ಕಾಂಗ್ರೆಸ್‌ ಪಕ್ಷದಲ್ಲಿ ನಡೆದ ಅಧಿಕಾರ ಹಂಚಿಕೆ ತಿಕ್ಕಾಟ, ಬಿಜೆಪಿಯಲ್ಲಿನ ಒಳ ಬೇಗುದಿ ನಡುವೆಯೇ ಬೆಳಗಾವಿಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ.

ಬೆಳಗಾವಿ: ಇಂದಿನಿಂದ ಡಿಸೆಂಬರ್ 19ರವರೆಗೆ ಹತ್ತು ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಮೊದಲ ದಿನವಾದ ಇಂದು ವಿಧಾನಸಭೆಯಲ್ಲಿ ಸಂತಾಪ ಸೂಚನಾ ನಿರ್ಣಯ ಮಂಡನೆಯಾಗಲಿದೆ. ಪದ್ಮಶ್ರೀ ಸಾಲುಮರದ ತಿಮ್ಮಕ್ಕ, ಹಾಲಿ ಶಾಸಕರಾಗಿದ್ದ ಹೆಚ್‌.ವೈ ಮೇಟಿ, ಮಾಜಿ ಶಾಸಕ ಆ‌ರ್.ವಿ ದೇವರಾಜು, ಬಾಲಿವುಡ್ ನಟ ಧರ್ಮೇಂದ್ರ, ಹಿರಿಯ ನಟ ಉಮೇಶ್, ಹರೀಶ್ ರಾಯ್, ಹಿರಿಯ ಪತ್ರಕರ್ತ ಟಿಜೆಎಸ್ ಜಾರ್ಜ್, ಐಎಎಸ್‌ ಅಧಿಕಾರಿ ಮಹಾಂತೇಶ ಬೀಳಗಿ ಸೇರಿದಂತೆ ಹಲ ಗಣ್ಯರಿಗೆ ಸಂತಾಪ ಸೂಚಿಸಲಾಗುತ್ತದೆ. ಬಳಿಕ ಹಾಲಿ ಶಾಸಕ ಹೆಚ್.ವೈ ಮೇಟಿ ನಿಧನದ ಹಿನ್ನೆಲೆಯಲ್ಲಿ ಕಲಾಪವನ್ನ ನಾಳೆಗೆ ಮುಂದೂಡಿಕೆ ಮಾಡುವ ಸಾಧ್ಯತೆಗಳಿವೆ.

ಬೆಳಗಾವಿ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕಗಳು

1. ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ 2025

2. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ

3. ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ

4. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ

5. ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ

6. ಶ್ರೀ ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ

7. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ

8. ಕರ್ನಾಟಕ ಸಾಮಾಜೀಕ ಬಹಿಷ್ಕಾರ ತಡೆಗಟ್ಟುವಿಕೆ ವಿಧೇಯಕ

9. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ-2025

10. ಕರ್ನಾಟಕ ಸಾಮಾಜಿಕ ಬಹಿಷ್ಕಾರ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ-2025

11. ಕರ್ನಾಟಕ ಜಿಲ್ಲಾ ನ್ಯಾಯಾಂಗ ಸುಧಾರಣಾ ವಿಧೇಯಕ - 2025

12. ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನೆ

13. ಔಷಧಗಳು ಮತ್ತು ಸೌಂದರ್ಯವರ್ಧಕಗಳು (ಕರ್ನಾಟಕ ತಿದ್ದುಪಡಿ) ವಿಧೇಯಕ 2025"ಕ್ಕೆ ಅನುಮೋದನೆ

14. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) (ತಿದ್ದುಪಡಿ) ವಿಧೇಯಕ 2025ಕ್ಕೆ ಅನುಮೋದನ

15. ಕರ್ನಾಟಕ ನ್ಯಾಯಾಂಗ ಸೇವೆ (ನೇಮಕಾತಿ) (ತಿದ್ದುಪಡಿ) ನಿಯಮಗಳು 2025ಕ್ಕೆ ಅನುಮೋದನೆ

16. ಚಂದ್ರಗುತ್ತಿ ಶ್ರೀ ರೇಣುಕಾಂಬ ಅಭಿವೃದ್ಧಿ ಪ್ರಾಧಿಕಾರ, ವಿಧೇಯಕ 2025"ಕ್ಕೆ ಅನುಮೋದನೆ

17. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ಎರಡನೇ ತಿದ್ದುಪಡಿ) ವಿಧೇಯಕ 2025 ಕ್ಕೆ ಅನುಮೋದನೆ

18. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳು (ತಿದ್ದುಪಡಿ) ವಿಧೇಯಕ 2025"ಕ್ಕೆ ಅನುಮೋದನೆ

19. ಕರ್ನಾಟಕ ರಾಜ್ಯ ಹಜ್ ಸಮಿತಿ ನಿಯಮಾವಳಿ, 2025"ಕ್ಕೆ ಅನುಮೋದನೆ

ಇದನ್ನೂ ಓದಿ: ಬೆಂಗಳೂರಿನ ಬೀದಿ ನಾಯಿಗಳಿಗೆ ಪ್ರತಿನಿತ್ಯ 2 ಬಾರಿ ಚಿಕನ್‌ ರೈಸ್‌ !

ಇದನ್ನೂ ಓದಿ: ಅಭಿವೃದ್ಧಿಗಾಗಿ ಬೆಳಗಾವಿ ಜಿಲ್ಲೆ ವಿಭಜನೆ ಅತ್ಯಗತ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್