Asianet Suvarna News Asianet Suvarna News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ..!

ಗುರುವಾರದಿಂದ (ಡಿ.8) ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಭರ್ಜರಿ ಮಳೆಯ ಆಗುವ ಸಂಭವ. 

Likely Rain in Some Parts of Karnataka grg
Author
First Published Dec 7, 2022, 2:00 AM IST

ಬೆಂಗಳೂರು(ಡಿ.07): ಗುರುವಾರದಿಂದ (ಡಿ.8) ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಭರ್ಜರಿ ಮಳೆಯ ಆಗುವ ಸಂಭವವಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಸುರಿಯುವ ಸಾಧ್ಯತೆಯಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

ದಕ್ಷಿಣ ಅಂಡಮಾನ್‌ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದ್ದು ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಬದಲಾಗುವ ಲಕ್ಷಣಗಳಿವೆ. ಅಲ್ಲಿಂದ ವಾಯುವ ದಿಕ್ಕಿನತ್ತ ಚಲಿಸಿ ಚಂಡಮಾರುತವಾಗಿ ಬದಲಾಗಿ ತಮಿಳುನಾಡು, ಪಾಂಡಿಚೇರಿ ಮತ್ತು ದಕ್ಷಿಣ ಆಂಧ್ರ ಪ್ರದೇಶ ಕರಾವಳಿಗೆ ಗುರುವಾರ ಅಪ್ಪಳಿಸಲಿದೆ ಎಂದು ಹವಾಮಾನ ಕೇಂದ್ರ ಮಾಹಿತಿ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕರ್ನಾಟಕ ಸೇರಿ 3 ರಾಜ್ಯದಲ್ಲಿ ಮುಂದಿನ 5 ದಿನ ಮಳೆ, ಹವಾಮಾನ ಇಲಾಖೆ ಎಚ್ಚರಿಕೆ!

ಮಂಗಳವಾರ ಬೆಳಗ್ಗೆ 8.30ರ ತನಕ ರಾಜ್ಯಾದ್ಯಂತ ಒಣಹವೆ ಇತ್ತು. ಅತ್ಯಂತ ಕನಿಷ್ಠ ತಾಪಮಾನ ಬಾಗಲಕೋಟೆಯಲ್ಲಿ 10.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಹೊನ್ನಾವರದಲ್ಲಿ ಗರಿಷ್ಠ 35.4 ಡಿಗ್ರಿ ಸೆಲ್ಸಿಯಸ್‌ ವರದಿಯಾಗಿದೆ.

ಎಲ್ಲೆಲ್ಲಿ ಮಳೆ

ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ರಾಮನಗರ ಜಿಲ್ಲೆ. 
 

Follow Us:
Download App:
  • android
  • ios