Asianet Suvarna News Asianet Suvarna News

ನಾನೊಬ್ಬನೇ ಅಭ್ಯರ್ಥಿಗಳ ಆಯ್ಕೆಮಾಡಲು ಸಾಧ್ಯವಿಲ್ಲ: ಈಶ್ವರಪ್ಪಗೆ ವಿಜಯೇಂದ್ರ ತಿರುಗೇಟು

ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

Lok sabha election 2024 BY vijayendra stats about bjp ticket choice rav
Author
First Published Mar 19, 2024, 4:20 AM IST

ಶಿವಮೊಗ್ಗ (ಮಾ.19): ಲೋಕಸಭಾ ಚುನಾವಣೆಗೆ ಬಿಜೆಪಿ ರಾಜ್ಯಾಧ್ಯಕ್ಷನ್ನಾಗಿ ನಾನೊಬ್ಬನೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಸಾಧ್ಯವಿಲ್ಲ. ನನ್ನಬ್ಬೊನ ಮಾತು ಕೇಳುವ ಸ್ಥಿತಿಯಲ್ಲಿ ರಾಷ್ಟ್ರೀಯ ನಾಯಕರಿಲ್ಲ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ ಎಂದು ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟಾಂಗ್ ನೀಡಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಘವೇಂದ್ರ ಅವರು ಅತಿ ಹೆಚ್ಚಿನ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ಅವರನ್ನು ಜನರು ಒಪ್ಪಿಕೊಳ್ಳುತ್ತಾರೆ. ಯಾರೇ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರೂ ಅದು ರಾಷ್ಟ್ರೀಯ ನಾಯಕರ ಆಯ್ಕೆ. ಈ ಹಿಂದೆ ಕೂಡ ವರುಣಾದಲ್ಲಿ ನನಗೆ ಟಿಕೆಟ್‌ ಕೈ ತಪ್ಪಿತ್ತು. ಆದರೆ, ಅದು ವರಿಷ್ಠರ ತೀರ್ಮಾನ ಎಂದುಕೊಂಡು ಪಕ್ಷದ ಕೆಲಸ ಮಾಡಿದ್ದೇನೆ. ಈಶ್ವರಪ್ಪನವರು ಹಿರಿಯರಿದ್ದಾರೆ. ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ. ಎಲ್ಲವು ಕೂಡ ಬಗೆಹರಿಯುತ್ತದೆ ಎಂದರು.

ಕರ್ನಾಟಕ ಬಿಜೆಪಿ ಒಂದು ವಂಶ, ಒಂದು ಕುಟುಂಬದ ಕಪಿಮುಷ್ಠಿಯಲ್ಲಿದೆ; ಕೆ.ಎಸ್. ಈಶ್ವರಪ್ಪ ಆರೋಪ

ಜೆಡಿಎಸ್ ಮೈತ್ರಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಏನು ಚರ್ಚೆ ಆಗಿದಿಯೋ ಗೊತ್ತಿಲ್ಲ. ಸೀಟ್ ಶೇರಿಂಗ್ ವಿಚಾರವಾಗಿ ಎಲ್ಲವು ಬಗೆಹರಿಯುತ್ತದೆ. ಯಾರು ಅಭ್ಯರ್ಥಿ ಆಗಿ ತೀರ್ಮಾನ ಆಗಿದಿಯೋ ಅದು ರಾಷ್ಟ್ರೀಯ ನಾಯಕರ ತೀರ್ಮಾನ. ಅದಕ್ಕೆ ಗೌರವ ಕೊಡಬೇಕಾಗುತ್ತದೆ ಎಂದು ತಿಳಿಸಿದರು.

Follow Us:
Download App:
  • android
  • ios