ನೀತಿ ಸಂಹಿತೆ ಜಾರಿ ಬೆನ್ನಲ್ಲೇ ನಡುರಸ್ತೆಯಲ್ಲಿ ಸರ್ಕಾರಿ ವಾಹನ ಬಿಟ್ಟು ಆಟೋದಲ್ಲಿ ಮನೆಗೆ ಹೊರಟ ಬೆಳಗಾವಿ ಮೇಯರ್!
ಇಂದು ಲೋಕಸಭ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೆಳಗಾವಿ ಮೇಯರ್ ನಡುರಸ್ತೆಯಲ್ಲೇ ಸರ್ಕಾರಿ ವಾಹನ ಬಿಟ್ಟು ಆಟೋದಲ್ಲಿ ಮನೆಗೆ ಹೊರಟ ಘಟನೆ ನಡೆದಿದೆ.
ಬೆಳಗಾವಿ (ಮಾ.16): ಇಂದು ಲೋಕಸಭ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ನೀತಿ ಸಂಹಿತೆಯೂ ಜಾರಿಯಾಗಿದೆ. ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೆಳಗಾವಿ ಮೇಯರ್ ನಡುರಸ್ತೆಯಲ್ಲೇ ಸರ್ಕಾರಿ ವಾಹನ ಬಿಟ್ಟು ಆಟೋದಲ್ಲಿ ಮನೆಗೆ ಹೊರಟ ಘಟನೆ ನಡೆದಿದೆ.
ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಸವಿತಾ ಕಾಂಬಳೆ. ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ನೀತಿ ಸಂಹಿತೆ ಜಾರಿಯಾಗುತ್ತಿದ್ದಂತೆ ಬೆಳಗಾವಿ ಕೊಲ್ಲಾಪುರ ವೃತ್ತದಲ್ಲಿ ಕಾರು ನಿಲ್ಲಿಸಿ ಒಂದಷ್ಟು ದೂರ ನಡೆದುಕೊಂಡೇ ಹೋದ ಮೇಯರ್ ಅಲ್ಲಿಂದ ಆಟೋ ಹತ್ತಿ ಮನೆಗೆ ತೆರಳಿದರು. ಸರ್ಕಾರಿ ವಾಹನಬಿಟ್ಟು ಮನೆಗೆ ಹೋಗುವ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದ್ದು, ಮೇಯರ್ ಸವಿತಾ ಕಾಂಬಳೆ ನಡೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಮಾರ್ಚ್ 28ರಂದು ಚುನಾವಣಾ ಅಧಿಸೂಚನೆ ಪ್ರಕಟ. ಏಪ್ರಿಲ್ 4ರವರೆಗೆ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿರುತ್ತದೆ. ಏಪ್ರಿಲ್ 5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಆ ಬಳಿಕ ಜೂನ್ 4ರಂದು ಮತಗಳ ಎಣಿಕೆ ನಡೆಯಲಿದೆ. ಜೂನ್ 6ಕ್ಕೆ ಚುನಾವಣೆ ಮುಕ್ತಾಯವಾಗಲಿದೆ.
ಅಭ್ಯರ್ಥಿ ಪರ ಪ್ರಚಾರಕ್ಕೆ ಬರಲು ಬಿಜೆಪಿ ಹೈಕಮಾಂಡ್‌ಗೆ 3 ಪ್ರಶ್ನೆ ಕೇಳಿದ ಸಂಗಣ್ಣ ಕರಡಿ!