ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲು ಹಣವಿಲ್ಲ ಎಂದಿದ್ರು: ಲಕ್ಷ್ಮಣ್ ಸವದಿ ವಾಗ್ದಾಳಿ

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲು ಹಣವಿಲ್ಲ. ಅನುದಾನ ಎಲ್ಲಿಂದ ತರಲಿ ಎಂದಿದ್ದರು. ಬಿಜೆಪಿಯವರಿಗೆ ಹತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ರು. ಕರ್ನಾಟಕವನ್ನು ಗುಜರಾತ್ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತೇವೆ ಎಂದು ಹೇಳಿದ್ರು. ಆದರೆ ಗುಜರಾತ್ ಅಭಿವೃದ್ಧಿ ಇಲ್ಲ, ಇರುವ ಯೋಜನೆಗಳಿಗೆ ಅನುದಾನವೂ ಕೊಡಲಿಲ್ಲ ಎಂದು ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Lok sabha election 2024 Athani MLA Lakshman savadi outraged against BJP rav

ಚಿಕ್ಕೋಡಿ (ಮಾ.25): ಎರಡು ದಿನಗಳ ಹಿಂದೆ ಸಚಿವರು ಪೂರ್ವಭಾವಿ ಸಭೆಯನ್ನು ಶಿವಯೋಗಿ ನಾಡು ಅಥಣಿಯಿಂದಲೇ ಮಾಡೋಣ ಎಂದಿದ್ರು. ಯಾವುದೇ ಪಕ್ಷದ ಮೊದಲ ಸಭೆ ಅಥಣಿಯಿಂದ ಆರಂಬಿಸಿದ್ರೆ ಅವರಿಗೆ ಚುನಾವಣೆಯಲ್ಲಿ ಗೆಲುವು ಸಿಗುತ್ತೆ ಅನ್ನೋ ನಂಬಿಕೆಯಿದೆ. ಹೀಗೆ ಅಥಣಿಯಲ್ಲಿ ಪೂರ್ವಭಾವಿ ಸಭೆ ಈಶಾನ್ಯ ದಿಕ್ಕಿನಿಂದ ನಡೆಸಿದ್ದೇವೆ ಎಂದು ಶಾಸಕ ಲಕ್ಷ್ಮಣ ಸವದಿ ನುಡಿದರು.

ಇಂದು ಅಥಣಿಯ ಶಿವಯೋಗಿ ಕಾರ್ಯಾಲಯದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ, ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಚುನಾವಣೆ ಗೆಲುವಿಗೆ ತಂತ್ರ-ಪ್ರತಿತಂತ್ರಗಳನ್ನು ರೂಪಿಸಬೇಕು. ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು ಮತ್ತು ಪ್ರತಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕೆಲಸಗಳನ್ನು ಜನರಿಗೆ ತಲುಪಿಸಬೇಕು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಹೇಗೆ ಕೆಲಸ ಮಾಡಬೇಕೆಂದು ಕಾರ್ಯಕರ್ತರಿಗೆ ವಿವರಿಸಿದರು.

 

ಬೆಳಗಾವಿ ಜಿಲ್ಲಾ ಬಿಜೆಪಿಯಲ್ಲಿ ಗಂಡಸರು ಇಲ್ವಾ?: ಲಕ್ಷ್ಮಣ ಸವದಿ

ಸಿಎಂ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ. ಐದು ಗ್ಯಾರಂಟಿ ಯೋಜನೆಗಳಿಗೆ 55 ಸಾವಿರ ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಅಥಣಿ ಪೂರ್ವಭಾಗದ ಜನರು ಬರಗಾಲದಿಂದ ಬಳಲುತ್ತಿದ್ದರು. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಾವರಿ ಯೋಜನೆಗೆ ಚಾಲನೆ ನೀಡುವ ಮೂಲಕ ಈ ಅಥಣಿ ಜನರ ನೀರಿನ ಬರ ನೀಗಿಸಿದ್ದಾರೆ ಎಂದರು.

ಅಥಣಿ ಕ್ಷೇತ್ರಕ್ಕೆ ನೀರಾವರಿ ಯೋಜನೆ ಅಷ್ಟೇ ಅಲ್ಲ, ಕಾಂಗ್ರೆಸ್ ಸರ್ಕಾರ ಅನೇಕ ಯೋಜನೆಗಳನ್ನು ನೀಡಿದೆ. ಹಲವಾರು ಯೋಜನೆಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದೆ ಎಂದು ಯೋಜನೆಗಳ ಬಗ್ಗೆ ವಿವರಿಸಿದರು.

ಯಡಿಯೂರಪ್ಪ ಹಾಗೂ ಈಶ್ವರಪ್ಪ ಇಬ್ಬರೂ ಕರ್ನಾಟಕದಲ್ಲಿ ಬಿಜೆಪಿ ಪಕ್ಷವನ್ನು ಬಲಪಡಿಸಿದರು. ಆದ್ರೆ ಈಶ್ವರಪ್ಪ ಮಗನಿಗೆ ಟಿಕೆಟ್ ನೀಡಲಿಲ್ಲ. ಶೆಟ್ಟರ್‌ಗೆ ಮೊದಲು ಬಾಲ ಕಟ್ ಮಾಡಿದ್ರು. ಈಗೀಗ ಬಾಲ ಮತ್ತೆ ಚಿಗುರುತ್ತಿದೆ ಎಂದು ಶೆಟ್ಟರ್‌ಗೆ ಕುಟುಕಿದರು

ಪ್ರಿಯಾಂಕಾ ಜಾರಕಿಹೊಳಿಗೆ ಭಾಷಣದ ಕೊರತೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಸವದಿ, ನನಗೂ ಕೂಡ 2004ರಲ್ಲಿ ಮಾತನಾಡುವುದಕ್ಕೆ ಬರುತ್ತಿರಲಿಲ್ಲ. ಅನುಭವ ನಂತರ ಮಾತನಾಡುವುದನ್ನು ಕಲಿತೆ. ಮೋದಿಯವರಿಗೂ ಚಿಕ್ಕವರು ಇದ್ದಾಗ ಮಾತನಾಡೋಕೆ ಬರುತ್ತಿರಲಿಲ್ಲ. ಈಗ ಅನುಭವದಿಂದ ಮಾತನಾಡ್ತಾರೆ. ಇನ್ನು ಜಗದೀಶ್ ಶೆಟ್ಟರ್ ಬೆಳಗಾವಿ ಬಿಜೆಪಿ ಅಭ್ಯರ್ಥಿಯಾಗಿರುವ ವಿಚಾರ ಪ್ರಸ್ತಾಪಿಸಿ, ಶೆಟ್ಟರ್ ಬೆಳಗಾವಿ ಬಂದಿದ್ದಾರೆ ಲೋಕಸಭಾ ಚುನಾವಣೆ ನಂತರ ಮತ್ತೆ ಹುಬ್ಬಳ್ಳಿಗೆ ಹೋಗುತ್ತಾರೆ ಎನ್ನುವ ಮೂಲಕ ಬಿಜೆಪಿ ಅಭ್ಯರ್ಥಿ ಸೋಲು ಖಚಿತ ಎಂದರು.

ಬಿಜೆಪಿಯಲ್ಲಿ ತಮ್ಮದೇ ಪಕ್ಷದ ಅಭ್ಯರ್ಥಿ ಸೋಲಿಗೆ ತಂತ್ರ ಮಾಡುತ್ತಿದ್ದಾರೆ. ಬಿಜೆಪಿ ಈಗ ಒಂದು ಮನೆ ಮೂರು ಬಾಗಿಲು ಎಂಬಂತಾಗಿದೆ. ಸದಾನಂದಗೌಡ ಒಂದು ಕಡೆ, ಈಶ್ವರಪ್ಪ ಒಂದು ಕಡೆ, ಇನ್ನೂ ಬೇರೆ ಬೇರೆ ಆಗಿದೆ ಎಂದು ಲೇವಡಿ ಮಾಡಿದರು.

ನಾನು ಮತ್ತೆ ಬಿಜೆಪಿಗೆ ಹೋಗುವ ಅಗತ್ಯವಿಲ್ಲ: ಶಾಸಕ ಲಕ್ಷ್ಮಣ ಸವದಿ ಸ್ಪಷ್ಟನೆ 

ಬಿಜೆಪಿ ವಿರುದ್ಧ ಕಿಡಿ:

ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುದಾನ ಕೇಳಿದ್ರೆ ನನಗೆ ವಿಷ ಕುಡಿಯಲು ಹಣವಿಲ್ಲ. ಅನುದಾನ ಎಲ್ಲಿಂದ ತರಲಿ ಎಂದಿದ್ದರು. ಬಿಜೆಪಿಯವರಿಗೆ ಹತ್ತು ವರ್ಷಗಳ ಕಾಲ ಅಧಿಕಾರದಲ್ಲಿದ್ರು. ಕರ್ನಾಟಕವನ್ನು ಗುಜರಾತ್ ಮಾದರಿಯಲ್ಲಿ ಅಭಿವೃದ್ಧಿಪಡಿಸುತ್ತೇವೆ ಎಂದು ಹೇಳಿದ್ರು. ಆದರೆ ಗುಜರಾತ್ ಅಭಿವೃದ್ಧಿ ಇಲ್ಲ, ಇರುವ ಯೋಜನೆಗಳಿಗೆ ಅನುದಾನವೂ ಕೊಡಲಿಲ್ಲ. ಆದರೆ ಅಭಿವೃದ್ಧಿಯಾಗಿದೆ ಎಂದು ಬಿಜೆಪಿಯವರು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Latest Videos
Follow Us:
Download App:
  • android
  • ios