Asianet Suvarna News Asianet Suvarna News

ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆವರೆಗೂ ಹೋರಾಟ, ಆರ್.ಅಶೋಕ್

ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಹಿಂದೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿ ರಾಜೀನಾಮೆ ಕೊಟ್ಟರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದ ಪ್ರತಿ ಪಕ್ಷದ ನಾಯಕ ಆರ್.ಅಶೋಕ್

Leader of the Opposition R Ashok Talks Over CM Siddaramaiah resign grg
Author
First Published Oct 1, 2024, 5:15 AM IST | Last Updated Oct 1, 2024, 5:15 AM IST

ಬೆಂಗಳೂರು(ಅ.01): ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಹಿಂದೆ ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿ ರಾಜೀನಾಮೆ ಕೊಟ್ಟರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

14 ಸೈಟ್ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ,ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ!

ಚಂದ್ರಶೇಖ‌ರ್ ವಿರುದ್ಧ ಕ್ರಮಕ್ಕೆ ಅಶೋಕ್ ಆಗ್ರಹ 

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ಹಂದಿ ಎಂದು ನಿಂದಿಸಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಇದೇ ವೇಳೆ ಅಶೋಕ್ ಆಗ್ರಹಿಸಿದ್ದಾರೆ. 

ಕಾನೂನಿನಿಂದ ನುಣುಚಿಕೊಳ್ಳಲು ನೇರವಾಗಿ ಪತ್ರ ಬರೆಯದೆ, ಕೆಳ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಧಿಕಾರಿ ತನ್ನ ಮಿತಿ ಮೀರಿ ವರ್ತಿಸಿರುವುದು ಖಂಡನೀಯ. ಸರ್ಕಾರದ ಮುಖ್ಯ ಕಾರ್ಯದರ್ಶಿ ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Latest Videos
Follow Us:
Download App:
  • android
  • ios