ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ನೇರವಾಗಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸುವ ಮಾತುಗಳು ಕೇಳಿಬಂದಿತ್ತು. ಆದರೆ ಸಿದ್ದರಾಮಯ್ಯ ನೇರವಾಗಿ ಹೈಕಮಾಂಡ್ ತೀರ್ಮಾನ ಎಂದಿದ್ದಾರೆ. ಇತ್ತ ಸಿಎಂ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10 ಶಾಸಕರ ಪಟ್ಟಿ ಹೈಕಮಾಂಡ್ ಕೈಸೇರಿದೆ. 

ಬೆಂಗಳೂರು (ಮೇ.30) ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಕ್ಲೈಮಾಕ್ಸ್ ಹಂತಕ್ಕೆ ತಲುಪಿದೆ. ಇಂದು ನಡೆದ ಶಾಸಕಾಂಗ ಪಕ್ಷದ ಸಭೆಯೂ ಹಲವು ಹೈಡ್ರಾಮಗಳಿಗೆ ಸಾಕ್ಷಿಯಾಗಿತ್ತು. ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆಯಲ್ಲಿ ನೇರವಾಗಿ ಡಿಕೆ ಶಿವಕುಮಾರ್ ಹೆಸರು ಪ್ರಸ್ತಾಪಿಸುತ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ಆದರೆ ಸಿದ್ದರಾಮಯ್ಯ ಜಾಣ ನಡೆ ಅನುಸರಿಸಿದ್ದಾರೆ. ತಾನು ರಾಜೀನಾಮೆ ನೀಡಿದ್ದಾರೆ. ಶಾಸಾಂಕ ಪಕ್ಷದ ನಾಯಕನ ಆಯ್ಕೆಯನ್ನು ಹೈಕಮಾಂಡ್ ಮಾಡಲಿದೆ ಎಂದಿದ್ದಾರೆ. ಆದರೆ ಡಿಕೆ ಶಿವಕುಮಾರ್ ಹೆಸರು ಹೈಕಮಾಂಡ್ ವಲಯದಲ್ಲಿ ಬಹುತೇಕ ಅಂತಿಮಗೊಂಡಿದೆ. ಇದರ ನಡುವೆ ಡಿಕೆ ಶಿವಕುಮಾರ್ ಮೊದಲ ಹಂತದಲ್ಲಿ ಮಂತ್ರಿಗಿರಿ ಪಡೆಯುವ 10 ಶಾಸಕರ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಖ್ಯಮಂತ್ರಿ ಜೊತೆ 8 ರಿಂದ 10 ಸಚಿವರು ಪ್ರಮಾಣವಚನ

ನೂತನ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮದಲ್ಲಿ 8 ರಿಂದ 10 ಮಂದಿ ಶಾಸಕರು ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೊದಲ ಹಂತದಲ್ಲಿ ಹಿರಿಯ ಶಾಸಕರಿಗೆ ಆದ್ಯತೆ ನೀಡಲು ಡಿಕೆ ಶಿವಕುಮಾರ್ ಮುಂದಾಗಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿದೆ.

10 ಮಂದಿ ಲಿಸ್ಟ್ ಕೊಟ್ಟ ಡಿಕೆಶಿ

ಡಿಕೆ ಶಿವಕುಮಾರ್ ಈಗಾಗಲೇ 10 ಶಾಸಕರ ಪಟ್ಟಿಯನ್ನು ಹೈಕಮಾಂಡ್‌ಗೆ ನೀಡಿದ್ದಾರೆ. 65 ವರ್ಷದೊಳಗಿನ ಶಾಸಕರಿಗೆ ಮಂತ್ರಿ ಮಾಡಬೇಕು ಎಂದಿರುವ ಡಿಕೆ ಶಿವಕುಮಾರ್ 4 ಒಕ್ಕಲಿಗ, 2 ಎಸ್ ಸಿ, 2 ಮುಸ್ಲಿಂ, 2 ಮಹಿಳಾ ಶಾಸಕರ ಪಟ್ಟಿಯನ್ನು ಡಿಕೆ ಶಿವಕುಮಾರ್ ಹೈಕಮಾಂಡ್‌ಗೆ ನೀಡಿದ್ದಾರೆ.

ಸಿದ್ದರಾಮಯ್ಯ ಬಣದಿಂದ 15 ರಿಂದ 20 ಮಂದಿ ಲಿಸ್ಟ್

ಹೊಸ ಸಂಪುಟದಲ್ಲಿ ಯಾರು ಮಂತ್ರಿಯಾಗಲಿದ್ದಾರೆ ಅನ್ನೋ ಕುತೂಹಲ ಹೆಚ್ಚಾಗುತ್ತಿದ್ದಂತೆ ಡಿಕೆ ಶಿವಕುಮಾರ್ ಪಟ್ಟಿ ಒಂದಡೆಯಾದರೆ ಇತ್ತ ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ 15 ರಿಂದ 20 ಮಂದಿಯ ಪಟ್ಟಿಯನ್ನು ಹೈಕಮಾಂಡ್‌ಗಹೆ ನೀಡಿದ್ದಾರೆ ಎನ್ನಲಾಗುತ್ತಿದೆ. ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಪಟ್ಟಿ ಬಳಿಕ ಉಳಿದ ಸಚಿವ ಸ್ಥಾನಗಳ ಆಯ್ಕೆ ಹೈಕಮಾಂಡ್ ನಿರ್ಧರಿಸಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

ಚುನಾವಣೆ ಬಳಿಕ 2ನೇ ಹಂತದ ಸಂಪುಟ ವಿಸ್ತರಣೆ

ರಾಜ್ಯಸಭಾ, ವಿಧಾನ ಪರಿಷತ್ ಚುನಾವಣೆ ಬಳಿಕ ಎರಡನೇ ಹಂತದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಎರಡೇ ಹಂತದಲ್ಲಿ ಯುವ ಶಾಸಕರಿಗೆ ಮಣೆ ಹಾಕಲಾಗುತ್ತದೆ. ಈ ಮೂಲಕ ಎರಡು ಹಂತಗಳಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ.