ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂತಹ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು: ಎಚ್‌.ಡಿ.ಕುಮಾರಸ್ವಾಮಿ 

ಬೆಂಗಳೂರು(ಡಿ.26): ರೈತರ ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್‌ ನೀಡಿರುವ ಹೇಳಿಕೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ತಮ್ಮ ಹೇಳಿಕೆಯನ್ನು ತಕ್ಷಣ ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಸಂಬಂಧ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಹೇಳಿಕೆ ನೀಡಿರುವ ಅವರು, ಸಚಿವ ಶಿವಾನಂದ ಪಾಟೀಲ್ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂತಹ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು’ ಎಂದು ತಿಳಿಸಿದ್ದಾರೆ.

ರೈತರು ಪರಿಹಾರಕ್ಕೆಂದೇ ಆತ್ಮಹತ್ಯೆ ಮಾಡಿಕೊಳ್ತಾರೆಂದಿದ್ದ ಶಿವಾನಂದ ಪಾಟೀಲ್‌ ಮೇಲೆ ಹಣ ಮಳೆ: ಸಚಿವರಿಂದ ಉಡಾಫೆ ಉತ್ತರ!

‘ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದ್ದಾರೆ.