ಬಿಜೆಪಿ ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸಕ್ಕೆ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅಭಿಮಾನಿಗಳಿಂದ ಮುತ್ತಿಗೆ!
ಡಾ.ರಾಜಕುಮಾರ ಕುಟುಂಬದ ಬಗ್ಗೆ ಹಗುರವಾಗಿ ಮಾತಾಡಿದ್ದಾರೆಂದು ಆರೋಪಿಸಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಬಿಜೆಪಿ ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಬೆಂಗಳೂರು (ಜೂ.8): ಡಾ.ರಾಜಕುಮಾರ ಕುಟುಂಬದ ಬಗ್ಗೆ ಹಗುರವಾಗಿ ಮಾತಾಡಿದ್ದಾರೆಂದು ಆರೋಪಿಸಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿಮಾನಿಗಳು ಬಿಜೆಪಿ ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಶಿವರಾಜ್ ಕುಮಾರ್ ಬಗ್ಗೆ ರಾಜ್ ಕುಮಾರ್ ಕುಟುಂಬದ ಬಗ್ಗೆ ಕುಮಾರ ಬಂಗಾರಪ್ಪ ಲಘುವಾಗಿ ಮಾತಾಡಿರುವುದು ನಮಗೆ ನೋವುಂಟು ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ ಅಭಿಮಾನಿಗಳು ಗೇಟ್ ಒಳಗೆ ನುಗ್ಗಿ ಧಿಕ್ಕಾರ ಕೂಗಿದರು. ಅಲ್ಲದೇ ಕುಮಾರ ಬಂಗಾರಪ್ಪ ಹೊರಗೆ ಬಂದು ಕ್ಷಮೆ ಕೇಳುವವರಿಗೆ ಇಲ್ಲಿಂದ ಕದಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತೊಮ್ಮೆ ಸೋತ ಗೀತಾ ಶಿವರಾಜ್ ಕುಮಾರ್, ದೊಡ್ಮನೆ ಸೊಸೆಗೆ ಒಲಿಯದ ಎಂಪಿ ಪಟ್ಟ!
ಘಟನೆ ವಿಕೋಪಕ್ಕೆ ಹೋಗುವ ಹಿನ್ನೆಲೆ ತಕ್ಷಣ ಕುಮಾರ ಬಂಗಾರಪ್ಪ ನಿವಾಸಕ್ಕೆ ಕೆಎಸ್‌ಆರ್‌ಪಿ ತುಕಡಿ ಆಗಮಿಸಿ, ಮನೆ ಬಾಗಿಲಿನಿಂದ ಹೊರಹೋಗುವಂತೆ ಪ್ರತಿಭಟನಾಕಾರರಿಗೆ ಪೊಲೀಸರು ವಾರ್ನಿಂಗ್ ಮಾಡಿದರು. ಈ ವೇಳೆ ಕೆಲವರನ್ನು ವಶಕ್ಕೆ ಪಡೆದ ಪೊಲೀಸರು. ಸದ್ಯ ಎರಡು ಕೆಎಸ್‌ಆರ್‌ಪಿ ತುಕಡಿ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಏನಿದು ಘಟನೆ?
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ ವಿರುದ್ಧ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲುವು ಸಾಧಿಸಿದ್ದಕ್ಕೆ ಕುಮಾರ ಬಂಗಾರಪ್ಪ ವ್ಯಂಗ್ಯ ಮಾಡಿದ್ದರು. 'ನನ್ನ ತಂಗಿಯ ಗಂಡ ಡಾ ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರು ಜಾತ್ರೆಗಳಲ್ಲಿ ಕುಣಿಯುವ ಕೆಲಸ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ವ್ಯಂಗ್ಯ ಮಾಡಿ ಪೋಸ್ಟ್ ಮಾಡಿದ್ದರು ಅದೇ ಪೋಸ್ಟ್ ನಲ್ಲಿ ಶಿವರಾಜ್ ಕುಮಾರ ಹಾಗೂ ಗೀತಾ ವಿರುದ್ಧ ಹರಿಹಾಯ್ದು ಬಿವೈ ರಾಘವೇಂದ್ರ ಗೆಲುವು ಸಾಧಿಸಿದ್ದಕ್ಕೆ ಅಭಿನಂದಿಸಿದ್ದರು. ಇದು ಶಿವರಾಜ್ ಕುಮಾರ್ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿ ಇದೀಗ ಕುಮಾರ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.