ವಾಯುಭಾರ ಕುಸಿತ: ಕರ್ನಾಟಕದಲ್ಲಿ ಡಿ. 30ರವರೆಗೆ ಮಳೆ..!
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 30ರವರೆಗೆ ಮೋಡ ಕವಿದ ವಾತಾವರಣ ಮತ್ತು ಹಗುರ ಮಳೆಯಾಗುವ ಸಂಭವವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು(ಡಿ.26): ನೈಋುತ್ಯ ಬಂಗಾಳ ಕೊಲ್ಲಿಯಲ್ಲಿ ಸಂಭವಿಸಿರುವ ಪ್ರಬಲ ವಾಯಭಾರ ಕುಸಿತದ ಪರಿಣಾಮವಾಗಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 30ರವರೆಗೆ ಮೋಡ ಕವಿದ ವಾತಾವರಣ ಮತ್ತು ಹಗುರ ಮಳೆಯಾಗುವ ಸಂಭವವಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಯಲ್ಲಿ ಡಿಸೆಂಬರ್ 30ರವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆ..!
ಉಳಿದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮಂಡ್ಯ ಮತ್ತು ರಾಮನಗರದಲ್ಲಿ ಡಿ. 27ರವರೆಗೆ ಮಳೆಯಾಗಲಿದೆ. ತುಮಕೂರಿನಲ್ಲಿ ಡಿ. 26ರವರೆಗೆ ಮಳೆಯಾಗುವ ನಿರೀಕ್ಷೆಯಿದೆ.