ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಗ್ಗೆ ಕಾಂಗ್ರೆಸ್‌ ಸರ್ಕಾರ ತನಿಖೆ ಮಾಡುತ್ತೇವೆ ಎಂದಿದೆ. ಮಾಡಲಿ, ಅದಕ್ಕೂ ಮುನ್ನ ಆಗಸ್ಟ್‌ 11ರಿಂದ ವಿಮಾನ ಹಾರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಒತ್ತಾಯಿಸಿದರು.

ಶಿವಮೊಗ್ಗ (ಜು.14): ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಗ್ಗೆ ಕಾಂಗ್ರೆಸ್‌ ಸರ್ಕಾರ ತನಿಖೆ ಮಾಡುತ್ತೇವೆ ಎಂದಿದೆ. ಮಾಡಲಿ, ಅದಕ್ಕೂ ಮುನ್ನ ಆಗಸ್ಟ್‌ 11ರಿಂದ ವಿಮಾನ ಹಾರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಒತ್ತಾಯಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ವಿಮಾನ ನಿಲ್ದಾಣಕ್ಕಾಗಿ ಸಂಸದ ಬಿ.ವೈ. ರಾಘವೇಂದ್ರ(BY Raghavendra), ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ(BS Yadiyurappa)ನವರು ತಪಸ್ಸು ಮಾಡಿದ್ದಾರೆ. ವಿಧಾನಪರಿಷತ್‌ನಲ್ಲಿ ಮಂಜುನಾಥ ಭಂಡಾರಿಯವರು ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸಂಬಂಧಿಸಿದಂತೆ ತನಿಖೆಗೆ ಆಗ್ರಹಿಸಿದ್ದಾರೆ. ಇದಕ್ಕೆ ಸಚಿವ ಎಂ.ಬಿ. ಪಾಟೀಲ್‌(MB Patil) ಕೂಡ ಉತ್ತರ ನೀಡಿದ್ದಾರೆ. ಈ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಆದರೆ, ತನಿಖೆಗೂ ಮೊದಲು ವಿಮಾನ ಹಾರಾಟಕ್ಕೆ ಆದ್ಯತೆ ಕೊಡಲಿ ಎಂದರು.

ಜೈನಮುನಿ ಹತ್ಯೆ ಸಿಬಿಐ ತನಿಖೆಯಾಗ​ಲಿ: ಈಶ್ವರಪ್ಪ ಒತ್ತಾಯ

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ಗ್ಯಾರಂಟಿಗಳನ್ನು ಘೋಷಣೆ ಮಾಡಿತ್ತು. ಆಗ ಅವರಿಗೆ ಗ್ಯಾರಂಟಿಗಳ ಜಾರಿ ಮಾಡುವ ಬಗ್ಗೆ ಮುಂದಾಲೋಚನೆ ಇರಬೇಕಿತ್ತು. ಈಗ ಯೋಚನೆ ಮಾಡಿದರೆ ಪ್ರಯೋಜನವಿಲ್ಲ. ಅವರ ಎಲ್ಲಾ ಗ್ಯಾರಂಟಿಗಳು ಹುಸಿಯಾಗುತ್ತಿವೆ. ಗ್ಯಾರಂಟಿಗಳ ಗೊಂದಲದಲ್ಲಿ ಕಾಂಗ್ರೆಸ್‌ ಸರ್ಕಾರವಿದೆ. ಇನ್ನೂ ಯಾವ ಗ್ಯಾರಂಟಿಗಳು ಕೂಡ ಸ್ಪಷ್ಟವಾಗಿ ಜಾರಿಯಾಗಿಲ್ಲ. ಜನರಿಗೆ ಈ ಸರ್ಕಾರದ ಬಗ್ಗೆ ನಂಬಿಕೆ. ಇಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ನೆಲ ಕಚ್ಚುತ್ತದೆ ಎಂದು ಭವಿಷ್ಯ ನುಡಿದರು.

ಜೈನಮುನಿಗಳ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆ ಮಾಡಬೇಕು. ಇವರ ಹತ್ಯೆಯ ಹಿಂದೆ ಹಲವು ಕೈವಾಡಗಳಿವೆ. ರಾಷ್ಟ್ರದ್ರೋಹಿಗಳು ಈ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಬಂದು ತಿಂಗಳಾಗಿಲ್ಲ. ಗೂಂಡಾಗಿರಿಗಳು, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಮುಖ್ಯಮಂತ್ರಿ ಮತ್ತು ಗೃಹಮಂತ್ರಿಗಳು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ರಾಹುಲ್‌ ಗಾಂಧಿಯವರ ಅನರ್ಹತೆಗೆ ಸಂಬಂಧಿಸಿದಂತೆ ಆದೇಶ ನೀಡಿರುವುದು ಕೋರ್ಚ್‌. ಕಾಂಗ್ರೆಸ್ಸಿಗರು ಪ್ರತಿಭಟನೆ ಮಾಡುತ್ತಿರುವುದು ನೋಡಿದರೆ ಅವರಿಗೆ ನ್ಯಾಯಾಲಯದ ಬಗ್ಗೆ ಗೌರವ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಕುಟುಕಿದರು.

Viral news: ಕೊರಗಜ್ಜಗೆ ಹರಕೆ ಫಲಿಸಿತು, ಮರಳಿ ಸಿಕ್ಕಿತು ಕಾರ್ಮಿಕನ ದುಡಿಮೆ ಹಣ!