆ ಜಾಸ್ತಿಯೇ ಇದೆ. ಇಲ್ಲಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಹೆಚ್ಚಾಗಿದ್ದು ಎಲ್ಲರೂ ಆಗಮಿಸುತ್ತಿದ್ದಾರೆ. 

"

ಮೈಸೂರಿನಲ್ಲಿ ಜನ ಮಾಸ್ಕ್ ಧರಿಸಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡಿದ್ದಾರೆ. ಪ್ರತಿಯೊಬ್ಬರಿಗೂ ಸ್ಕ್ರೀನಿಂಗ್ ಮಾಡಲಾಗುತ್ತಿದೆ. 

"

ಶಿವಮೊಗ್ಗದಲ್ಲಿ ಪ್ರಯಾಣಿಕರಿಗೆ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಅಧಿಕಾರಿಗಳು ಪ್ರತಿಯೊಬ್ಬರನ್ನು ಚೆಕ್ ಮಾಡಿ ಬಿಡುತ್ತಿದ್ದಾರೆ. 

"

ಮಂಗಳೂರಿನಲ್ಲಿಯೂ ಸಂಚಾರ ಆರಂಭವಾಗಿದೆ. ಜನ ಅಂತರ ಕಾಯ್ದುಕೊಂಡಿದ್ದಾರೆ. ಅಲ್ಲಿನ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ..! 

"