ಬೆಂಗಳೂರು, (ಆ.17) : ಓಣಂ ಹಬ್ಬದ ಪ್ರಯುಕ್ತ ಕೇರಳ ಸಾರ್ವಜನಿಕರ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ವಿಶೇಷ ಬಸ್ ವ್ಯವಸ್ಥೆ ಮಾಡಿದೆ. 

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇಂದು (ಸೋಮವಾರ) ಪ್ರಕಟಣೆ ಹೊರಡಿಸಿದ್ದು, ಓಣಂ ಹಬ್ಬಕ್ಕೆ  ಬೆಂಗಳೂರಿನಿಂದ ಕೇರಳಕ್ಕೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಆಗಸ್ಟ್ 24ರಿಂದ ಸೆಪ್ಟೆಂಬರ್ 6ರವರೆಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.

ಪುಂಡರ ವಿರುದ್ಧ ಕ್ರಮಕ್ಕೆ ಮುಂದಾದ ಸಿಎಂ, ಕಂಗಾನ ಮಾತಿಗೆ ಸೊನಾಕ್ಷಿ ಗರಂ: ಆ.17ರ ಟಾಪ್ 10 ಸುದ್ದಿ!

ಆದ್ರೆ, ಸೇವ ಸಿಂಧು ಇರುವ ಪ್ರಯಾಣಿಕರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಕೆಎಸ್ ಆರ್ ಟಿಸಿ ವೆಬ್ ಸೆಟ್ ಮೂಲಕ ಸೀಟ್ ಬುಕಿಂಗ್ ಮಾಡಬಹುದು. 

* ಬೆಂಗಳೂರಿನಿಂದ ಕಣ್ಣೂರು, ಎರ್ನಾಕುಲಂ, ಕಾನ್ಹಂಗಾಡ್, ಕಾಸರಗೂಡು, ಕೊಟ್ಟಾಯಂ, ಕಲ್ಲಿಕೋಟೆ, ಪಾಲಘಾಟ್, ತ್ರಿಶೂರು, ತಿರುವನಂತಪುರಂ ಮತ್ತು ವಡಕರಾ.

* ಮೈಸೂರಿನಿಂದ ತಿರುವನಂತಪುರಂ, ಎರ್ನಾಕುಲಂ ಮತ್ತು ಕೊಟ್ಟಾಯಂ ಹಾಗೂ ಸದರಿ ಸ್ಥಳಗಳಿಂದ ವಾಪಸ್ ಮೈಸೂರಿಗೆ ಈ ಬಸ್‌ಗಳಿ ಓಡಾಡಲಿವೆ.