Asianet Suvarna News Asianet Suvarna News

ಭಾರತದ ಆರ್ಥಿಕತೆ 3ನೇ ಸ್ಥಾನಕ್ಕೇರಿಸಲು ಯುವಶಕ್ತಿ ಶ್ರಮಿಸಲಿ: ರಾಜ್ಯಪಾಲ ಗೆಹ್ಲೋತ್

ಭಾರತದ ಆರ್ಥಿಕತೆಯು ವಿಶ್ವ ಮಟ್ಟದಲ್ಲಿ 5ನೇ ಸ್ಥಾನದಲ್ಲಿದೆ. ಇದನ್ನು 3ನೇ ಸ್ಥಾನಕ್ಕೆ ತರಲು ಈ ದೇಶದ ಯುವಶಕ್ತಿಯ ಪರಿಶ್ರಮ ಮಹತ್ವದ್ದು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅಭಿಪ್ರಾಯಟ್ಟರು.

Let the youth work hard to make India's economy 3rd sasy governor gehlot at vijayanagar rav 
Author
First Published Jul 14, 2023, 4:49 AM IST

ಬಳ್ಳಾರಿ (ಜು.14) ಭಾರತದ ಆರ್ಥಿಕತೆಯು ವಿಶ್ವ ಮಟ್ಟದಲ್ಲಿ 5ನೇ ಸ್ಥಾನದಲ್ಲಿದೆ. ಇದನ್ನು 3ನೇ ಸ್ಥಾನಕ್ಕೆ ತರಲು ಈ ದೇಶದ ಯುವಶಕ್ತಿಯ ಪರಿಶ್ರಮ ಮಹತ್ವದ್ದು ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅಭಿಪ್ರಾಯಟ್ಟರು.

ನಗರದ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ(Vijayanagara Sri Krishnadevaraya University)ದಲ್ಲಿ ಗುರುವಾರ ಜರುಗಿದ 11ನೇ ವಾರ್ಷಿಕ ಘಟಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಉದ್ದೇಶ ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗಬಾರದು. ಪ್ರತಿಯೊಬ್ಬ ವ್ಯಕ್ತಿಯ ವ್ಯಕ್ತಿತ್ವವು ವಿಕಸನಗೊಳ್ಳಬೇಕು. ಶಿಕ್ಷಣ ಬದುಕು ರೂಪಿಸಬೇಕು. ದೇಶದ ಆರ್ಥಿಕ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ವಿಶ್ವವಿದ್ಯಾಲಯಗಳು ನೀಡುವ ಶಿಕ್ಷಣ ಪೂರಕವಾಗಬೇಕು. ಬದಲಾಗುತ್ತಿರುವ ಸಮಯ ಮತ್ತು ಸಂದರ್ಭಗಳೊಂದಿಗೆ ಹೊಸ ಹೊಸ ತಂತ್ರಜ್ಞಾನದ ಜತೆಗೆ ನವೀಕರಿಸಲು ಮತ್ತು ಪ್ರಾಯೋಗಿಕ, ಸಾಮಾಜಿಕ ಮತ್ತು ಹೊಸ ಸಂಶೋಧನೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲು ವಿಶ್ವವಿದ್ಯಾಲಯಗಳು ಶಿಕ್ಷಕರು ಹೆಚ್ಚು ಆಸ್ಥೆ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು.

 

ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ 10 ನೇ ಘಟಿಕೋತ್ಸವ, ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ

ದೇಶದಲ್ಲಿ ವ್ಯಕ್ತಿಯ ನಿರ್ಮಾಣ ಮತ್ತು ಸಮಾಜದ ಉನ್ನತಿಯಲ್ಲಿ ಶಿಕ್ಷಣವು ಅತ್ಯಂತ ಮಹತ್ವದ ಕೊಡುಗೆಯನ್ನು ಹೊಂದಿದೆ. ಇಡೀ ಸಮಾಜ ಮತ್ತು ದೇಶದಲ್ಲಿ ನೈತಿಕತೆ ಮೂಡಿಸುವುದರ ಜತೆಗೆ ಸಂಸ್ಕೃತಿಯ ಸಂರಕ್ಷಣೆ, ರಾಷ್ಟ್ರದ ಏಕತೆ- ಸಮಗ್ರತೆ ಮತ್ತು ಸಮಾಜದಲ್ಲಿ ಸಮಾನತೆ ಮತ್ತು ಸೌಹಾರ್ದತೆಯನ್ನು ಕಾಪಾಡುವಂತಹ ಶಿಕ್ಷಣವನ್ನು ಈಗಿನ ಯುವ ಪೀಳಿಗೆಯು ಪಡೆದುಕೊಳ್ಳುವ ಅವಶ್ಯಕತೆ ಇದೆ ಎಂದರು.

ಪರಿಸರದ ಅಸಮತೋಲನ ಇಂದು ಜಗತ್ತಿನ ಗಂಭೀರ ಸಮಸ್ಯೆಯಾಗಿದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಜಲ, ವಾಯು ಮತ್ತು ವನ ಸಂರಕ್ಷಣೆಯ ದಿಕ್ಕಿನಲ್ಲಿ ಆಸಕ್ತಿ ವಹಿಸಿ, ಸ್ವಚ್ಛ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡುವ ಕೆಲಸ ಮಾಡಬೇಕಿದೆ. ಎಲ್ಲ ವಿಶ್ವವಿದ್ಯಾಲಯಗಳು ತಮ್ಮಲ್ಲಿ ಯವಜನತೆ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಲು ಇತರರನ್ನು ಪ್ರೇರೇಪಿಸಬೇಕು ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಭಾರತವನ್ನು ಮುಂಚೂಣಿಯಲ್ಲಿ ಇರಿಸಲು ಶ್ರಮಿಸುತ್ತೀರಿ ಎಂಬ ಭರವಸೆಯಿದೆ ಎಂದರು.

 

ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ರಾಜ್ಯಪಾಲರಿಂದ ಡಾಕ್ಟರೇಟ್ ಪ್ರಧಾನ

ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅತ್ಯುತ್ತಮ ಕೆಲಸ ಮಾಡಿದ ಮಹಾನ್‌ ವ್ಯಕ್ತಿಗಳಿಗೆ ವಿಶ್ವವಿದ್ಯಾನಿಲಯವು ಗೌರವ ಪದವಿಗಳನ್ನು ನೀಡಿ ಗೌರವಿಸಿರುವುದು ಸಂತಸದ ವಿಷಯ. ಈ ಮಹಾನ್‌ ವ್ಯಕ್ತಿಗಳ ಅತ್ಯುತ್ತಮ ಸಾಧನೆಗಳು ಮತ್ತು ಸಮಾಜದ ಪ್ರಗತಿಗೆ ಕೊಡುಗೆಗಾಗಿ ಅವರನ್ನು ಅಭಿನಂದಿಸುತ್ತೇನೆ ಹಾಗೂ ಅವರ ಈ ಸಮಾಜ, ಸಾರ್ವಜನಿಕ ಹಿತಾಸಕ್ತಿ ಮತ್ತು ದೇಶದ ಹಿತಾಸಕ್ತಿ ನಿರಂತರವಾಗಿರಲಿ ಎಂದು ಅಭಿನಂದಿಸಿದರು.

Follow Us:
Download App:
  • android
  • ios