ಬೆಂಗಳೂರು, (ಡಿ.09): ಕರ್ನಾಟಕ ಬಂದ್....ಭಾರತ್ ಬಂದ್ ಆಯ್ತು ಇದೀಗ ಬೆಂಗಳೂರಿನಲ್ಲಿ ರೈತ ಪ್ರತಿಭಟನೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಮತ್ತೊಂದು ಪ್ರತಿಭಟನೆಗೆ ಸಾಕ್ಷಿಯಾಗಲಿದೆ.

ಹೌದು...ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಹೀಗಾಗಿ ಗುರುವಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿ ವಿವಿಧ ವಿಭಾಗಗಳ ಸಾರಿಗೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ.

ಬೆಂಗಳೂರಿನ ಜನರಿಗೆ ಇಂದು ಟ್ರಾಫಿಕ್ ಬಿಸಿ; ವಾಹನ ಸವಾರರೇ ಈ ಮಾರ್ಗಗಳಲ್ಲಿ ಹೋಗಬೇಡಿ

ಈ ಸಾರಿಗೆ ನೌಕರರ ಜಾಥಾ ನಾಳೆ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಆರಂಭವಾಗಲಿದೆ. ಅಲ್ಲಿಂದ ಸಾರಿಗೆ ನೌಕರರ ನಡಿಗೆ- ಸರ್ಕಾರಿ ನೌಕರರಾಗುವ ಕಡೆಗೆ ಎಂಬ ಘೋಷಣೆಯೊಂದಿಗೆ ವಿಧಾನಸೌಧಧವರೆಗೆ ಸಾರಿಗೆ ನೌಕರರು ಜಾಥಾ ಹೊರಡಲಿದ್ದಾರೆ. 

ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ಎನ್ ಈಕೆಆರ್ ಟಿಸಿ ಸೇರಿ ರಾಜ್ಯದಲ್ಲಿ ಸುಮಾರು ಒಂದು ಲಕ್ಷದ ನಲವತ್ತು ಸಾವಿರ ಸಾರಿಗೆ ನೌಕರರು ಇದ್ದಾರೆ. ಈ ಜಾಥಾದಲ್ಲಿ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್, ನಂಜಾವಧೂತ ಸ್ವಾಮೀಜಿ ಹಾಗೂ ಚಂದ್ರಶೇಖರ ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.