ರಾಜ್ಯದಲ್ಲಿ ಇಂದು ಭಾರಿ ಮಳೆ ಸಾಧ್ಯತೆ: ಕರಾವಳಿಗೆ ಯೆಲ್ಲೊ ಅಲರ್ಟ್ ಮುನ್ಸೂಚನೆ
ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಮೂರು ಜಿಲ್ಲೆ ಹಾಗೂ ಕೊಡಗಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ "ಯೆಲ್ಲೋ ಅಲರ್ಟ್" ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು (ಸೆ.15): ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯ ಮೂರು ಜಿಲ್ಲೆ ಹಾಗೂ ಕೊಡಗಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ 'ಯೆಲ್ಲೋ ಅಲರ್ಟ್' ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಮತ್ತು ಮಲೆನಾಡು ಭಾಗದ ಕೊಡಗು ಜಿಲ್ಲೆಯಲ್ಲಿ 6 ಸೆಂ.ಮೀನಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದರ ಪ್ರಭಾವದಿಂದ ರಾಜ್ಯದಲ್ಲಿ ಸ್ವಲ್ಪ ಮಟ್ಟಿಗೆ ಮುಂಗಾರು ಚುರುಕುಗೊಂಡಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿಯ ಭಾಗದಲ್ಲಿ ಮುಂದಿನ ಐದು ದಿನ, ದಕ್ಷಿಣ ಒಳನಾಡಿದ ವಿವಿಧ ಜಿಲ್ಲೆಗಳಲ್ಲಿ ಮೂರು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಸೆ.17 ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ, ದಕ್ಷಿಣದ ಪಪ್ಪು ಉದಯನಿಧಿ ಸ್ಟಾಲಿನ್: ಶ್ರೀರಾಮುಲು
ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಉಡುಪಿಯಲ್ಲಿ 3 ಸೆಂ.ಮೀ ಮಳೆಯಾದ ವರದಿಯಾಗಿದೆ. ಮಂಗಳೂರು, ಕಾರ್ಕಳ, ಕೊಲ್ಲೂರು, ಗೋಕರ್ಣ, ಕೊಪ್ಪ, ಸಕಲೇಶಪುರ , ಬೆಳ್ಳೂರು, ಬೆಂಗಳೂರು ನಗರ, ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್ (ಬೆಂಗಳೂರು ನಗರ ಜಿಲ್ಲೆ) ತಲಾ 2, ಪಣಂಬೂರು, ಧರ್ಮಸ್ಥಳ, ಪುತ್ತೂರು, ಸುಳ್ಯ, ಗೇರುಸೊಪ್ಪ, ಕುಮಟಾ, ಮುರಗೋಡು, ಮುದಗಲ್, ಸೋಮವಾರಪೇಟೆ, ಮಂಡಗದ್ದೆ , ಬೆಂಗಳೂರು ಎಚ್‌ಎಎಲ್ ವಿಮಾನ ನಿಲ್ದಾಣ, ಆನೇಕಲ್, ಹೆಬ್ಬೂರು, ಕನಕಪುರದಲ್ಲಿ ತಲಾ 1 ಸೆಂ.ಮೀ ಮಳೆಯಾದ ವರದಿಯಾಗಿದೆ.
ಅಮಾವಾಸ್ಯೆ ಬಳಿಕ ರಾಜ್ಯದಲ್ಲಿ ಉತ್ತಮ ಮಳೆ: ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ ಆತಂಕಪಡುವ ಅಗತ್ಯವಿಲ್ಲ, ಕಾರ್ತಿಕ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಂಭವಗಳಿವೆ ಎಂದು ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಪ್ರಸಿದ್ಧ ಸುಕ್ಷೇತ್ರ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಹೊನ್ನಾಳಿ ನಿವಾಸಿ ನಾಗವೇಣಿ ಮಂಜುನಾಥ ನಿವಾಸಕ್ಕೆ ಬುಧವಾರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮನುಷ್ಯ ಮಾಡಿದ ತಪ್ಪುಗಳ ಭಗವಂತ ಕ್ಷಮಿಸುತ್ತಾನೆ ಆದರೆ ತಿಳಿದೂ ತಪ್ಪುಗಳನ್ನು ಮಾಡಿದಾಗ ಕ್ಷಮಿಸಲಾರ ಇತ್ತೀಚಿನ ದಿನಗಳಲ್ಲಿ ಗೊತ್ತಿದ್ದೂ ಮನುಷ್ಯ ಪ್ರಕೃತಿ,ನೆಲ, ಜಲ ಇವುಗಳ ನಿರಂತರ ದುರುಪಯೋಗ ಪಡಿಸುತ್ತಿರುವ ಕಾರಣ ನಾವು ಅನೇಕ ರೀತಿಯ ಪ್ರಕೃತಿ ವಿಕೋಪಗಳನ್ನು ನೋಡುತ್ತಿದ್ದೇವೆ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಜನರಿಗೆ ಆರೋಗ್ಯ ಸೇವೆ ನೀಡಲು ಬದ್ದ: ಸಚಿವ ದಿನೇಶ್ ಗುಂಡೂರಾವ್
ಯಾವುದು ಮನುಷ್ಯನಿಗೆ, ಸಮಾಜಕ್ಕೆ ಶಾಂತಿ,ನೆಮ್ಮದಿ ನೀಡುತ್ತದೆಯೋ ಅದುವೆ ಧರ್ಮ. ಇನ್ನು ಸಮಾತನ ಧರ್ಮದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಈ ಬಗ್ಗೆ ಈಗಾಗಲೇ ಹುಬ್ಬಳಿಯಲ್ಲಿ ಮಾತನಾಡಿದ್ದೇನೆ ಪದೇ ಪದೇ ಹೇಳುವ ಅಗತ್ಯವಿಲ್ಲ ಎಂದು ಹೇಳಿದರು. ಧರ್ಮ ಮತ್ತು ರಾಜಕಾರಣದ ಕುರಿತು ಮಾತನಾಡಿ ನೀರಿನ ಮೇಲೆ ದೊಣಿ ಇರಬೇಕೇ ಹೊರತು ದೋಣಿಯೊಳಗೆ ನೀರು ಬಂದರೆ ಆಪಾಯ ತಪ್ಪದು ಎಂದು ಸೂಚ್ಯವಾಗಿ ಹೇಳಿದರು. ರಾಜಕಾರಣಿಗಳಾಗಲಿ, ಗುರುಗಳಾಗಲಿ ಸಮಾಜದಲ್ಲಿ ಶಾಂತಿ ನಿರ್ಮಿಸುವ ಹೇಳಿಕೆಗಳ ನೀಡಬೇಕು ಅಶಾಂತಿ ನಿರ್ಮಿಸುವಂತಹ ಹೇಳಿಕೆ ನೀಡದಿರಲು ಸಲಹೆ ನೀಡಿದರು.