ಲೋಕಸಭಾ ಚುನಾವಣೆಗೆ ಈಗಿನಿಂದಲೇ ಮೈ ಕೊಡವಿ ನಿಂತ ಬಿಎಸ್‌ವೈ; ರಾಜ್ಯ ಪ್ರವಾಸಕ್ಕೆ ರೆಡಿ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು 22ರಿಂದ 23 ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಆರಂಭಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯೂಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರು (ಸೆ.8) : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯು 22ರಿಂದ 23 ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ನಾನು ರಾಜ್ಯ ಪ್ರವಾಸ ಆರಂಭಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯೂಡಿಯೂರಪ್ಪ ಹೇಳಿದ್ದಾರೆ.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ನಿಮ್ಮ ಯಡಿಯೂರಪ್ಪ ಇವತ್ತಿನಿಂದ ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ. ರಾಜ್ಯದ ಉದ್ದಗಲಕ್ಕೆ ಓಡಾಡಿ ಹೋರಾಟ ಮಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ 22-23 ಸ್ಥಾನ ಗೆಲ್ಲಲು ಪ್ರಯತ್ನ ಮಾಡುತ್ತೇನೆ’ ಎಂದರು.
ಘರ್ ವಾಪಸಿ ತಡೆಗೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕರ ಆಯ್ಕೆ ಇವತ್ತು-ನಾಳೆಯೊಳಗೆ ಮಾಡುತ್ತೇವೆ. ವಿರೋಧ ಪಕ್ಷದ ನಾಯಕ ಇಲ್ಲ’ ಎಂದು ಕೆಲಸ ಕಾರ್ಯಗಳು ನಿಂತಿಲ್ಲ ಎಂದು ತಿಳಿಸಿದರು.
ಯಡಿಯೂರಪ್ಪ ಈ ಹಿಂದೆ ಜೈಲಿಗೆ ಹೋಗಲು ಬಿಜೆಪಿಗರೇ ಕಾರಣ ಎಂಬ ಮಾಜಿ ಶಾಸಕ ರೇಣುಕಾಚಾರ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ‘ನಾನು ಜೈಲಿಗೆ ಹೋಗಲು ಯಾರೂ ಯಾವುದೂ ಕಾರಣವಲ್ಲ. ಆ ಹೇಳಿಕೆ ಬಗ್ಗೆ ನಾನು ಚರ್ಚೆ ಮಾಡಲ್ಲ. ರೇಣುಕಾಚಾರ್ಯ ಜತೆಗೆ ಮಾತನಾಡಿದ್ದೇನೆ. ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಿಬೆಳೆಸಬೇಕು. ಈ ನಿಟ್ಟಿನಲ್ಲಿ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕು’ ಎಂದು ಹೇಳಿದರು.
Ghar Wapsii: ಕಾಂಗ್ರೆಸ್‌ಗೆ ಹೊರಟವರನ್ನು ತಡೆಯಲು ಬಿಜೆಪಿ ನಾಲ್ವರಿಗೆ ಹೊಣೆ!
ಒಬ್ಬ ಬಿಜೆಪಿ ಶಾಸಕನೂ ಕಾಂಗ್ರೆಸ್ ಹೋಗಲ್ಲ:
ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೇಳಲಾದ ಪ್ರಶ್ನೆಗೆ, ‘ಎಲ್ಲ ಶಾಸಕರ ಜತೆಗೆ ಮಾತನಾಡಿದ್ದೇನೆ. ಪಕ್ಷದ ಒಬ್ಬ ಶಾಸಕ ಕಾಂಗ್ರೆಸ್‌ಗೆ ಹೋಗಲ್ಲ. ರಾಜ್ಯ ಸರ್ಕಾರದ ವಿರುದ್ಧ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಲಿರುವ ಪಕ್ಷದ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ’ ಎಂದರು.