ಸಕಲೇಶಪುರದಲ್ಲಿ ಭಾರಿ ಮಳೆಯಿಂದ ಗುಡ್ಡ ಕುಸಿದು ಹೆದ್ದಾರಿ ಬಂದ್ ಆಗಿದೆ. ವಾಹನದ ಮೇಲೆ ಗುಡ್ಡ ಕುಸಿದ ಅವಘಡ ಸಂಭವಿಸಿದೆ. ಬೆಂಗಳೂರು-ಮಂಗಳೂರು ಹೆದ್ದಾರಿ 75ರ ಸಂಚಾರ ಬಂದ್ ಆಗಿದ್ದು, ಬದಲಿ ಮಾರ್ಗ ಬಳಸಲು ಸೂಚಿಸಲಾಗಿದೆ.
ಹಾಸನ (ಆ.16) ಕರ್ನಾಟಕದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. ಸಕಲೇಶಪುರ ಸುತ್ತ ಮುತ್ತ ಸುರಿಯುತ್ತಿರುವ ಭಾರಿ ಮಳೆಯಿಂದ ಶಿರಾಡಿ ಘಾಟ್‌ನ ಹಲವೆಡೆ ಗುಡ್ಡ ಕುಸಿದಿದೆ. ಮಾರನಹಳ್ಳಿ ಬಳಿ ಗುಡ್ಡ ಕುಸಿದ ಬೆನ್ನಲ್ಲೇ ಶಿರಾಡಿ ಘಾಟ್‌ನನಲ್ಲಿ ವಾಹನಗಳ ಮೇಲೆ ಗುಡ್ಡ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಗುಡ್ಡ ಕುಸಿದು ವಾಹನ ಜಖಂ ಆಗಿದೆ. ಗುಡ್ಡ ಕುಸಿತದಿಂದ ಶಿರಾಡಿ ಘಾಟ್ ಸಂಚಾರ ಬಂದ್ ಆಗಿದೆ. ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್ ಹೆದ್ದಾರಿ ಸಂಚಾರ ಬಂದ್ ಮಾಡಲಾಗಿದೆ. ಇದೀಗ ಬದಲಿ ಮಾರ್ಗವಾಗಿ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚಿಸಲಾಗಿದೆ.
ಗುಡ್ಡ ಕುಸಿದ ಪರಿಣಾಮ ಶಿರಾಡಿ ಘಾಟ್‌ನಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದೆ. ಇದೇ ವೇಳೆ ಹಲೆವೆಡೆ ಗುಡ್ಡ ಕುಸಿದಿದೆ. ಹೀಗಾಗಿ ವಾಹನಗಳ ಮೇಲೆ ಕುಸಿದು ಬಿದ್ದಿದೆ. ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿದ ಪರಿಣಾಮ ಕಾರೊಂದು ಜಖಂಗೊಂಡಿದೆ. ಸಂಚಾರ ಮಾರ್ಗ ಬಂದ್ ಆಗಿರುವ ಕಾರಣ ಭಾರಿ ಸಂಖ್ಯೆಯಲ್ಲಿ ವಾಹನಗಳು ಸಕಲೇಶಪುರದಿಂದ ಶಿರಾಡಿ ಘಾಟ್ ನಡುವೆ ಜಾಮ್ ಆಗಿದೆ. ವಾರಂತ್ಯದ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ವಾಹನ ಸಂಚಾರವಿದೆ.
ಚಾರ್ಮಾಡಿ ಘಾಟ್ ರಸ್ತೆ ಬಳಸಲು ಮನವಿ
ರಸ್ತೆ ಮೇಲೆ ಗುಡ್ಡ ಕುಸಿದಿದೆ. ಮಾರನಹಳ್ಳಿ ಬಳಿ ಮಾತ್ರವಲ್ಲ, ಶಿರಾಡಿಯ ಹಲವು ಕಡೆ ಗುಡ್ಡ ಕುಸಿದಿದೆ. ಕೆಲವೆಡೆ ಮರಗಳು ರಸ್ತೆ ಮೇಲೆ ಬಿದ್ದಿದೆ. ಹೀಗಾಗಿ ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದೀಗ ರಸ್ತೆಮೇಲೆ ಬಿದ್ದಿರುವ ಮಣ್ಣು, ಮರಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇದೇ ವೇಳೆ ಹಾಸನ ಜಿಲ್ಲಾಡಳಿತ ವಾಹನ ಸವಾರರಲ್ಲಿ ಮಹತ್ವದ ಸೂಚನೆ ನೀಡಿದೆ. ಶಿರಾಡಿ ಘಾಟ್ ಬದಲು ಚಾರ್ಮಾಡಿ ಘಾಟ್ ಮೂಲಕ ಸಂಚರಿಸಲು ಮನವಿ ಮಾಡಿದೆ.
ಶಿರಾಡಿ ಘಾಟಿಯಲ್ಲಿ ವಾಹನ ಸವಾರರ ಪರದಾಟ
ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ಹಲವರು ಶಿರಾಡಿ ಘಾಟ್‌ನಲ್ಲಿ ಸಿಲುಕಿಕೊಂಡಿದ್ದಾರೆ. ವಾಹನ ಸಂಚಾರ ಬಂದ್ ಆಗಿದೆ. ಪೊಲೀಸರು, ಅಧಿಕಾರಿಗಳು ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸುತ್ತಿದ್ದರೆ. ಇತ್ತ ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ನಿರಂತರವಾಗಿ ಸುರಿಯುತ್ತಿರುವ ಮಳೆ ಕಾರ್ಯಾಚರಗೆ ಅಡ್ಡಿಯಾಗುತ್ತಿದೆ. ಮತ್ತಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.
