ಲೋಕಸಭಾ ಚುನಾವಣೆ ಸನಿಹದಲ್ಲಿ ಬಿಜೆಪಿಗೆ ಆಘಾತ; ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರನ್ನೇ ಸೋಲಿಸಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಬೆಂಗಳೂರು (ಮಾ.27): ರಾಜ್ಯದಲ್ಲಿ ತನ್ನದೇ ರಾಜಕೀಯ ವರ್ಚಸ್ಸನ್ನು ಹೊಂದಿರುವ ಹಾಗೂ ಮಾಜಿ ಪ್ರಧಾನಮಂತ್ರಿ, ಕರ್ನಾಟಕ ರಾಜಕೀಯ ಚಾಣಾಕ್ಷ ಹೆಚ್.ಡಿ. ದೇವೇಗೌಡರನ್ನೇ ಚುನಾವಣೆಯಲ್ಲಿ ಸೋಲಿಸಿದ್ದ ಬಿಜೆಪಿ ನಾಯಕಿ ಡಾ. ತೇಜಸ್ವಿನಿ ಗೌಡ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ತಮಗೆ ಲೋಕಸಭಾ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರೂ, ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ತಮ್ಮ ಪರಿಷತ್ ಸ್ಥಾನದ ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಸಲ್ಲಿಕೆ ಮಾಡಿ, ಬಿಜೆಪಿಗೆ ಶಾಕ್ ನೀಡಿದ್ದಾರೆ.
ಬಿಜೆಪಿಯಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿರುವ ತೇಜಸ್ವಿನಿ ಗೌಡ ಎಲ್ಲೆಡೆಯೂ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದರು. ಎಲ್ಲಿಯೂ ಕೂಡ ಬಿಜೆಪಿಗೆ ಮುಜುಗರವಾಗಿವಂತೆ ನಡೆದುಕೊಂಡಿರಿಲಿಲ್ಲ. ಆದರೆ, ಇವರ ಅಧಿಕಾರಾವಧಿ ಜೂನ್ ವೇಳೆಗೆ ಕೊನೆಗೊಳ್ಳಲಿದೆ. ಮುಂಬರುವ ರಾಜ್ಯದ ಮಳೆಗಾಲದ ಅಧಿವೇಶನದ ಮುನ್ನವೇ ಅಧಿಕಾರ ಮುಗಿದು ಹೋಗಲಿದೆ. ಆದ್ದರಿಂದ ಇತ್ತೀಚೆಗೆ ನಡೆದ ಬಜೆಟ್ ಅಧಿಬವೇಶನದಲ್ಲಿ ಭಾವುಕರಾಗಿ ವಿದಾಯ ಭಾಷಣವನ್ನೂ ಮಾಡಿದ್ದರು. ಆದರೂ, ಅವರ ಅವಧಿ ಪೂರ್ಣಗೊಳ್ಳಲು ಇನ್ನೂ 3 ತಿಂಗಳು ಬಾಕಿಯಿರುವ ಮುನ್ನವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಈ ಬೆಳವಣಿಗೆ ಲೋಕಸಭಾ ಚುನಾವಣೆ ಹೊಸ್ತಲಿನಲ್ಲಿ ಬಿಜೆಪಿಗೆ ಆಘಾತವನ್ನೂ ನೀಡಲಿದೆ ಎಂದು ಹೇಳಲಾಗುತ್ತಿದೆ.
ಮುನಿಯಪ್ಪ ಅಳಿಯನಿಗೆ ಟಿಕೆಟ್?: ಸಚಿವ ಎಂ.ಸಿ.ಸುಧಾಕರ್ ಸೇರಿ, ಐವರು ಶಾಸಕರ ರಾಜಿನಾಮೆ?
'ಇನ್ನು ತೇಜಸ್ವಿನಿ ಗೌಡ ಅವರು ಬುಧವಾರ ಬೆಳಗ್ಗೆ ವಿಧಾನಸೌಧಕ್ಕೆ ಬಮದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಕಚೇರಿಗೆ ತೆರಳಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಅವರ ರಾಜೀನಾಮೆ ಪತ್ರವನ್ನು ಸಭಾಪತಿ ಬಸವರಾಜ ಹೊರಟ್ಟಿ ಅವರು ಕೂಡ ಅಂಗೀಕಾರ ಮಾಡಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ ಅವರಿ, ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಅವರು ರಾಜೀನಾಮೆ ಕೊಟ್ಟಿದ್ದು, ಅಂಗೀಕಾರ ಮಾಡಿದ್ದೇನೆ. ಪರಿಷತ್ ಸದಸ್ಯರು ರಾಜೀನಾಮೆ ಸಲ್ಲಿಸಬಹುದು, ಇದಕ್ಕೆ ಸ್ಪಷ್ಟ ಕಾರಣ ಕೊಡಲೇಬೇಕು ಎಂದು ನಿಯಮವಿಲ್ಲ ಎಂದು ತಿಳಿಸಿದರು.
ಎಚ್.ಡಿ.ಕುಮಾರಸ್ವಾಮಿ ನಿವಾಸಕ್ಕೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ!
ಬಿಜೆಪಿ ಲೋಕಾ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ: ಇನ್ನು ವಿಧಾನ ಪರಿಷತ್ ಅವಧಿ ಮೂರು ತಿಂಗಳಿಗೆ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದರು. ತಮಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಆದರೆ, ಎಲ್ಲಿಯೂ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ನು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ಕೊಡುತ್ತಾರಾ ಅಥವಾ ತಟಸ್ಥವಾಗಿರುತ್ತಾರಾ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.