ಕೇಸರಿ ಪಡೆಗೆ ಮತ್ತೆ ಲೋಕ ಸವಾಲು ಅಸೆಂಬ್ಲಿ ಚುನಾವಣೆ ಗೆದ್ದ ಕಾಂಗ್ರೆಸ್‌ಗೆ ಹುಮ್ಮಸ್ಸು

ಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತೇನೆ ಎಂದು ನಂಬಿ, ಧೂಳೀಪಟವಾಗಿದ್ದ ಭಾರತೀಯ ಜನತಾ ಪಾರ್ಟಿಗೆ ಇದೀಗ ಮತ್ತೊಂದು ಸವಾಲು ಎದುರಾಗಿದೆ. ಲೋಕಸಭಾ ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿಯಿದೆ. ಹೀಗಾಗಿ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಆದರೆ, ಕೇಸರಿಪಡೆಗೆ ಮತ್ತೆ ಹಿನ್ನಡೆಯಾಗುವ ಆತಂಕಗಳು ಎದುರಾಗುತ್ತಿದ್ದು, ನಾಯಕರಿಗೆ ಬಿಸಿತುಪ್ಪವಾಗಿದೆ.

Lok Sabha Election 2024 BJP has faced a challenge again at belgum rav

ಶ್ರೀಶೈಲ ಮಠದ

ಬೆಳಗಾವಿ (ಜು.20) ಕಳೆದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಬೀಗುತ್ತೇನೆ ಎಂದು ನಂಬಿ, ಧೂಳೀಪಟವಾಗಿದ್ದ ಭಾರತೀಯ ಜನತಾ ಪಾರ್ಟಿಗೆ ಇದೀಗ ಮತ್ತೊಂದು ಸವಾಲು ಎದುರಾಗಿದೆ. ಲೋಕಸಭಾ ಚುನಾವಣೆ ಇನ್ನು ಕೆಲವೇ ತಿಂಗಳು ಬಾಕಿಯಿದೆ. ಹೀಗಾಗಿ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿವೆ. ಆದರೆ, ಕೇಸರಿಪಡೆಗೆ ಮತ್ತೆ ಹಿನ್ನಡೆಯಾಗುವ ಆತಂಕಗಳು ಎದುರಾಗುತ್ತಿದ್ದು, ನಾಯಕರಿಗೆ ಬಿಸಿತುಪ್ಪವಾಗಿದೆ.

ರಾಜ್ಯದಲ್ಲೇ ಬೆಂಗಳೂರನ್ನು ಹೊರತುಪಡಿಸಿದರೆ ಬೆಳಗಾವಿ ಅತೀ ದೊಡ್ಡ ಜಿಲ್ಲೆಯಾಗಿದೆ. 18 ವಿಧಾನಸಭಾ ಕ್ಷೇತ್ರಗಳು, ಎರಡು ಸಂಪೂರ್ಣ ಲೋಕಸಭಾ ಕ್ಷೇತ್ರಗಳಿದ್ದು, ಖಾನಾಪುರ ಮತ್ತು ಚ.ಕಿತ್ತೂರು ಕೆನರಾ ಲೋಕಸಭೆಗೆ ಒಳಪಟ್ಟಿವೆ. ಪ್ರಸ್ತುತ ಮೂರು ಲೋಕಸಭಾ ಕ್ಷೇತ್ರಗಳು ಬಿಜೆಪಿ ಪಾಲಾಗಿವೆ. ಮುಂಬರಲಿರುವ ಚುನಾವಣೆಯಲ್ಲಿ ಇದೆ ಪರಿಸ್ಥಿತಿ ಮುಂದುವರೆಯುತ್ತದೆ ಎಂದು ಹೇಳುವುದು ತೀರಾ ಕಷ್ಟವಾಗಿದೆ. ಏಕೆಂದರೆ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11 ಕ್ಷೇತ್ರ ಕೈ ವಶವಾಗಿದ್ದರೆ, 7 ಕ್ಷೇತ್ರದಲ್ಲಿ ಬಿಜೆಪಿ ವಶದಲ್ಲಿವೆ. ಸದ್ಯ ಬೆಳಗಾವಿ, ಚಿಕ್ಕೋಡಿ ಮತ್ತು ಕೆನರಾ ಲೋಕಸಭಾ ಕ್ಷೇತ್ರಗಳೂ ಕೇಸರಿಪಡೆ ಹಿಡಿತದಲ್ಲಿವೆ. ಆದರೆ, ಸದ್ಯ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯಗಳನ್ನು ಮಾಡುತ್ತಿದೆ. ಅಲ್ಲದೆ, ಸದ್ಯದ ರಾಜಕೀಯ ಬೆಳವಣಿಗೆಗಳು ಬಿಜೆಪಿಗೆ ಲೋಕಸಭಾ ಭಾರೀ ಸವಾಲು ತಂದೊಡ್ಡಲಿದೆ.

ನಮಗೆ ಸಿದ್ಧಾಂತಕ್ಕಿಂತ ರಾಜ್ಯದ ಹಿತ ಮುಖ್ಯ; ಮೈತ್ರಿ ಆಯ್ಕೆ ಮುಕ್ತವಾಗಿರಿಸಿದ್ದೇವೆ: ಎಚ್‌ಡಿಕೆ

ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿರುವ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೂ ಸಿದ್ಧತೆ ನಡೆಸುತ್ತಿದೆ. ಮತ್ತೊಮ್ಮೆ ಗೆಲುವಿಗೆ ಶತಾಯ- ಗತಾಯ ಪ್ರಯತ್ನ ಮಾಡುತ್ತಿದೆ. ಅದಕ್ಕಾಗಿ ಬಿಜೆಪಿ ಭದ್ರಕೋಟೆಗೆ ನುಗ್ಗಲು ಕೂಡ ಯತ್ನಿಸುತ್ತಿದೆ. ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲು ಸಿದ್ಧತೆ ನಡೆದಿದೆ. ಅಲ್ಲದೇ, ಪಕ್ಷದ ಹೈಕಮಾಂಡ್‌ ಸೂಚನೆ ನೀಡಿದರೆ ಲೋಕಸಭಾ ಕ್ಷೇತ್ರದಿಂದ ತಾವೇ ಸ್ಪರ್ಧಿಸುವುದಾಗಿ ಸತೀಶ ಜಾರಕಿಹೊಳಿ ಹೇಳಿಕೆ ನೀಡಿರುವುದು ಜಿಲ್ಲಾ ರಾಜಕೀಯದಲ್ಲಿಯೂ ತೀವ್ರ ಸಂಚಲನ ಮೂಡಿಸಿದೆ.

ಯಾರಿಗೆ ಸಿಗಬಹುದು ಟಿಕೆಟ್‌?:

ಬಿಜೆಪಿ ಕಳೆದ ವಿಧಾನಸಭೆ ಚುನಾವಣೆಯಂತೆಯೇ ಲೋಕಸಭಾ ಚುನಾವಣೆಯಲ್ಲಿಯೂ ಹೊಸ ಮುಖಗಳಿಗೆ ಮಣೆ ಹಾಕುತ್ತದೆಯೇ? ಹಾಲಿ ಸಂಸದರಿಗೆ ಸ್ಪರ್ಧಿಸಲು ಟಿಕೆಟ್‌ ನೀಡುತ್ತದೆಯೋ? ಇಲ್ಲವೋ? ಹೊಸ ಮುಖಕ್ಕೆ ಟಿಕೆಟ್‌ ನೀಡುವುದಾದರೆ ಯಾರಿಗೆ ನೀಡಬೇಕು ಎನ್ನುವುದರ ಬಗ್ಗೆ ಕೇಸರಿ ಪಡೆಯಲ್ಲಿ ತೀವ್ರ ಚರ್ಚೆ ಶುರುವಾಗಿದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಹಾಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮತ್ತೊಮ್ಮೆ ಬಿಜೆಪಿಯಿಂದ ಸ್ಪರ್ಧೆ ಬಯಸಿದ್ದಾರೆ. ಆದರೆ, ಅಲ್ಲಿನ ಬಿಜೆಪಿ ಕಾರ್ಯಕರ್ತರು ಕುಟುಂಬ ರಾಜಕಾರಣಕ್ಕೆ ಮನ್ನಣೆ ನೀಡದೇ ಹೊಸ ಮುಖಗಳಿಗೆ ಟಿಕೆಟ್‌ ನೀಡಬೇಕೆಂಬ ಬೇಡಿಕೆಯನ್ನು ಇಟ್ಟಿದ್ದಾರೆ ಎನ್ನಲಾಗಿದೆ.

ಬೆಳಗಾವಿ ಹಾಲಿ ಸಂಸದೆ ಮಂಗಲ ಅಂಗಡಿ ಅವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತಮ್ಮ ಬಿಗರಾದ ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪರವಾಗಿ ಹೇಳಿಕೆ ನೀಡಿ, ಶೆಟ್ಟರ್‌ ಅವರು ಗೆದ್ದೆ ಗೆಲ್ಲುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವುದು ಬಿಜೆಪಿಯಲ್ಲೇ ಅಚ್ಚರಿಗೆ ಕಾರಣವಾಗಿತ್ತು. ಹೀಗಾಗಿ ಮಂಗಲ ಅಂಗಡಿ ಅವರ ಮುಂದಿನ ರಾಜಕೀಯ ನಡೆ ಏನು ಎನ್ನುವುದು ಕೂಡ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿಗೆ ಸಾರಥ್ಯದ ಕೊರತೆ:

ವಿಧಾನಸಭಾ ಚುನಾವಣೆ ವೇಳೆ ಹಾಲಿ ಶಾಸಕರಿಗೆ ಕೈಕೊಟ್ಟು ಹೊಸಮುಖಗಳಿಗೆ ಟಿಕೆಟ್‌ ನೀಡಿದ್ದ ಬಿಜೆಪಿಗೆ ಈಗ ಸಂಕಷ್ಟಎದುರಾಗಿದೆ. ಬೆಳಗಾವಿ ಉತ್ತರ, ರಾಮದುರ್ಗ ಕ್ಷೇತ್ರದ ಬಿಜೆಪಿ ಹಾಲಿ ಶಾಸಕರಿಗೆ ಕೈಕೊಟ್ಟು ಅನ್ಯರಿಗೆ ಟಿಕೆಟ್‌ ನೀಡಲಾಗಿತ್ತು. ಬಿಜೆಪಿ ಸೋತಿರುವ ಕ್ಷೇತ್ರಗಳಲ್ಲಿ ಬಿಜೆಪಿ ಬಲ ಕುಸಿದಿದೆ. ಈ ಕ್ಷೇತ್ರಗಳಲ್ಲಿ ಬಿಜೆಪಿ ಸಾರಥ್ಯವೇ ಇಲ್ಲವಾಗಿದೆ. ಬೆಳಗಾವಿ ಉತ್ತರದ ಮಾಜಿ ಶಾಸಕ ಅನಿಲ ಬೆನಕೆ, ರಾಮದುರ್ಗ ಮಾಜಿ ಶಾಸಕ ಮಹಾದೇವಪ್ಪ ಯಾದವಾಡ ಬಿಜೆಪಿ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಅಲ್ಲದೇ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಹೊಸಮುಖಕ್ಕೆ ಅವಕಾಶ ನೀಡಿರುವುದು ಬಿಜೆಪಿ ಪ್ರಬಲ ಟಿಕೆಟ್‌ ಆಕಾಂಕ್ಷಿಗಳಾಗಿದ್ದ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಧನಂಜಯ ಜಾಧವ ಅವರು ಕೂಡ ಪಕ್ಷದಲ್ಲಿ ಅಷ್ಟಕ್ಕಷ್ಟೇ ಎನ್ನುವಂತಾಗಿದೆ. ಇನ್ನು ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಸುಳಿವೇ ಇಲ್ಲದಾಗಿದೆ. ಹಾಗಾಗಿ, ಬಿಜೆಪಿ ಸೋತಿರುವ ಕ್ಷೇತ್ರಗಳಲ್ಲಿ ನಾಯಕತ್ವ ಕೊರತೆಯೂ ಸೃಷ್ಟಿಯಾಗಿದೆ. ಈ ಬೆಳವಣಿಗೆಗಳೂ ಕೂಡ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀಳುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ.

Karnataka Assembly Session: ಕಾಗದ ಎಸೆದವರಿಗೆ ಶಿಕ್ಷೆ ನೀಡದೆ ಚಹಾ ಕುಡಿಸಲೇ: ಸ್ಪೀಕರ್‌ ಕಿಡಿ

ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 11 ಕ್ಷೇತ್ರದಲ್ಲಿ ಕೈ, 7 ಕ್ಷೇತ್ರದಲ್ಲಿ ಬಿಜೆಪಿ.

ಸದ್ಯ ಬೆಳಗಾವಿ, ಚಿಕ್ಕೋಡಿ ಮತ್ತು ಕೆನರಾ ಲೋಕಸಭಾ ಕ್ಷೇತ್ರಗಳೂ ಕೇಸರಿಪಡೆ ಹಿಡಿತದಲ್ಲಿ.

ಸದ್ಯ ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಸಿದ್ಧತಾ ಕಾರ್ಯಗಳಲ್ಲಿ ತೊಡಗಿದೆ.

ಸದ್ಯದ ರಾಜಕೀಯ ಬೆಳವಣಿಗೆಗಳು ಬಿಜೆಪಿಗೆ ಲೋಕಸಭಾ ಭಾರೀ ಸವಾಲು ತಂದೊಡ್ಡಲಿದೆ.

Latest Videos
Follow Us:
Download App:
  • android
  • ios