Asianet Suvarna News Asianet Suvarna News

ನಾಗಮಂಗಲ ಗಲಭೆ: ಗೃಹ ಸಚಿವ ಪರಮೇಶ್ವರ್‌ ಆಕಸ್ಮಿಕವಾಗೇ ಹುದ್ದೆ ಬಿಡಲಿ, ಯತ್ನಾಳ್

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗುಂಪು ಘರ್ಷಣೆ ವಿಷಯದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದು ಆಕಸ್ಮಿಕ ಘಟನೆ ಎಂದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಆಕಸ್ಮಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ 
 

Let Home Minister G Parameshwar resign Says BJP MLA Basanagouda Patil Yatnal grg
Author
First Published Sep 13, 2024, 11:35 AM IST | Last Updated Sep 13, 2024, 11:35 AM IST

ಬೆಂಗಳೂರು(ಸೆ.13): ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದ ಗಲಭೆಯನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಘಟನೆಗೆ ಸರ್ಕಾರದ ವೈಫಲ್ಯವೇ ಕಾರಣವಾಗಿದೆ. ತಪ್ಪಿತ ಸರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. 

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋತಿ, ಶೋಭಾ ಕರಂದ್ಲಾಜೆ, ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ, ಶಾಸಕ ಸುನಿಲ್ ಕುಮಾರ್ ಸೇರಿದಂತೆ ಹಲವರು ಘಟನೆಯನ್ನು ಖಂಡಿಸಿ ಸರ್ಕಾರದ ವೈಫಲ್ಯವೇ ಕಾರಣ ಎಂದು ಟೀಕಿಸಿದ್ದಾರೆ. 

ಆಕಸ್ಮಿಕ ಗೃಹ ಸಚಿವ ಮಾತಿಗೆ ಪರಂ ಗರಂ, 'ಹೌದು ನಾನು ಆಕಸ್ಮಿಕ ಏನೀಗ?' ಎಂದು ಪ್ರಶ್ನೆ!

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ನಾಗಮಂಗಲದಲ್ಲಿನ ಘಟನೆಯು ಸಮಾಜದ ಶಾಂತಿ ಮತ್ತು ಏಕತೆಗೆ ಧಕ್ಕೆಯನ್ನುಂಟು ಮಾಡಿದೆ. ಧರ್ಮ, ಜಾತಿ ಅಥವಾ ಇತರೆ ಕಾರಣಗಳಿಂದ ಯಾವ ರೀತಿಯ ಅಹಿತಕರ ವರ್ತನೆಗಳು ಸಹ ಸಮರ್ಥನೀಯವಲ್ಲ, ಕಿಡಿಗೇಡಿತನದ ವಿರುದ್ದ ಸೂಕ್ತಕ್ರಮಕೈಗೊಳ್ಳಬೇಕು. ಘಟನೆ ವಿಚಾರವಾಗಿ ಸೂಕ್ತ ಕ್ರಮ ಕೈಗೊಳ್ಳುವ ಮೂಲಕ ಸರ್ಕಾರ ಸಮುದಾಯಗಳ ನಡುವೆ ನೆಮ್ಮದಿಯನ್ನು ಕಾಪಾಡಲು ಸಹಕರಿಸಬೇಕು. ಭಯ, ಅಸಹನೆ ಮತ್ತು ಅಶಾಂತಿ ಎಂಬುವಂತಹ ಸ್ಥಿತಿಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು. 

ಮಾಜಿ ಸಂಸದ ಪ್ರತಾಪ್ ಸಿಂಹ ಮಾತನಾಡಿ, ನಮ್ಮ ರಕ್ಷಣೆಗೆ ಹಿಂದುಗಳು ಸಹ ಖಡ್ಗ ಹಿಡಿದುಕೊಂಡು ಓಡಾಡುವ ಸಮಯ ಬಂದಿದೆ. ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಮತ್ತು ಯೋಗಿಯಂತಹ ನಾಯಕ ಬೇಕಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದುಗಳು ಖಡ್ಗ ಹಿಡಿದದಿನ ಇರುವುದಿಲ್ಲ.2013ರಿಂದ 2018 ರವರೆಗೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿದ್ದು, ಆಗಲೂ ಹಿಂದುಗಳ ಕಗ್ಗೋಲೆ ಆಗ್ತಿತ್ತು. ಸಿದ್ದರಾಮಯ್ಯ ಸರ್ಕಾರ ಬಂದರೆ ಅದು ತಾಲಿಬಾನ್‌ ಸರ್ಕಾರ ಆಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಮಂಡ್ಯದಲ್ಲಿ ಪೆಟ್ರೋಲ್‌ ಬಾಂಬ್‌ ನೋಡಿದ್ದು ಇದೇ ಮೊದ್ಲು: ಕೇಂದ್ರ ಸಚಿವ ಕುಮಾರಸ್ವಾಮಿ

ಶಾಸಕ ಸುನಿಲ್ ಕುಮಾರ್ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ, ಶಾಂತಿಯುತವಾಗಿ ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ವೇಳೆ ಉದ್ದೇಶಪೂರ್ವಕವಾಗಿಯೇ ಸಮುದಾಯವೊಂದು ದಾಂಧಲೆ ನಡೆಸಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹಿಂದುಗಳನ್ನು ಗುರಿಯಾಗಿಸಿ, ಹಿಂದುಗಳ ಆಚರಣೆಗೆ ಅಡ್ಡಿಪಡಿಸಲಾಗುತ್ತಿದೆ. ಘಟನೆಯ ಹೊಣೆಯನ್ನು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಹೊರಬೇಕು ಎಂದು ಕಿಡಿಕಾರಿದ್ದಾರೆ.

ಪರಂ ಆಕಸ್ಮಿಕವಾಗೇ ಹುದ್ದೆ ಬಿಡಲಿ: ಯತ್ನಾಳ್ 

ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗುಂಪು ಘರ್ಷಣೆ ವಿಷಯದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಇದು ಆಕಸ್ಮಿಕ ಘಟನೆ ಎಂದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವ‌ರ್ ಆಕಸ್ಮಿಕವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಆಗ್ರಹಿಸಿದ್ದಾರೆ.

Latest Videos
Follow Us:
Download App:
  • android
  • ios