Breaking: ಎನ್‌ಡಿಎಗೆ ಕಡಿಮೆ ಸ್ಥಾನ ಹಿನ್ನಲೆ, ಹೃದಯಾಘಾತದಿಂದ ವ್ಯಕ್ತಿ ಸಾವು
ಲೋಕಸಭೆ ಚುನಾವಣೆಯಲ್ಲಿ ಮೋದಿ ನೇತೃತ್ವದ ಎನ್‌ಡಿಎಗೆ ಕಡಿಮೆ ಸ್ಥಾನ ಬಂದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವು ಕಂಡಿದ್ದಾನೆ.
ಹುಬ್ಬಳ್ಳಿ (ಜೂ.4): ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಕಡಿಮೆ ಸ್ಥಾನಗಳು ಬಂದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಸಾವು ಕಂಡಿದ್ದಾನೆ. ಬೆಳಗಿನ ಆರಂಭಿಕ ಟ್ರೆಂಡ್‌ಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಕಡಿಮೆ ಸ್ಥಾನಗಳು ಬರುವ ಸೂಚನೆಗಳು ದೊರಕಿದ್ದವು. ಇದರ ಬೆನ್ನಲ್ಲಿಯೇ ಹೃದಯಾಘಾತದಿಂದ ವ್ಯಕ್ತಿ ಸಾವು ಕಂಡಿದ್ದಾರೆ. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿ ಘಟನೆ ನಡೆದಿದೆ. ಶಿವಪ್ರಕಾಶ್ ಹಿರೇಮಠ ಮತ ವ್ಯಕ್ತಿ. ಶಿವಪ್ರಕಾಶ್ ಕಟ್ಟಾ ಬಿಜೆಪಿ ಅಭಿಮಾನಿಯಾಗಿದ್ದ. ಮನೆಯಲ್ಲಿ ಬೆಳಗ್ಗೆ ಚುನಾವಣೆಯ ಫಲಿತಾಂಶ ನೋಡುವ ವೇಳೆಯೇ ಹೃದಯಾಘಾತವಾಗಿದೆ. ಟಿವಿ ನೋಡುತ್ತಿದ್ದಂತೆಯೇ ಅವರು ಕುಸಿದು ಬಿದ್ದಿದ್ದಾರೆ. ಮನೆಯ ಸೋಫಾ ಮೇಲೆ ಕುಳಿತು ಚುನಾವಣಾ ರಿಸಲ್ಟ್ ನೋಡುವಾಗಲೇ ಅವರಿಗೆ ಹೃದಯಾಘಾತವಾಗಿದೆ. ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಅವರಿಗೆ ಹೃದಯಾಘಾತವಾಗಿದೆ.
ಬಿಜೆಪಿ ಮೈತ್ರಿಕೂಟಕ್ಕೆ ಕಡಿಮೆ ಫಲಿತಾಂಶ ಹಿನ್ನೆಲೆಯಲ್ಲಿ ಅವರು ನೊಂದಿದ್ದರು. ಆರಂಭಿಕ ಟ್ರೆಂಡ್‌ನಲ್ಲಿ ಎನ್‌ಡಿಎ ಮೂರುನೂರು ಗಡಿ ದಾಟಲಿಲ್ಲ ಎಂದುಕೊಂಡು ಸುದ್ದಿ ತಿಳಿದು ಹೃದಯಾಘಾತವಾಗಿತ್ತು.
ದೇಶದ 18ನೇ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 2 ಹಂತದ ಮತದಾನ ನಡೆದಿದೆ. ಮೊದಲ ಹಂತದಲ್ಲಿ ಏ.26ರಂದು 14 ಕ್ಷೇತ್ರಗಳಾದ ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲಿ ಮತದಾನವಾಗಿದೆ. ಎರಡನೇ ಹಂತದಲ್ಲಿ ಮೇ 7ರಂದು ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಸೇರಿ 14 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ರಾಜ್ಯದಲ್ಲಿ ಒಟ್ಟು 5,47,25,675 ಮತದಾರರಿದ್ದು, ಈ ಪೈಕಿ 3,86,57,725 ಜನರು ಮತದಾನ ಮಾಡುವ ಮೂಲಕ ಶೇ.70.64 ಜನರು ಮತ ಚಲಾಯಿಸಿದ್ದಾರೆ.
Live Blog: ಎನ್‌ಡಿಎ ಮೈತ್ರಿಕೂಟಕ್ಕೆ ಈ ಬಾರಿ ಸರಳ ಬಹುಮತ
ಮತದಾನ ನಡೆದ ಒಂದು ತಿಂಗಳ ಬಳಿಕ ಇಂದು (ಜೂ.4ರಂದು) ಫಲಿತಾಂಶ ಪ್ರಕಟವಾಗುತ್ತಿದೆ. ಇದರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಫಲಿತಾಂಶ ಅತ್ಯಂತ ಕುತೂಹಲವನ್ನು ಕೆರಳಿಸಿದೆ. ಮತ್ತೊಂದೆಡೆ ಮೈಸೂರಿನ ಮಹಾರಾಜರು ಸ್ಪರ್ಧಿಸಿದ ಕ್ಷೇತ್ರ, ಅಶ್ಲೀಲ ವಿಡಿಯೋ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿದ ಹಾಸನ ಲೋಕಸಭಾ ಕ್ಷೇತ್ರಗಳ ಫಲಿತಾಂಶದ ಮೇಲೆ ಹೆಚ್ಚು ಜನರ ಚಿತ್ತ ನೆಟ್ಟಿದೆ. ಸುಮಾರು 10ಕ್ಕೂ ಅಧಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರು ತಮ್ಮ ಸಹೋದರರು, ಮಕ್ಕಳು, ಪತ್ನಿಯರನ್ನು ಕಣಕ್ಕಿಳಿಸಿದ್ದು 2ನೇ ತಲೆಮಾರಿನ ರಾಜಕೀಯ ಬೆಳೆಸಲು ಮುಂದಡಿಯಿಟ್ಟಿದ್ದಾರೆ.
Live Blog: ಪೆನ್ ಡ್ರೈವ್ ಕಮಾಲ್, ಹಾಸನದಲ್ಲಿ ಪ್ರಜ್ವಲ್ ರೇವಣ್ಣಂಗೆ ಸೋಲು