Asianet Suvarna News Asianet Suvarna News

ಸಮಗ್ರ ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತಯ ನೀಡಲಾಗುವುದು‌. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

legal framework for integrated Comprehensive language development says Chief Minister Basavaraj Bommai gow
Author
First Published Jan 6, 2023, 4:47 PM IST

ಹಾವೇರಿ (ಜ.6): ಸಮಗ್ರ ಭಾಷಾ ಅಭಿವೃದ್ಧಿಗೆ ಕಾನೂನಿನ ಸ್ವರೂಪ ನೀಡಿ, ಕನ್ನಡಿಗರಿಗೆ ಕೈಗಾರಿಗಳ ಉದ್ಯೋಗದಲ್ಲಿ ಶೇ.80 ರಷ್ಟು ಪ್ರಾಶಸ್ತಯ ನೀಡಲಾಗುವುದು‌. ಗಡಿ ಭಾಗದ ಹಾಗೂ ಗಡಿ ಆಚೆಗಿನ ಕನ್ನಡಿಗರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಗಡಿ  ಅಭಿವೃದ್ಧಿಗೆ ವಿಶೇಷ ಅನುದಾನ  ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡವು ಜಗತ್ತಿನ ಪ್ರಾಚೀನ ಭಾಷೆಗಳಲ್ಲಿ ಒಂದು. ಕನ್ನಡಿಗರ ಬದುಕು ಬಹಳ ಪುರಾತನವಾದುದು,ಸಂಸ್ಕೃತಿ ಶ್ರೇಷ್ಠವಾದುದು. ಕನ್ನಡವು ಹೆಮ್ಮರವಾಗಿ ಬೆಳೆಯಲು,ಕನ್ನಡದ ಕಂಪನ್ನು ಬಿತ್ತಿ, ಬೆಳೆಯಲು ಇಂತಹ ಸಮ್ಮೇಳನಗಳು ಬೇಕು.ತಮ್ಮ ಹೆಸರಿನಂತೆಯೇ ಸಾಹಿತ್ಯ, ಸಾಂಸ್ಕೃತಿಕ ರಂಗಗಳಲ್ಲಿ ದೊಡ್ಡ ಸಾಧನೆ ಮಾಡಿರುವ ಪ್ರೊ.ದೊಡ್ಡರಂಗೇಗೌಡರು ತಮ್ಮ ಹೆಸರಿಗೆ ಅನ್ವರ್ಥವಾಗುವಂತಹ ವ್ಯಕ್ತಿತ್ವ ಹೊಂದಿದ್ದಾರೆ. ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾಗಿರುವ ಡಾ.ಹೆಚ್.ಎಸ್.ವೆಂಕಟೇಶಮೂರ್ತಿಯವರೂ ಕೂಡ ಸಂವೇದನಾಶೀಲ ಕಾವ್ಯದ ಕರ್ತೃವಾಗಿದ್ದಾರೆ.

ಕನ್ನಡ ಭಾಷೆ ಎಂದಿಗೂ ಬಡವಾಗಿಲ್ಲ. ಶತ ಶತ ಮಾನಗಳವರೆಗೆ,ಸೂರ್ಯ ಚಂದ್ರರು ಇರುವವರೆಗೂ ಕನ್ನಡ ಶ್ರೀಮಂತವಾಗಿ ಬೆಳೆಯುತ್ತಲೇ ಸಾಗುತ್ತದೆ. ಕನ್ನಡಕ್ಕೆ ಆಪತ್ತು ತರುವ ಯಾವುದೇ ಶಕ್ತಿಗಳಿಗೆ ಆ ತಾಕತ್ತು ಇಲ್ಲ. ವಚನ ಮತ್ತು ದಾಸ ಸಾಹಿತ್ಯ ಪ್ರಕಾರಗಳು ಕನ್ನಡದ ಅಂತಃಸತ್ವ ಗಟ್ಟಿಗೊಳಿಸಿವೆ. ಕನ್ನಡಿಗರು ವಿಭಿನ್ನ ಸೊಗಡಿನ ಶೈಲಿಯು  ಒಟ್ಟು ಕನ್ನಡದ ಅಸ್ಮಿತೆಯೂ ಆಗಿದೆ.

ಉತ್ತರ ಕರ್ನಾಟಕ ಭಾಗದಿಂದ ಕರ್ನಾಟಕ ಏಕೀಕರಣ ಚಳುವಳಿಗೆ ಹಳೆಯ ಮೈಸೂರು ಭಾಗದ ಜನರೂ ಕೈಜೋಡಿಸಿದ ಪರಿಣಾಮವಾಗಿ ಕನ್ನಡ ಭಾಷಿಕರೆಲ್ಲ ಒಂದು ಆಡಳಿತದ ತೆಕ್ಕೆಗೆ ಒಳಪಡಲು ಸಾಧ್ಯವಾಯಿತು. 10 ಕೃಷಿ ವಲಯಗಳು ನಮ್ಮ ನಾಡಿನಲ್ಲಿವೆ. ವರ್ಷದ ಎಲ್ಲಾ ದಿನಗಳಲ್ಲಿಯೂ ಈ ನಾಡಿನಲ್ಲಿ ಒಂದಲ್ಲ ಒಂದು ಬೆಳೆ ,ಫಸಲು ಸದಾ ಹಸಿರು ಉಕ್ಕಿಸುತ್ತಿರುತ್ತದೆ. ದುಡಿಯುವ ವರ್ಗ , ರೈತರು,ಕೂಲಿಕಾರರು ಈ ನಾಡನ್ನು ಕಟ್ಟಿದ್ದಾರೆ.

ಕಳೆದ ಐದು ವರ್ಷಗಳಲ್ಲಿ 1.5 ಲಕ್ಷ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗಿದೆ. ಮುಂದಿನ ಒಂದು ದಶಕ ನೀರಾವರಿ ದಶಕವಾಗಿರುತ್ತದೆ.ಎಲ್ಲ ಯೋಜನೆಗಳನ್ನು ಪೂರ್ಣಗೊಳಿಸುವ ಬದ್ಧತೆ ನಮ್ಮದಾಗಿದೆ. ಕನ್ನಡಕ್ಕೆ ಹತ್ತು ಹಲವು ಸವಾಲುಗಳಿವೆ. ಇವುಗಳಿಗೆ ಸಮಗ್ರ ಕನ್ನಡ  ಕಾನೂನಿನ ಸ್ವರೂಪ ನೀಡಲಾಗುತ್ತಿದೆ. ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಆದೇಶದಂತೆ ಈಗಲೇ ರಾಜ್ಯದ ಕಾನೂನು ಆಯೋಗವು ಕರಡು ಸಿದ್ಧಪಡಿಸಿದೆ.

ಇನ್ನಷ್ಟು ವಿಸ್ತೃತ ಮತ್ತು ವ್ಯಾಪಕ ಚರ್ಚೆಗಳಾದ ಕೂಡಲೇ ಈ ಕಾನೂನು ಜಾರಿಗೊಳ್ಳುತ್ತದೆ. ಕೈಗಾರಿಕೆಗಳ ಉದ್ಯೋಗಗಳಲ್ಲಿ  ಕನ್ನಡಿಗರಿಗೆ ಶೇ.80 ರಷ್ಟು ಪ್ರಾಶಸ್ತ್ಯ ದೊರೆತು ಎಲ್ಲ ಕನ್ನಡಿಗರ ಕೈಗಳಿಗೆ ಕೆಲಸ ನೀಡುವ ತೀರ್ಮಾನವನ್ನು ರಾಜ್ಯದ ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗುವುದು. ಗಡಿಭಾಗದ ಹಾಗೂ ಗಡಿಯಾಚೆಗಿನ ಕ‌ನ್ನಡಿಗರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ವಿಶೇಷ ಅನುದಾನ‌ ನೀಡಲಾಗುವುದು. ಈ ಕುರಿತ ಅಂತಿಮ ನಿರ್ಣಯಗಳನ್ನು ಸಮಾರೋಪ ಸಮಾರಂಭದಲ್ಲಿ ಪ್ರಕಟಿಸುತ್ತೇನೆ. ತಾವೊಬ್ಬ ಕನ್ನಡದ ನಿಯತ್ತಿನ ಸೇವಕ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರು ಹೆಮ್ಮೆಯಿಂದ ಘೋಷಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮೇಳನದ ಅಂಗವಾಗಿ ಹೊರತಂದ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಿ, ಮಾತನಾಡಿ, ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆ ಬಳಸಲು ಹಿಂಜರಿಯುತ್ತಿರುವುದು ಆತಂಕದ ಸಂಗತಿಯಾಗಿದೆ. ಕನ್ನಡತನ ನಾವು ಉಳಿಸಿ-ಬೆಳೆಸಿಕೊಳ್ಳಬೇಕು. ದೇಶದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ ಬಂದಾಗ ಕಾನೂನಿನ ಮೊರೆ ಹೋಗಿ ಹಕ್ಕುಗಳನ್ನು ರಕ್ಷಿಸಿದ್ದೇವೆ, ಬ್ಯಾಂಕಿಂಗ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಸ್ಥಾನ ಕಲ್ಪಿಸಿದ್ದೇವೆ ಎಂದರು.

Doddarangegowda: ಎಡಪಂಥ ಬಲಪಂಥ ಗೊತ್ತಿಲ್ಲ, ನನ್ನದು ಮಾನವ ಪಂಥ: ದೊಡ್ಡರಂಗೇಗೌಡ

ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಡಾ.ಹೆಚ್.ಎಸ್.ವೆಂಕಟೇಶ ಮೂರ್ತಿ ಮಾತನಾಡಿ, ಪಕ್ಕದ ಪ್ರಾಂತ್ಯದವರು ಅಖಂಡ ಭಾರತದ ಕಲ್ಪನೆಯನ್ನೇ ಮರೆತಂತೆ ವರ್ತಿಸುತ್ತಿರುವುದು. ಇದು ನಾಡಿನ ಗಂಭೀರ ಬಿಕ್ಕಟ್ಟು, ಇಂಗ್ಲೀಷ್ ವ್ಯಾಮೋಹ ಹೆಚ್ಚಾಗುತ್ತಿರುವುದು ಹಾಗೂ ಕನ್ನಡ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ನುಡಿಗೆ ಸಂಬಂಧಿಸಿದ ಬಿಕ್ಕಟ್ಟಾಗಿದೆ. ಈ ನೆಲದ ಬಹು ಶಕ್ತಿ ಹಾಗೂ ಪ್ರಜಾಶಕ್ತಿಗಳೆರಡೂ ಇದಕ್ಕೆ ಪರಿಹಾರ ಕಂಡುಕೊಳ್ಳಲು ಶ್ರಮಿಸಬೇಕು.

Kannada Sahitya Sammelana: ಪರ್ಯಾಯ ಸಮ್ಮೇಳನ ನಡೆಸೋರು ಹಾವೇರಿ ವಿರೋಧಿಗಳು: ಮಹೇಶ್ ಜೋಷಿ

ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ವಿ.ಸುನೀಲಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಅರೆಬೈಲ್ ಶಿವರಾಮ ಹೆಬ್ಬಾರ, ಸಂಸದ ಶಿವಕುಮಾರ ಉದಾಸಿ,ಶಾಸಕರಾದ ಅರುಣ ಪೂಜಾರ,ವಿರೂಪಾಕ್ಷಪ್ಪ ಬಳ್ಳಾರಿ, ಶ್ರೀನಿವಾಸ ಮಾನೆ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ, ಸಲೀಂ ಅಹ್ಮದ್,ಆರ್.ಶಂಕರ್,ಪ್ರದೀಪ ಶೆಟ್ಟರ್ , ನಗರಸಭೆ ಅಧ್ಯಕ್ಷ ಸಂಜೀವಕುಮಾರ ನೀರಲಗಿ,ವಾಕರಸಾಸಂ ಉಪಾಧ್ಯಕ್ಷ ಬಸವರಾಜ ಕೆಲಗಾರ, ಮಾಜಿ ಸಚಿವರಾದ ಬಸವರಾಜ ಶಿವಣ್ಣವರ, ಮನೋಹರ ತಹಸೀಲ್ದಾರ, ರುದ್ರಪ್ಪ ಲಮಾಣಿ ಮತ್ತಿತರರು ವೇದಿಕೆಯಲ್ಲಿದ್ದರು. ಸ್ವಾಗತ ಸಮಿತಿ ಅಧ್ಯಕ್ಷ ,ಶಾಸಕ ನೆಹರು ಓಲೇಕಾರ ಸ್ವಾಗತಿಸಿದರು,ಕಸಾಪ ಅಧ್ಯಕ್ಷ ಡಾ.ಮಹೇಶ ಜೋಶಿ ಆಶಯ ಮಾತುಗಳನ್ನಾಡಿದರು.

Follow Us:
Download App:
  • android
  • ios