Asianet Suvarna News Asianet Suvarna News

ಕಾಂಗ್ರೆಸ್‌ ಗ್ಯಾರಂಟಿ ಯೋಜನೆ: ಅನ್ನಭಾಗ್ಯದಡಿ ಹಣಭಾಗ್ಯ ಬಂದ್‌?

ಸನ್ನಿಹಿತ ಹಣದ ಬದಲು ಹೆಚ್ಚುವರಿ 5 ಕೇಜಿ ಅಕ್ಕಿ ಪೂರೈಸಲು ರಾಜ್ಯದ ಸರ್ಕಾರದ ತಯಾರಿ ಕೇಂದ್ರದಿಂದ 28 ರು.ಗೆ ಸರ್ಕಾರಕ್ಕೆ ಅಕ್ಕಿ | ರಾಜ್ಯಕ್ಕೆ 144 ಕೋಟಿ ರು. ಉಳಿತಾಯ

likely stop 5 kg Extra rice money in karnataka grg
Author
First Published Aug 22, 2024, 10:08 AM IST | Last Updated Aug 22, 2024, 10:08 AM IST

ಬೆಂಗಳೂರು(ಆ.22):  ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ಇನ್ನು ಮುಂದೆ ಪ್ರತಿ ತಿಂಗಳು ತಲಾ 10 ಕೆ.ಜಿ. ಅಕ್ಕಿ ಲಭ್ಯವಾಗಲಿದ್ದು, ಡಿಬಿಟಿ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುತ್ತಿರುವ 5 ಕೆ.ಜಿ. ಹೆಚ್ಚುವರಿ ಅಕ್ಕಿಯ ಹಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. 

ಈ ಹಿಂದೆ ಹೆಚ್ಚುವರಿ ಅಕ್ಕಿ ಕೊಡಲು ನಿರಾಕರಿಸಿದ್ದ ಕೇಂದ್ರ ಸರ್ಕಾರ ಇದೀಗ ರಾಜ್ಯಕ್ಕೆ ಕೆ.ಜಿ.ಗೆ 28 ರು.ನಂತೆ 2025ರ ಮಾರ್ಚ್‌ವರೆಗೆ ಪ್ರತಿ ತಿಂಗಳು 2.36 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನೀಡಲು ಒಪ್ಪಿಗೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ತಲಾ 10 ಕೆ.ಜಿ. ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಆಸೆ ಈಡೇರಲಿದ್ದು, ಈಗಾಗಲೇ ಪ್ರಕ್ರಿಯೆ ಆರಂಭಗೊಂಡಿದೆ. 

ಸಿದ್ದರಾಮಯ್ಯ ಸರ್ಕಾರದ ಹೊಸ ವರಸೆ.. ಗ್ಯಾರಂಟಿ ಸ್ಕೀಮ್ ಭವಿಷ್ಯ ಏನು..?

ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಳುಹಿಸಿರುವ ಪ್ರಸ್ತಾವನೆಗೆ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಒಪ್ಪಿಗೆ ಕೊಟ್ಟಿದೆ. ಹೀಗಾಗಿ, ಶೀಘ್ರದಲ್ಲೇ ಈ ಯೋಜನೆಯಡಿ ಫಲಾನುಭವಿಗಳಿಗೆ ಹಣ ಬದಲು ಉಚಿತವಾಗಿ ಅಕ್ಕಿ ದೊರೆಯಲಿದೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್ ಎಸ್ಎ) ಅನ್ವಯದಂತೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಕೇಂದ್ರ ಸರ್ಕಾರ ರಾಜ್ಯದ1,16,95,029 ಬಿಪಿಎಲ್, 10,88,421 ಅಂತ್ಯೋದಯ ಕಾರ್ಡ್‌ಗಳಿಗೆ ಉಚಿತವಾಗಿ ಆಹಾರ ಪದಾರ್ಥ ವಿತರಿಸುತ್ತಿದೆ. ಹಾಗಾಗಿ, ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿ ಸದಸ್ಯನಿಗೆ 3 ಕೆ.ಜಿ. ಅಕ್ಕಿ, 2 ಕೆ.ಜಿ. ರಾಗಿ ಸೇರಿ ಒಟ್ಟು 5 ಕೆ.ಜಿ. ಹಾಗೂ ಪ್ರತಿ ಅಂತ್ಯೋದಯ ಕಾರ್ಡ್‌ಗೆ 20 ಕೆ.ಜಿ. ಅಕ್ಕಿ, 15 ಕೆ.ಜಿ. ರಾಗಿ ಸೇರಿ ಒಟ್ಟು 35 ಕೆ.ಜಿ. ಆಹಾರ ಪದಾರ್ಥ ಉಚಿತವಾಗಿ ಸಿಗುತ್ತಿದೆ. ಇದೀಗ ರಾಜ್ಯವು ಅನ್ನಭಾಗ್ಯ ಯೋಜನೆಯಡಿ ಪ್ರತಿ ಬಿಪಿಎಲ್ ಸದಸ್ಯನಿಗೆ ಹೆಚ್ಚುವರಿಯಾಗಿ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಅಕ್ಕಿ ನೀಡಿದರೆ ಒಟ್ಟು 10 ಕೆ.ಜಿ. ಆಹಾರ ಪದಾರ್ಥ ಸಿಕ್ಕಿದಂತಾಗುತ್ತದೆ. 

ರಾಜ್ಯಕ್ಕೆ 144 ಕೋಟಿ ರು. ಉಳಿತಾಯ: 

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್‌ನ ಪ್ರತಿ ಸದಸ್ಯನಿಗೆ ಕೆ.ಜಿ.ಗೆ 34 ರು.ನಂತೆ 5 ಕೆ.ಜಿ. ಅಕ್ಕಿಗೆ 170 ರು. ಹಣವನ್ನು ನೀಡಲಾಗುತ್ತಿತ್ತು. 

Latest Videos
Follow Us:
Download App:
  • android
  • ios