Asianet Suvarna News Asianet Suvarna News

ರಾಜ್ಯಾದ್ಯಂತ ಎರಡು ದಿನ ಹಗುರ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 24 ಘಂಟೆಗಳು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮತ್ತು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Light rain is likely for two days across the state
Author
First Published Nov 23, 2022, 3:55 PM IST

ಬೆಂಗಳೂರು (ನ.23): ರಾಜ್ಯದಲ್ಲಿ ಮುಂದಿನ ಎರಡು ದಿನಗಳಲ್ಲಿ ಹಗುರ ಮಳೆಯಾಗಲಿದೆ. ಮುಂದಿನ 24 ಘಂಟೆಗಳು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರ ಮತ್ತು ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡು (Southern hinterland), ಕರಾವಳಿ (Coast) ಮತ್ತು ಉತ್ತರ ಒಳನಾಡಿನ (Northern hinterland) ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ  ಮಳೆಯಾಗುವ (Light rain) ಸಾಧ್ಯತೆಯಿದೆ. ನ. 25ರ ಬೆಳಗ್ಗೆವರೆಗೆ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ಇದೆ. ಜತೆಗೆ, ಮುಂದಿನ 24 ಗಂಟೆಗಳವರೆಗೂ ಬೆಂಗಳೂರು ನಗರದಲ್ಲಿ (Bangalore City) ಮೋಡ ಕವಿದ ವಾತಾವರಣ ಕಂಡುಬರಲಿದೆ. ಜೊತೆಗೆ ಹಗುರ ಮಳೆ ಆಗಲಿದ್ದು, ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ (Cloudy weather) ಮುಂದುವರಿಯಲಿದೆ.

ಮೈಕೊರೆಯುವ ಚಳಿ ಮಧ್ಯೆ ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ..!

ಬೆಂಗಳೂರಿನ ವಿವಿಧೆಡೆ ತುಂತುರು ಮಳೆ: ರಾಜಧಾನಿಯ ವಿವಿಧ ಕಡೆಗಳಲ್ಲಿ ಬುಧವಾರ ಮಧ್ಯಾಹ್ನದಿಂದ ತುಂತುರು ಮಳೆ (A shower of rain) ಆರಂಭವಾಗಿದೆ. ಬೆಳಗ್ಗೆಯಿಂದಲೇ ನಗರದಾದ್ಯಂತ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಬಳಿಕ ಜಿಟಿಜಿಟಿ ಮಳೆ ಪ್ರಾರಂಭವಾಗಿದೆ. ಇದರಿಂದ ಬೈಕ್‌ ಸೇರಿ ಇತರೆ ವಾಹನ ಸವಾರರಿಗೆ ಅಡಚಣೆ ಉಂಟಾಗಿದೆ. ವಿವಿಧೆಡೆ ಟ್ರಾಫಿಕ್‌ ಜಾಮ್‌ (Traffic jam) ಕಂಡುಬಂದಿತು. ಈಗಾಗಲೇ ಹವಾಮಾನ ಇಲಾಖೆಯಿಂದ ಬಿಬಿಎಂಪಿ ವ್ಯಾಪ್ತಿಯ ಬಹುತೇಕ ಕಡೆ 24 ಗಂಟೆಗಳ ಕಾಲ ಮಳೆ ಮುನ್ಸೂಚನೆ (Rain forecast) ನೀಡಿದೆ. ಆದರೆ, ಯಲಹಂಕ ವಲಯದ ಬಹುತೇಕ ಕಡೆ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮಹದೇವಪುರ, ಪೂರ್ವವಲಯ, ಪಶ್ಚಿಮ ವಲಯ , ದಕ್ಷಿಣ ವಲಯ, ದಾಸರಹಳ್ಳಿ ವಲಯದಲ್ಲಿ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಬೊಮ್ಮನಹಳ್ಳಿ, ಆರ್.ಆರ್. ನಗರ ವಲಯಗಳ ಕೆಲ ಭಾಗಗಳಲ್ಲಿ ಸಂಜೆಯೊಳಗೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಳಿಯ ವಾತಾವರಣ: ಬೆಂಗಳೂರು ಸೇರಿ ರಾಜ್ಯಾದ್ಯಂತ ಚಳಿಯ ವಾತಾವರಣ (cold weather) ಇರುತ್ತದೆ. ವಾತಾವರಣದಲ್ಲಿ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್‌ ಇದ್ದು, ಗರಿಷ್ಠ 25 ಡಿಗ್ರಿ ಸೆಲ್ಸಿಯಸ್‌ ಇರುತ್ತದೆ. ವೈಜ್ಞಾನಿಕವಾಗಿ ಸಾಮಾನ್ಯ ಕೋಣೆಯ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್‌ ಹಾಗೂ ಮನುಷ್ಯನ ದೇಹದ ಸಾಮಾನ್ಯ ಉಷ್ಣಾಂಶ 37 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಆದರೆ, ವಾತಾವರಣದಲ್ಲಿ ಉಷ್ಣಾಂಶ ಇದಕ್ಕಿಂತಲೂ ಕಡಿಮೆ ಇರುವ ಹಿನ್ನೆಲೆಯಲ್ಲಿ ಚಳಿಯಾಗಲಿದೆ. ಇನ್ನು ಡಿಸೆಂಬರ್‍‌ (December) ಆರಂಭದ ನಂತರ ಮತ್ತಷ್ಟು ಚಳಿಯ ವಾತಾವರಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Follow Us:
Download App:
  • android
  • ios