ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆ ಪ್ರಮಾಣ ಇಳಿಕೆ ಆಗಲಿದೆ. 

ಬೆಂಗಳೂರು(ಜು.28): ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 11ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ಎಚ್ಚರಿಕೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉಳಿದಂತೆ ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ. ಇನ್ನು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ ಮಳೆ ಪ್ರಮಾಣ ಇಳಿಕೆ ಆಗಲಿದೆ. ಜು.30ರ ನಂತರ ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಕಡಿಮೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ತಗ್ಗಿದ ಮಳೆ, ತಗ್ಗದ ನೆರೆ: ಕಲ್ಯಾಣ ಕರ್ನಾಟಕ ಸೇರಿ ಕೆಲವೆಡೆ ಪ್ರವಾಹ ಮುಂದುವರಿಕೆ

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉತ್ತರ ಕನ್ನಡದ ಕ್ಯಾಸಲ್‌ರಾಕ್‌ನಲ್ಲಿ ಅತಿ ಹೆಚ್ಚು 17 ಸೆಂ.ಮೀ., ಕದ್ರಾ ಹಾಗೂ ಮುಲ್ಕಿಯಲ್ಲಿ ತಲಾ 11, ಸಿದ್ದಾಪುರ 10, ಗೋಕರ್ಣ, ಕುಮಟಾ, ಕುಂದಾಪುರ, ಜೋಯಿಡಾದಲ್ಲಿ ತಲಾ 8 ಸೆಂ.ಮೀ. ಮಳೆಯಾಗಿದೆ.