ವಾಲ್ಮೀಕಿ ಹಗರಣ ಸಿಎಂ ಕಣ್ಣ ಕೆಳಗೇ ನಡೆದಿದೆ: ಆರ್.ಅಶೋಕ್
ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥವಾಗಿದೆ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವ ಅನುಮಾನ ಮೂಡಿದೆ ಎಂದು ವಾಗ್ದಾಳಿ ನಡೆಸಿದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು(ಜೂ.02): ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕಣ್ಣಿನ ಕೆಳಗೆಯೇ ಕೋಟ್ಯಂತರ ರು. ಹಗರಣ ನಡೆದರೂ ಅವರಿಗೆ ಮಾಹಿತಿ ಇಲ್ಲವಾಗಿದ್ದು, ತಕ್ಷಣ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥವಾಗಿದೆ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವ ಅನುಮಾನ ಮೂಡಿದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯ ಸರ್ಕಾರವೇ ಎಟಿಎಂ: ಬಿ.ವೈ.ವಿಜಯೇಂದ್ರ ಆರೋಪ
ಸಿದ್ದರಾಮಯ್ಯ ಸರ್ಕಾರದಲ್ಲಿ ಲೂಟಿಯನ್ನು ತಡೆದವರು ನಿವೃತ್ತರಾಗ ಬೇಕು ಅಥವಾ ಆತ್ಮಹತ್ಯೆ ಮಾಡಿಕೊಳ್ಳಬೇಕು. ದಲಿತರಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗಿದೆ ಎಂಬುದನ್ನು ಇನ್ನೂ ಪತ್ತೆ ಮಾಡಬೇಕಿದೆ ಎಂದರು.