ಈಗಾಗಳೇ ರಾಜ್ಯದ ಲೋಕಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಚುನಾವಣೆ ಈಗಷ್ಟೇ ಘೋಷಣೆಯಾಗಿರುವುದರಿಂದ ಅಭ್ಯರ್ಥಿ ಘೋಷಿಸಲು ಒಂದೆರಡು ದಿನ ಸಮಯ ಬೇಕಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ. 

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಮುಂದೂಡುವಂತೆ ಕಾಂಗ್ರೆಸ್‌ ಪಕ್ಷಕ್ಕೆ ನಾನು ಸಲಹೆ ನೀಡಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಭಾನುವಾರ ನಗರದಲ್ಲಿ ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಸಾಧ್ಯವಾದಷ್ಟುಬೇಗ ಸಚಿವ ಸಂಪುಟ ವಿಸ್ತರಣೆ ಮತ್ತು ನಿಗಮ ಮಂಡಳಿಗಳ ನೇಮಕ ಮಾಡುವಂತೆ ಸಲಹೆ ನೀಡಿದ್ದೇನೆ. ಆದರೆ, ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿಲ್ಲ ಎಂದು ತಿಳಿಸಿದರು.

ಉಪ ಚುನಾವಣೆ ಸ್ಪರ್ಧೆಯ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಚುನಾವಣೆ ಈಗಷ್ಟೇ ಘೋಷಣೆಯಾಗಿರುವುದರಿಂದ ಅಭ್ಯರ್ಥಿ ಘೋಷಿಸಲು ಒಂದೆರಡು ದಿನ ಸಮಯ ಬೇಕಿದೆ. ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ ಎಂದು ಹೇಳಿದರು.