ಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ತುಂತುರು ಮಳೆ ಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಜ.19):  ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳು, ಕರಾವಳಿ ಕೆಲವಡೆ ಸೋಮವಾರ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಗಾಳ ಕೊಲ್ಲಿಯಲ್ಲಿ ಮಳೆ ಮಾರುತಗಳು ಚುರುಕುಗೊಂಡಿವೆ. ಹೀಗಾಗಿ, ದಕ್ಷಿಣ ಒಳನಾಡಿನ ಹಲವು ಭಾಗದಲ್ಲಿ ಈಗಾಗಲೇ ಮೋಡ ಕವಿದ ವಾತಾವರಣ ಇದೆ. ಸೋಮವಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಸ್ಥಳದಲ್ಲಿ ತುಂತುರು ಮಳೆ ಯಾಗುವ ಸಾಧ್ಯತೆ ಇದೆ. 

ರಾಜ್ಯದಲ್ಲಿಂದು ವರ್ಷದ ಮೊದಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಉಳಿದಂತೆ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಒಂದೆರಡು ಕಡೆ ಮಂಜು ಮುಸುಕಿನ ವಾತಾವರಣ ಇರಲಿದೆ. ಮಂಗಳವಾರದಿಂದ ಬಹುತೇಕ ರಾಜ್ಯದಲ್ಲಿ ಒಣ ಹವೆ ಇರಲಿದೆ. ರಾಜ್ಯದ ಒಳನಾಡಿನ ಕೆಲವಡೆ ಮಂಜು ಮುಸುಕಿನ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.