ಬೆಳಗಾವಿ :  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಛೆ ಇದೆ ಎಂದು ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು. ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ, ಬೆಳಗಾವಿ ಗ್ರಾಮೀಣ, ಬೈಲಹೊಂಗಲ ಶಾಸಕರು ಬೆಂಬಲ ಹಾಗೂ ಕಾಂಗ್ರೆಸ್‌ ಹೈಕಮಾಂಡ್‌ ಟಿಕೆಟ್‌ ನೀಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ. 

ಕಾಂಗ್ರೆಸ್‌ ಟಾರ್ಗೆಟ್‌ ಈಗ ಮೋದಿಯಷ್ಟೇ ಅಲ್ಲ!

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುಮಾರು 75 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು. ಬೆಳಗಾವಿಯ ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ಕ್ಷೇತ್ರಗಳಲ್ಲಿ ತಮ್ಮ ಬೆಂಬಲಿಗರಿದ್ದಾರೆ. ನಾನು ಸ್ಪರ್ಧೆ ಮಾಡಿದರೆ ಗೆಲವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಡೆಗೆ ಮಾಜಿ ಸಿಎಂ ಗುಡ್ ಬೈ : ಮುಂದಿನ ನಡೆ ಎತ್ತ..?

ಚಿಕ್ಕೋಡಿ ಸಂಸದನಾಗಿ ಕಳೆದ 5 ವರ್ಷಗಳಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದೇನೆ. ಚಿಕ್ಕೋಡಿ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಬಿಜೆಪಿಯಿಂದ ಯಾರೇ ಸ್ಪರ್ಧೆ ಮಾಡಿದರೂ ನನ್ನ ಗೆಲವು ನಿಶ್ಚಿತ. ಆದರೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಟಿಕೆಟ್‌ ನೀಡಿದರೆ ಸ್ಪರ್ಧೆ ಮಾಡುವುದಾಗಿ ಹೇಳಿದರು.