ಜನಸಂಖ್ಯೆಗೆ ತಕ್ಕುದಾಗಿ ಮೋದಿ ಮೀಸಲು ನೀಡಲಿ: ಸಿಎಂ ಸಿದ್ದರಾಮಯ್ಯ ಸವಾಲು
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿ ವಿವಾದಕ್ಕೆ ಇರುವ ಶಾಶ್ವತ ಹಾಗೂ ಏಕೈಕ ಪರಿಹಾರ. ನರೇಂದ್ರ ಮೋದಿ ಅವರು ಇದಕ್ಕೆ ಸಿದ್ಧರಿದ್ದಾರಾ ಎಂದು ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು(ಏ.25): 'ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿ ವಿವಾದಕ್ಕೆ ಪರಿಹಾರ: ಕಾಂಗ್ರೆಸ್ ಪಕ್ಷ ಇದಕ್ಕೆ ಸಿದ್ದವಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಿದ್ದರಿದ್ದರೆ ಚುನಾವಣಾ ಭರವಸೆಯಾಗಿ ಘೋಷಿಸಲಿ. ಇಲ್ಲದಿದ್ದರೆ ತಮ್ಮ ಬಾಯಿ ಬಡಾಯಿಯನ್ನು ನಿಲ್ಲಿಸಲಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೀಸಲಾತಿಯ ಸುತ್ತ ವಿವಾದವನ್ನು ಸೃಷ್ಟಿಸಿ ರಾಜಕೀಯ ಲಾಭ ಪಡೆಯುವ ಹುನ್ನಾರ ನಡೆಸಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿ ವಿವಾದಕ್ಕೆ ಇರುವ ಶಾಶ್ವತ ಹಾಗೂ ಏಕೈಕ ಪರಿಹಾರ. ನರೇಂದ್ರ ಮೋದಿ ಅವರು ಇದಕ್ಕೆ ಸಿದ್ಧರಿದ್ದಾರಾ ಎಂದು ಪ್ರಶ್ನಿಸಿದರು.
ಕರ್ನಾಟಕ ರೀತಿ ದೇಶದಲ್ಲಿ ಮುಸ್ಲಿಂ ಮೀಸಲಾತಿಗೆ 'ಕಾಂಗ್ರೆಸ್' ಪ್ಲಾನ್: ಪ್ರಧಾನಿ ಮೋದಿ
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೀಸಲಾತಿಗೆ ಈಗ ಇರುವ ಶೇಕಡಾ 50ರ ಮಿತಿಯನ್ನು ರದ್ದುಪಡಿಸಿ ಅದನ್ನು ಶೇಕಡಾ 75ಕ್ಕೆ ಹೆಚ್ಚಿಸುವ ಭರವಸೆಯನ್ನು ಕಳೆದ ವಿಧಾನಸಭಾ ಚುನಾವಣೆಯ ನಮ್ಮ ಪ್ರಣಾಳಿಕೆಯಲ್ಲಿಯೇ ಘೋಷಿಸಿದ್ದೆವು. ಈ ಘೋಷಣೆಗೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ.