ಟೆಂಡರ್ ವಿಳಂಬ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ 250 ರೀತಿ ಔಷಧ ಬಂದ್!

 ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಟೆಂಡರ್‌ ವಿಳಂಬದಿಂದಾಗಿ 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ.

Lack of medicines in Karnataka government hospitals due to tender delay rav

 ಬೆಂಗಳೂರು (ನ.19): ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಟೆಂಡರ್‌ ವಿಳಂಬದಿಂದಾಗಿ 250 ರೀತಿಯ ಔಷಧಗಳ ಪೂರೈಕೆ ಸ್ಥಗಿತಗೊಂಡಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಗಳ ಕೊರತೆ ಮುಂದುವರೆದಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಅಲ್ಬುಮಿನಿ, ಆ್ಯಂಪ್ಸಿಲಿನ್, ಲೆವೊಥೈರಾಕ್ಸಿನ್, ವಿಲ್ಡಗ್ಲೀಪ್ಟನ್, ಪ್ಯಾರಸಿಟಮಲ್, ನ್ಯುಸ್ಟೊಜಿಮೈನ್, ಸಬ್ಲೋಟೊಮಲ್, ಅಸ್ಟೊಪೈನ್ ಸೇರಿದಂತೆ ವಿವಿಧ ಔಷಧಗಳ ಪೂರೈಕೆ ಇಲ್ಲ. ಟೆಂಡರ್ ವಿಳಂಬದಿಂದಲೇ ಈ ಸಮಸ್ಯೆಯಾಗಿದೆ ಎಂದು ತಿಳಿದುಬಂದಿದೆ.

ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದನ್ನು ನಿರಾಕರಿಸಿದ್ದು, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಿಂದ ಔಷಧ ಖರೀದಿಗೆ ಟೆಂಡರ್‌ ಕರೆಯಲು ವಿಳಂಬವಾಗಿದೆ. ಆದರೆ 44 ರೀತಿಯ ಅಗತ್ಯ ಔಷಧ ಸೇರಿ ಹಲವು ಔಷಧಗಳನ್ನು ಸ್ಥಳೀಯವಾಗಿಯೇ ಖರೀದಿ ಮಾಡಲು ಅನುಮತಿ ನೀಡಲಾಗಿದೆ.

ವಕ್ಫ್ ವಿರುದ್ಧ ಚಿಕ್ಕಬಳ್ಳಾಪುರದಲ್ಲಿ ಇಂದು ಬಿಜೆಪಿ ಬೃಹತ್ ಪ್ರತಿಭಟನೆ!

ಹೀಗಾಗಿ ಜಿಲ್ಲಾ ಮಟ್ಟದ ಸಮಿತಿಗಳಿಂದಲೇ ಖರೀದಿ ಮಾಡಲಾಗುತ್ತಿದೆ. ಉಳಿದಂತೆ ತುರ್ತು ಔಷಧಗಳ ದಾಸ್ತಾನು ಕೂಡ ಲಭ್ಯವಿದ್ದು, ಶೇ.70ರಷ್ಟು ಔಷಧಗಳು ಲಭ್ಯವಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆ ಇಲ್ಲ. ನಮ್ಮ ಸರ್ಕಾರ ಬಂದ ಆರಂಭದಲ್ಲಿ ಕೇವಲ ಶೇ.40ರಷ್ಟು ಔಷಧ ಮಾತ್ರ ಸಿಗುತ್ತಿತ್ತು. ಉಳಿದ ಔಷಧಗಳನ್ನು ಆಸ್ಪತ್ರೆಗಳಲ್ಲೇ ಖರೀದಿ ಮಾಡಲಾಗುತ್ತಿತ್ತು. ಈಗ ಶೇ.75ರಷ್ಟು ವೈದ್ಯಕೀಯ ಸರಬರಾಜು ನಿಗಮದಿಂದಲೇ ಔಷಧ ಪೂರೈಕೆಯಾಗುತ್ತಿದೆ ಎಂದರು.

Latest Videos
Follow Us:
Download App:
  • android
  • ios