Asianet Suvarna News Asianet Suvarna News

ಸೌಜನ್ಯ ಹತ್ಯೆ ಮರುತನಿಖೆಗೆ ಕೇಂದ್ರಕ್ಕೆ ಪತ್ರ: ಸಿದ್ದರಾಮಯ್ಯ

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 

Letter to Center to re investigate Sowjanya killing Says CM Siddaramaiah gvd
Author
First Published Aug 24, 2023, 10:01 AM IST

ಬೆಂಗಳೂರು (ಆ.24): ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಸೌಜನ್ಯ ಪ್ರಕರಣವನ್ನು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ಸರ್ಕಾರ ಸಿದ್ಧವಿದ್ದು, ಅದಕ್ಕೂ ಮುನ್ನ ಸೌಜನ್ಯ ಪೋಷಕರು ಮರುತನಿಖೆಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಸಾಹಿತಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ಸಭೆ ನಡೆಸಿದರು. ಈ ವೇಳೆ ಸಾಹಿತಿಗಳು ಸೌಜನ್ಯ ಪ್ರಕರಣ ಮರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದರು.

ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, ಸೌಜನ್ಯ ಕೊಲೆ ಪ್ರಕರಣ ಮರುತನಿಖೆ ನಡೆಸುವಂತೆ ಆಕೆಯ ಪೋಷಕರು ಕೇಂದ್ರ ಸರ್ಕಾರವನ್ನು ಕೋರಬೇಕಿದೆ. ಅದರ ಬೆನ್ನಲ್ಲೇ ರಾಜ್ಯ ಸರ್ಕಾರವೂ ಮರುತನಿಖೆ ನಡೆಸಲು ಪತ್ರ ಬರೆಯಲಿದೆ. ಅಲ್ಲದೆ, ಪ್ರಕರಣ ಕುರಿತಂತೆ ಹಾಗೂ ಮರುತನಿಖೆ ನಡೆಸಲು ಕೇಂದ್ರದ ಮೇಲೆ ಒತ್ತಡ ತರುವ ಬಗ್ಗೆ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಎಲೆಕ್ಟ್ರಾನಿಕ್‌ ಸಿಟಿಗೆ ಮೆಟ್ರೋ ಮತ್ತಷ್ಟು ಕಾಲ ವಿಳಂಬ: ಯಾಕೆ ಗೊತ್ತಾ?

ಸೌಜನ್ಯ ಹತ್ಯೆ ಆರೋಪಿಗಳ ವಿಧಾನಸೌಧಕ್ಕೆ ಜಾಗೃತಿ ಯಾತ್ರೆ: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪುನರ್‌ ತನಿಖೆ ನಡೆಸಿ ನೈಜ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಧರ್ಮಸ್ಥಳದ ಸೌಜನ್ಯ ಮನೆಯಿಂದ ವಿಧಾನಸೌಧದವರೆಗೂ ಜನಜಾಗೃತಿ ಯಾತ್ರೆ ನಡೆಸಲಾಗುವುದು ಎಂದು ತ್ರಿಶೂಲ ಸೇನೆ ಸಂಘಟನೆಯ ಅಧ್ಯಕ್ಷ ಗಂಗಾಧರ ರಾಜು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.25 ರಿಂದ ಧರ್ಮಸ್ಥಳದ ಸೌಜನ್ಯ ಮನೆಯಿಂದ ಜನಜಾಗೃತಿ ಯಾತ್ರೆ ಆರಂಭವಾಗಲಿದ್ದು ಯಾರು ಬೇಕಾದರೂ ಪಾಲ್ಗೊಳ್ಳಬಹುದು. ದಾರಿ ಮಧ್ಯೆ ಸಿಗುವ ಪ್ರಮುಖ ನಗರಗಳಲ್ಲಿ ಪಾದಯಾತ್ರೆ ನಡೆಸಿ ಜನರಿಗೆ ಪ್ರಕರಣದ ಬಗ್ಗೆ ವಿವರಿಸಲಾಗುವುದು. ಯಾತ್ರೆಯು ಆ.28ಕ್ಕೆ ವಿಧಾನಸೌಧ ತಲುಪಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ವಿವರಿಸಿದರು.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳ ಬಂಧನವಾಗಿಲ್ಲ. ಆದ್ದರಿಂದ ಪ್ರಕರಣದ ಮರು ತನಿಖೆ ನಡೆಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸೌಜನ್ಯ ಪ್ರಕರಣ ತನಿಖೆಗೆ ವಿಶೇಷ ತನಿಖಾದಳ ರಚಿಸಲು ಆಗ್ರಹ: ಧರ್ಮಸ್ಥಳದಲ್ಲಿ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣದ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ದಳ ರಚಿಸುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಮಂಡ್ಯದಲ್ಲಿ ಬುಧವಾರ ಪ್ರತಿಭಟನೆ ನಡೆಸಿತು. ನಗರದ ಸರ್‌ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಮೆರವಣಿಗೆ ಹೊರಟ ಸಂಘಟನೆ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಗ್ರಾಹಕರ ಸೋಗಿನಲ್ಲಿ ಆಂಧ್ರದಿಂದ ಬೆಂಗಳೂರಿಗೆ ಬಂದು ಸೀರೆ ಕದಿಯುತ್ತಿದ್ದ ಗ್ಯಾಂಗ್‌ ಅರೆಸ್ಟ್!

ಸೌಜನ್ಯ ಪ್ರಕರಣ ಕುರಿತು ಮರುತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿರುವ ಗೃಹ ಸಚಿವ ಪರಮೇಶ್ವರ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. 2012ರಲ್ಲಿ ವಿದ್ಯಾರ್ಥಿನಿ ಸೌಜನ್ಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಯಿತು. ಸಿಓಡಿ, ಸಿಐಡಿ, ಸಿಬಿಐ ತನಿಖೆ ನಡೆದು ಅಮಾಯಕ ಸಂತೋಷ್‌ರಾವ್‌ನನ್ನು ಆರೋಪಿ ಎಂದು ಬಿಂಬಿಸಿದವು, ಆದರೆ, ಸಿಬಿಐ ನ್ಯಾಯಾಲಯ ಆತನನ್ನು ನೀರ್ದೋಷಿ ಎಂದು ಬಿಡುಗಡೆ ಮಾಡಿದೆ. ನಿಜವಾದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಬಿಐ ಕೂಡ ವಿಫಲವಾಗಿದೆ ಎಂದು ದೂರಿದರು.

Follow Us:
Download App:
  • android
  • ios