Asianet Suvarna News Asianet Suvarna News

ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ, ಭಾನುವಾರದ ಬಳಿಕ ಇಳಿಕೆ

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆ ಮಳೆಯಾದ ವರದಿಯಾಗಿದೆ. ಶಿವಮೊಗ್ಗದ ಹುಂಚದಕಟ್ಟೆಯಲ್ಲಿ ಅತಿ ಹೆಚ್ಚು 6 ಸೆಂ.ಮೀ ಮಳೆಯಾದ ವರದಿಯಾಗಿದೆ.

Likely 2 More Days of Rain in Karnataka grg
Author
First Published May 25, 2023, 3:00 AM IST

ಬೆಂಗಳೂರು(ಮೇ.25): ರಾಜ್ಯದಲ್ಲಿ ಶನಿವಾರದವರೆಗೆ ಮಳೆ ಮುಂದುವರೆಯಲಿದ್ದು, ಭಾನುವಾರದಿಂದ ಮಳೆಯ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಹಲವೆಡೆ ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ ಒಂದೆರಡು ಕಡೆ ಮಳೆಯಾದ ವರದಿಯಾಗಿದೆ. ಶಿವಮೊಗ್ಗದ ಹುಂಚದಕಟ್ಟೆಯಲ್ಲಿ ಅತಿ ಹೆಚ್ಚು 6 ಸೆಂ.ಮೀ ಮಳೆಯಾದ ವರದಿಯಾಗಿದೆ.

ಅತಿವೃಷ್ಟಿ: ಜೀವಹಾನಿ ತಡೆಗೆ ಕಟ್ಟು ನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದು ಸೂಚನೆ

ಚಿಕ್ಕಮಗಳೂರಿನ ಕಮ್ಮರಡಿ ಹಾಗೂ ಜಯಪುರದಲ್ಲಿ ತಲಾ 5 ಸೆಂ.ಮೀ ಮಳೆಯಾಗಿದೆ. ಹಾಸದ ಶ್ರವಣಬೆಳಗೊಳ 4, ಧರ್ಮಸ್ಥಳ, ಅರಕಲಗೂಡು, ಬೆಂಗಳೂರು ನಗರದಲ್ಲಿ ತಲಾ 3 ಸೆಂ.ಮೀ ಮಳೆಯಾದ ವರದಿಯಾಗಿದೆ. ಕಲಬುರಗಿಯಲ್ಲಿ ಅತಿ ಹೆಚ್ಚು 41.5 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Follow Us:
Download App:
  • android
  • ios