ಕರ್ನಾಟಕದ 23 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ: ಯೆಲ್ಲೋ ಅಲರ್ಟ್
ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು(ಆ.21): ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 23 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರಲ್ಲಿ ಭಾರೀ ಮಳೆ; ಆಟೋ ಮೇಲೆ ಬಿದ್ದ ಬೃಹತ್ ಮರ! ಚಾಲಕ, ಪ್ರಯಾಣಿಕರಿಗೆ ಗಾಯ!
ಗುರುವಾರದಿಂದ ಉತ್ತರ ಒಳನಾಡು ಭಾಗದ ಜಿಲ್ಲೆಗಳು, ಶುಕ್ರವಾರದಿಂದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಿನ್ನೆ ಗಂಗಾವತಿಯಲ್ಲಿ 9 ಸೆಂ.ಮೀ. ಮಳೆ:
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ಪ್ರಕಾರ ಕಳೆದ 24 ಗಂಟೆಯಲ್ಲಿ ಗಂಗಾವತಿ, ಬೆಳ್ಳೂರು ಹಾಗೂ ಕುರ್ಡಿಯಲ್ಲಿ ಅತಿ ಹೆಚ್ಚು 9 ಸೆಂ.ಮೀ ಮಳೆಯಾಗಿದೆ. ಕಂಪ್ಲಿ 8, ಗಂಗಾವತಿ ಅರ್ಗೆ, ಮಾನ್ವಿ, ಕುಡತಿನಿಯಲ್ಲಿ ತಲಾ 7, ರಾಯಚೂರು, ಮಸ್ಕಿ, ಸಿರುಗುಪ್ಪ, ಗುಬ್ಬಿ, ಬಾಳೆಹೊನ್ನೂರು, ಕಡೂರಿನಲ್ಲಿ ತಲಾ 6, ಹುಣಸಗಿ, ಅಡಕಿ, ಲೋಂಡಾ, ಹೊಸಪೇಟೆ, ಗೌರಿಬಿದನೂರು, ಬಳ್ಳಾರಿ, ಹರಪನಹಳ್ಳಿಯಲ್ಲಿ ತಲಾ 5, ಕುಮಟಾ, ಸೇಡಂ, ಚಿಟಗುಪ್ಪ, ಹುಮನಾಬಾದ್, ದಾವಣಗೆರೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಚಾಮರಾಜನಗರ ಹಾಗೂ ಕೃಷ್ಣರಾಜಪೇಟೆಯಲ್ಲಿ ತಲಾ 4 ಸೆಂ.ಮೀ ಮಳೆಯಾದ ವರದಿಯಾಗಿದೆ.