ಇಂದು ಬೀದರ್‌, ಕಲಬುರಗಿ ಹಾಗೂ ನಾಳೆ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗೆ ಯಲ್ಲೊ ಅಲರ್ಟ್‌ ನೀಡಲಾಗಿದೆ. ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. 

ಬೆಂಗಳೂರು(ಸೆ.03): ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು(ಭಾನುವಾರ) ಮತ್ತು ನಾಳೆ(ಸೋಮವಾರ) ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಇಂದು ಬೀದರ್‌, ಕಲಬುರಗಿ ಹಾಗೂ ನಾಳೆ ಕಲಬುರಗಿ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗೆ ಯಲ್ಲೊ ಅಲರ್ಟ್‌ ನೀಡಲಾಗಿದೆ. ಬೆಳಗಾವಿ, ಚಾಮರಾಜನಗರ, ಕೋಲಾರ, ರಾಮನಗರ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. 

ಚಿಕ್ಕಮಗಳೂರು: ಕೈಕೊಟ್ಟ ವರುಣದೇವ, ಮಳೆಗಾಗಿ 37 ವರ್ಷದ ಹಿಂದಿನ ಆಚರಣೆಗೆ ಮುಂದಾದ ಮಲೆನಾಡಿಗರು..!

ಬೆಂಗಳೂರಿನ ರಾಜರಾಜೇಶ್ವರಿ ನಗರ, ಕೆಂಗೇರಿ, ಕೋಣನಕುಂಟೆ, ಉತ್ತರಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್‌ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದ್ದು, ಸೆ. 7ರವರೆಗೂ ರಾಜ್ಯದ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.