ಲೋಕಸಭಾ ಚುನಾವಣೆಗೆ ನಿನ್ನೆಯಷ್ಟೇ ದಿನಾಂಕ ಘೋಷಣೆಯಾಗಿದೆ. ಮತದಾನದ ದಿನಾಂಕ ಘೊಷಣೆಯಾಗ್ತಿದ್ದಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಈ ನಡುವೆ ರಾಮನಗರದ ಮರಳವಾಡಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತದಾರರಿಗೆ ಕುಕ್ಕರ್ ಹಂಚುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಮನಗರ (ಮಾ.17): ಬೇಸಗೆ ಬಿಸಿಲು ಏರಿದಂತೆ ಲೋಕಸಭಾ ಚುನಾವಣೆ ಕಾವು ಸಹ ಏರುತ್ತಿದೆ. ಚುನಾವಣಾ ಆಯೋಗ ನಿನ್ನೆಯಷ್ಟೇ ಮತದಾನದ ದಿನಾಂಕ ಘೋಷಣೆ ಮಾಡಿದೆ. ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ರಾಜ್ಯದಲ್ಲೂ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ರಾಜಕೀಯ ಪಕ್ಷದ ಬ್ಯಾನರ್, ಫ್ಲೆಕ್ಸ್‌ಗಳನ್ನು ತೆರವುಗಳಿಸುತ್ತಿದ್ದಾರೆ. ನಗರದ ಮುಖ್ಯ ರಸ್ತೆಗಳಲ್ಲಿ ಬ್ಯಾರಿಕೇಡ್ ಹಾಕಿ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ನಡುವೆ ಕಾಂಗ್ರೆಸ್‌ನಿಂದ ಮತದಾರರಿಗೆ ಕುಕ್ಕರ್ ತವಾ ಹಂಚಿಕೆ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದಿದೆ.

ಕಾಂಗ್ರೆಸ್‌ಗೂ ಕುಕ್ಕರ್‌ಗೂ ಅದೇನೋ ಅವಿನಾಭಾವ ಸಂಬಂಧ ಇದ್ದಂತೆ ಕಾಣುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಹ ಕಾಂಗ್ರೆಸ್‌ ಕುಕ್ಕರ್ ಭಾರೀ ಸದ್ದು ಮಾಡಿತ್ತು. ಇದೀಗ ನೀತಿ ಸಂಹಿತೆ ಜಾರಿ ಬೆನ್ನಲ್ಲೇ ಮತದಾರರಿಗೆ ಹಂಚಿಕೆ ಮಾಡಲು ಕುಕ್ಕರ್ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ವಾಹನವನ್ನು ತಡೆಹಿಡಿದ ಘಟನೆ ಹಾರೋಹಳ್ಳಿ ತಾಲೂಕಿನ ಮರಳವಾಡಿ ಗ್ರಾಮದ ಬಳಿ ನಡೆದಿದೆ.

ದ.ಕ ಜಿಲ್ಲೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಪುತ್ತೂರಿನ ಹಿಂದೂ ಮುಖಂಡ ಅರುಣ್ ಪುತ್ತಿಲ ಬಿಜೆಪಿ ಸೇರ್ಪಡೆಗೆ ಒಪ್ಪಿಗೆ!

ಲೋಕಸಭಾ ಚುನಾವಣೆಗೆ ಮತ ಹಾಕಲು ಮತದಾರರಿಗೆ ಆಮಿಷೆ ಒಡ್ಡಿದ್ದಾರೆ. ಮರಳವಾಡಿ ಗ್ರಾಮದಲ್ಲಿ ಮನೆಮನೆಗೆ ಕುಕ್ಕರ್ ಹಂಚಲಾಗುತ್ತಿದೆ ಎಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ನಿನ್ನೆ ಸಂಜೆ ವಾಹನದಲ ಕುಕ್ಕರ್ ಸಾಗಿಸುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ವಾಹನ ತಡೆಹಿಡಿದಿದ್ದಾರೆ. ಈ ಬಗ್ಗೆ ತಹಶೀಲ್ದಾರ್ ಗೆ ದೂರು ನೀಡಿರುವ ಜೆಡಿಎಸ್ ಕಾರ್ಯಕರ್ತರು. ಕುಕ್ಕರ್ ಗಿಫ್ಟ್ ಬಾಕ್ಸ್ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಸಂಸದ ಡಿಕೆ ಸುರೇಶ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಭಾವಚಿತ್ರ ಅಂಟಿಸಲಾಗಿದೆ.

ಜಮೀನು ವಿವಾದ ಕಾಂಗ್ರೆಸ್ ಮುಖಂಡನ ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ!

ಮರಳವಾಡಿ ಗ್ರಾಮದಲ್ಲಿ ಮನೆಮನೆಗೆ ಕಾಂಗ್ರೆಸ್ ಕುಕ್ಕರ್ ಹಂಚುತ್ತಿರುವ ಬಗ್ಗೆ ಸಾಕ್ಷ್ಯ ಸಮೇತ ತಹಸೀಲ್ದಾರರಿಗೆ ಕರೆ ಮಾಡಿ ದೂರು ಕೊಟ್ಟರೂ ಇದುವರೆಗೆ ಸ್ಥಳಕ್ಕೆ ಬಂದಿಲ್ಲ ಎಂದು ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.